AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್?

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಅವರು ರಣವೀರ್ ಸಿಂಗ್ ಜೊತೆಗಿನ ‘ಡಾನ್ 3’ ವಿವಾದ ಬದಿಗಿಟ್ಟು ಮುಂದೆ ಸಾಗುತ್ತಿದ್ದಾರೆ. ಈಗ ಅವರು ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಐತಿಹಾಸಿಕ ಕಥಾಹಂದರ ಸಿನಿಮಾಗೆ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್?
Salman Khan, Farhan Akhtar
ಮದನ್​ ಕುಮಾರ್​
|

Updated on: Jun 18, 2026 | 5:20 PM

Share

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ.

ಕೇಳಿಬರುತ್ತಿರುವ ಮಾಹಿತಿ ನಿಜವಾಗಿದ್ದರೆ, ಇದು ಸಲ್ಮಾನ್ ಖಾನ್ ಮತ್ತು ಫರ್ಹಾನ್ ಅಖ್ತರ್ ಅವರ ಕಾಂಬಿನೇಷನ್‌ನ ಮೊದಲ ಸಿನಿಮಾವಾಗಲಿದೆ. ‘ಪಿಂಕ್‌ವಿಲ್ಲಾ’ ವರದಿಯ ಪ್ರಕಾರ, ಇದೊಂದು ಬೃಹತ್ ಮಟ್ಟದ ಐತಿಹಾಸಿಕ ಆ್ಯಕ್ಷನ್ ಡ್ರಾಮಾ ಆಗಿರಲಿದ್ದು, ಕಥೆಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಎರಡು ಭಾಗಗಳಲ್ಲಿ ಸಿನಿಮಾವನ್ನು ಕಟ್ಟಿ ಕೊಡುವ ಪ್ಲಾನ್ ನಡೆದಿದೆ.

ಸಿನಿಮಾ ಮೂಲಗಳ ಪ್ರಕಾರ, ಸಲ್ಮಾನ್ ಖಾನ್ ಮತ್ತು ಫರ್ಹಾನ್ ಅಖ್ತರ್ ಕಳೆದ ಒಂದು ತಿಂಗಳಿನಿಂದ ಆಗಾಗ ಭೇಟಿಯಾಗುತ್ತಿದ್ದು, ಈ ಪ್ರಾಜೆಕ್ಟ್ ಬಗ್ಗೆ ಚರ್ಚಿಸುತ್ತಿದ್ದಾರೆ. ಫರ್ಹಾನ್ ಅಖ್ತರ್ ಹೇಳಿದ ಕಥೆ ಮತ್ತು ಅದರ ಸ್ಕೇಲ್ ಸಲ್ಮಾನ್ ಖಾನ್‌ಗೆ ತುಂಬಾನೇ ಇಷ್ಟವಾಗಿದ್ದು, ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಮಾತುಕತೆ ಆರಂಭಿಕ ಹಂತದಲ್ಲಿದ್ದು, ಇನ್ನೂ ಅಧಿಕೃತ ಒಪ್ಪಂದಕ್ಕೆ ಸಹಿ ಹಾಕಬೇಕಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ‘ಎಕ್ಸೆಲ್ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿಬರಲಿದ್ದು, 2027ರ ಬೇಸಿಗೆಯಲ್ಲಿ ಶೂಟಿಂಗ್ ಆರಂಭವಾಗುವ ಸಾಧ್ಯತೆ ಇದೆ. ಪ್ರಸ್ತುತ ಸಲ್ಮಾನ್ ಖಾನ್ ಅವರ ಶೆಡ್ಯೂಲ್ ಸಖತ್ ಬ್ಯುಸಿಯಾಗಿದೆ. ಒಂದರ ಮೇಲೊಂದು ಸಿನಿಮಾವನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ

ಸದ್ಯ ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ನಿರ್ದೇಶನದ ಆ್ಯಕ್ಷನ್ ಎಂಟರ್ಟೈನರ್ ಚಿತ್ರದಲ್ಲಿ ಸಲ್ಮಾನ್ ನಟಿಸುತ್ತಿದ್ದಾರೆ. ಇದರಲ್ಲಿ ಸೌತ್ ಲೇಡಿ ಸೂಪರ್‌ಸ್ಟಾರ್ ನಯನತಾರಾ ನಾಯಕಿಯಾಗಿದ್ದಾರೆ. ಇದರ ಬೆನ್ನಲ್ಲೇ ‘ದಿ ಫ್ಯಾಮಿಲಿ ಮ್ಯಾನ್’ ಖ್ಯಾತಿಯ ರಾಜ್ ಮತ್ತು ಡಿಕೆ ಜೋಡಿಯ ಆ್ಯಕ್ಷನ್-ಕಾಮಿಡಿ ಸಿನಿಮಾದಲ್ಲಿ ಸಲ್ಮಾನ್ ನಟಿಸಲಿದ್ದಾರೆ. ನಿವೃತ್ತ ಸೂಪರ್‌ಹೀರೋ ಕಥೆ ಹೊಂದಿರುವ ಈ ಚಿತ್ರದ ಶೂಟಿಂಗ್ 2026ರ ಅಕ್ಟೋಬರ್ ಆಸುಪಾಸಿನಲ್ಲಿ ಆರಂಭವಾಗಲಿದೆ.

ಮತ್ತೊಂದೆಡೆ, ಅಪೂರ್ವ ಲಖಿಯಾ ನಿರ್ದೇಶನದಲ್ಲಿ ಅನೌನ್ಸ್ ಆಗಿದ್ದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಬಿಡುಗಡೆ ಸದ್ಯಕ್ಕೆ ತಡವಾಗುತ್ತಿದೆ. ಆ ಬಗ್ಗೆ ಮುಂದಿನ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ನಡುವೆ ಸಲ್ಮಾನ್ ಖಾನ್ ಅವರು ಫರ್ಹಾನ್ ಅಖ್ತರ್ ಜೊತೆ ಹೊಸ ಸಿನಿಮಾಗಾಗಿ ಮಾತುಕಥೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us