58ನೇ ವಯಸ್ಸಿನಲ್ಲೂ ಹೇಗಿದೆ ನೋಡಿ ಸಲ್ಮಾನ್ ಖಾನ್ ಫಿಟ್ನೆಸ್​; ಇಲ್ಲಿದೆ ಫೋಟೋ

ಸಲ್ಮಾನ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡಿದ್ದಾರೆ. ಇದು ಅವರ ಚಿಂತೆಯನ್ನು ಹೆಚ್ಚು ಮಾಡಿದೆ. ಈ ಕಾರಣದಿಂದ ಅವರು ಈಗ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಅವರು ಬೀಸ್ಟ್ ಮೋಡ್​ನ ಆನ್ ಮಾಡಿದ್ದಾರೆ.

58ನೇ ವಯಸ್ಸಿನಲ್ಲೂ ಹೇಗಿದೆ ನೋಡಿ ಸಲ್ಮಾನ್ ಖಾನ್ ಫಿಟ್ನೆಸ್​; ಇಲ್ಲಿದೆ ಫೋಟೋ
ಸಲ್ಮಾನ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Sep 25, 2024 | 7:28 AM

ನಟ ಸಲ್ಮಾನ್ ಖಾನ್ ಅವರಿಗೆ ಈಗ 58 ವರ್ಷ ವಯಸ್ಸು. ಇನ್ನು ಕೆಲವೇ ತಿಂಗಳಲ್ಲಿ ಅವರು 59ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ವಯಸ್ಸಲ್ಲೂ ಅವರು ಫಿಟ್ನೆಸ್​ಗೆ ಆದ್ಯತೆ ನೀಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಸಿಖಂದರ್’ ಚಿತ್ರಕ್ಕಾಗಿ ಅವರು ಮಾಡಿಕೊಳ್ಳುತ್ತಿರುವ ಸಿದ್ಧತೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸಲ್ಮಾನ್ ಖಾನ್ ಅವರು ಸಖತ್ ಫಿಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡಿದ್ದಾರೆ. ಇದು ಅವರ ಚಿಂತೆಯನ್ನು ಹೆಚ್ಚು ಮಾಡಿದೆ. ಈ ಕಾರಣದಿಂದ ಅವರು ಈಗ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ಕಾರಣದಿಂದಲೇ ಇವರ ಜೊತೆ ಸಲ್ಲು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

‘ಸಿಖಂದರ್’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈ ರೀತಿಯ ಆ್ಯಕ್ಷನ್ ಇದೆ ಎನ್ನುವಾಗ ಸಾಕಷ್ಟು ಸಿದ್ಧತೆ ಬೇಕೇ ಬೇಕು. ದೇಹವನ್ನು ಹದಗೊಳಿಸುವ ಕಾರ್ಯದಲ್ಲಿ ಸಲ್ಮಾನ್ ಖಾನ್ ಅವರು ಬ್ಯುಸಿಯಾಗಿದ್ದಾರೆ. ಅವರ ಫಿಟ್ನೆಸ್ ಕಂಡು ಫ್ಯಾನ್ಸ್ ಕಣ್ಣರಳಿಸಿದ್ದಾರೆ. ಈ ಫೋಟೋ ಪೋಸ್ಟ್ ಆದ ಕೆಲವೇ ಗಂಟೆಗಳಲ್ಲಿ 8 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬೀಸ್ಟ್ ಮೋಡ್. ನಿರಂತರ ಶ್ರಮಕ್ಕೆ ಇದು ಒಳ್ಳೆಯ ಉದಾಹರಣೆ. ಬೇರೆಯದೇ ಹಂತದ ಸಮರ್ಪಣೆ’ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಲ್ಲು ವಯಸ್ಸು ಕಡಿಮೆ ಆಗುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಬೆಂಗಾವಲು ವಾಹನಕ್ಕೆ ಏಕಾಏಕಿ ನುಗ್ಗಿದ ಬೈಕ್ ಸವಾರ; ಮುಂದೇನಾಯ್ತು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಚಿತ್ರ ಮುಂದಿನ ವರ್ಷ ಈದ್​ಗೆ ಬಿಡುಗಡೆ ಹೊಂದಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ವರ್ಷ ಈದ್​ ದಿನದಂದು ಈ ಸಿನಿಮಾ ಘೋಷಣೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ