AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ವಿಕ್ರಮ್​’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ ಜೊತೆ ಸಲ್ಮಾನ್​ ಖಾನ್​ ಹೊಸ ಚಿತ್ರ?

Salman Khan | Lokesh Kanagaraj: ಸಲ್ಮಾನ್​ ಖಾನ್​ ಅವರ ಹೊಸ ಚಿತ್ರಕ್ಕೆ ಬಂಡವಾಳ ಹೂಡಲು ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಮುಂದೆ ಬಂದಿದೆ ಎನ್ನಲಾಗುತ್ತಿದೆ. ಆ ಪ್ರಾಜೆಕ್ಟ್​ಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಲಿದ್ದಾರೆ ಎಂದು ವರದಿ ಆಗಿದೆ.

Salman Khan: ‘ವಿಕ್ರಮ್​’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ ಜೊತೆ ಸಲ್ಮಾನ್​ ಖಾನ್​ ಹೊಸ ಚಿತ್ರ?
ಸಲ್ಮಾನ್ ಖಾನ್, ಲೋಕೇಶ್ ಕನಗರಾಜ್
TV9 Web
| Edited By: |

Updated on:Jul 19, 2022 | 7:22 AM

Share

ನಟ ಸಲ್ಮಾನ್​ ಖಾನ್​ (Salman Khan) ಅವರ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಹೇಳಿಕೊಳ್ಳುವಷ್ಟು ಯಶಸ್ಸು ಕಂಡಿಲ್ಲ. ‘ಅಂತಿಮ್​’, ‘ರಾಧೆ’ ಸಿನಿಮಾಗಳು ನೆಲ ಕಚ್ಚಿದವು. ಅದರಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಈಗ ಅವರು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಹಣೆಬರಹ ಏನಾಗಲಿದೆಯೋ ತಿಳಿದಿಲ್ಲ. ಆದರೆ ಮುಂದಿನ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸಲ್ಮಾನ್​ ಖಾನ್​ ಈಗಲೇ ಪ್ಲ್ಯಾನ್​ ಮಾಡುತ್ತಿದ್ದಾರೆ ಎನ್ನಲಾಗಿದೆ. ಸಲ್ಲುಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಅದಕ್ಕಾಗಿ ಅವರು ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿ ಕಡೆಗೆ ನೋಡುತ್ತಿ​ದ್ದಾರೆ. ಇಲ್ಲಿನ ತಂತ್ರಜ್ಞರು ಮತ್ತು ನಿರ್ಮಾಣ ಸಂಸ್ಥೆಯ ಸಹಕಾರದಿಂದ ಯಶಸ್ಸು ಕಾಣಬೇಕು ಎಂದು ಅವರು ನಿರ್ಧರಿಸಿದಂತಿದೆ. ಮೂಲಗಳ ಪ್ರಕಾರ ಅವರು ‘ವಿಕ್ರಮ್​’ (Vikram Movie) ಚಿತ್ರದ ನಿರ್ದೇಶಕ ಲೋಕೇಶ್​ ಕನಗರಾಜ್​ (Lokesh Kanagaraj) ಜೊತೆ ಕೈ ಜೋಡಿಸುವ ಸಾಧ್ಯತೆ ಹೆಚ್ಚಿದೆ.

ಈ ವರ್ಷ ತೆರೆಕಂಡ ‘ವಿಕ್ರಮ್​’ ಸಿನಿಮಾ ಮೂಲಕ ಲೋಕೇಶ್​ ಕನಗರಾಜ್​ ಅವರಿಗೆ ಭಾರಿ ಯಶಸ್ಸು ಸಿಕ್ಕಿದೆ. ಕಮಲ್​ ಹಾಸನ್​ ನಟನೆಯ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡರು. ಬಾಕ್ಸ್​ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್​ ಮಾಡುವ ಮೂಲಕ ಕಮಲ್​ ಹಾಸನ್​ ವೃತ್ತಿಬದುಕಿನ ದೊಡ್ಡ ಹಿಟ್​ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಯಿತು. ಈ ಯಶಸ್ಸಿನ ಬಳಿಕ ಲೋಕೇಶ್​ ಕನಗರಾಜ್​ ಅವರಿಗೆ ಹಲವು ಕಡೆಗಳಿಂದ ಆಫರ್​ ಬರುತ್ತಿದೆ.

ದಕ್ಷಿಣ ಭಾರತದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಜನಪ್ರಿಯವಾಗಿದೆ. ‘ಪುಷ್ಪ’, ‘ರಂಗಸ್ಥಲಂ’, ‘ಉಪ್ಪೇನಾ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಕೀರ್ತಿ ಈ ಸಂಸ್ಥೆಗೆ ಸಲ್ಲುತ್ತದೆ. ಈಗ ಸಲ್ಮಾನ್​ ಖಾನ್​ ನಟನೆಯ ಹೊಸ ಚಿತ್ರಕ್ಕೆ ಬಂಡವಾಳ ಹೂಡಲು ಈ ಸಂಸ್ಥೆ ಮುಂದೆ ಬಂದಿದೆ ಎನ್ನಲಾಗುತ್ತಿದೆ. ಅದೇ ಪ್ರಾಜೆಕ್ಟ್​ಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಲಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಲ್ಮಾನ್ ಖಾನ್​ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಸೆಲೆಬ್ರಿಟಿಗಳ ಜೊತೆಗೆ ಉತ್ತಮ ನಂಟು ಇದೆ. ಕಿಚ್ಚ ಸುದೀಪ್​, ‘ಮೆಗಾ ಸ್ಟಾರ್​’ ಚಿರಂಜೀವಿ​ ಮುಂತಾದ ನಟರ ಜೊತೆ ಅವರು ಒಡನಾಟ ಇಟ್ಟುಕೊಂಡಿದ್ದಾರೆ. ಚಿರಂಜೀವಿ ನಟನೆಯ ‘ಗಾಡ್​ ಫಾದರ್​’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಆ ಚಿತ್ರದ ಕೆಲಸಗಳ ನಿಮಿತ್ತ ಹೈದರಾಬಾದ್​ಗೆ ಬಂದಾಗಲೇ ‘ಮೈತ್ರಿ ಮೂವೀ ಮೇಕರ್ಸ್​’ ಜೊತೆ ಹೊಸ ಚಿತ್ರದ ಮಾತುಕಥೆ ನಡೆದಿದೆ ಎಂದು ವರದಿ ಆಗಿದೆ.

Published On - 7:22 am, Tue, 19 July 22

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು