AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಹ್ಯಾಂಡ್​​ಶೇಕ್ ಮಾಡಲು ಬಂದ ಅಭಿಮಾನಿ; ಸಿಟ್ಟಿನಿಂದ ತಳ್ಳಿದ ಸಲ್ಲು ಬಾಡಿಗಾರ್ಡ್​

Salman Khan: ಹಬ್ಬ ಪೂರ್ಣಗೊಂಡ ಬಳಿಕ ಸಲ್ಮಾನ್ ಮುಂಬೈಗೆ ಮರಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅನೇಕರು ಮುಗಿಬಿದ್ದಿದ್ದಾರೆ.

ಸಲ್ಮಾನ್ ಖಾನ್​ಗೆ ಹ್ಯಾಂಡ್​​ಶೇಕ್ ಮಾಡಲು ಬಂದ ಅಭಿಮಾನಿ; ಸಿಟ್ಟಿನಿಂದ ತಳ್ಳಿದ ಸಲ್ಲು ಬಾಡಿಗಾರ್ಡ್​
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on:Apr 27, 2023 | 11:26 AM

Share

ಸಲ್ಮಾನ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ. ಅವರನ್ನು ಕೊಲ್ಲುವುದಾಗಿ ನಿರಂತರವಾಗಿ ಬೆದರಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಅವರು ಬುಲೆಟ್​ಪ್ರೂಫ್ ಕಾರನ್ನು ಕೂಡ ಖರೀದಿಸಿದ್ದಾರೆ. ಈಗ ಸಲ್ಮಾನ್ ಖಾನ್ (Salman Khan) ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರಿಗೆ ಹ್ಯಾಂಡ್​ಶೇಕ್ ಮಾಡಲು ಬಂದ ಅಭಿಮಾನಿಯನ್ನು ಬಾಡಿಗಾರ್ಡ್​​​ ಶೇರಾ (Shera) ತಳ್ಳಿದ್ದಾರೆ. ಈ ವಿಡಿಯೋಗೆ ಪಾಸಿಟಿವ್ ಹಾಗೂ ನೆಗೆಟಿವ್ ಕಮೆಂಟ್​ಗಳು ಬಂದಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಇತ್ತೀಚೆಗೆ ರಂಜಾನ್ ಆಚರಿಸಲಾಗಿದೆ. ಈ ಹಬ್ಬ ಆಚರಿಸಲು ಸಲ್ಮಾನ್ ಖಾನ್ ಅವರು ದುಬೈಗೆ ತೆರಳಿದ್ದರು. ಅಲ್ಲಿನ ಅಭಿಮಾನಿಗಳ ಜೊತೆ ಸಲ್ಲು ಹಬ್ಬ ಆಚರಿಸಿದ್ದಾರೆ ಎನ್ನಲಾಗಿದೆ. ಈ ಹಬ್ಬ ಪೂರ್ಣಗೊಂಡ ಬಳಿಕ ಅವರು ಮುಂಬೈಗೆ ಮರಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅನೇಕರು ಮುಗಿಬಿದ್ದಿದ್ದಾರೆ.

ಸಲ್ಮಾನ್ ಖಾನ್ ಅವರು ನಡೆದು ಬರುತ್ತಿದ್ದರು. ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದಿದ್ದರಿಂದ ಯಾರಿಗೂ ಸಲ್ಲುನ ಟಚ್ ಮಾಡೋಕೆ ಸಾಧ್ಯ ಆಗುತ್ತಿರಲಿಲ್ಲ. ಆಗ ಅಭಿಮಾನಿಯೋರ್ವ ಕೈ ಚಾಚಿದ್ದ. ಹ್ಯಾಂಡ್​ಶೇಕ್ ಮಾಡುವಂತೆ ಕೋರಿದ್ದ. ಹಿಂದಕ್ಕೆ ಹೋಗುವಂತೆ ಸಲ್ಮಾನ್ ಖಾನ್ ಸೂಚಿಸಿದರೂ ಅಭಿಮಾನಿ ಪ್ರಯತ್ನ ನಿಲ್ಲಿಸಿಲ್ಲ. ಆಗ ಸಲ್ಮಾನ್ ಖಾನ್ ಬಾಡಿ ಗಾರ್ಡ್ ಶೇರಾ ಅವರು ಅಭಿಮಾನಿಯನ್ನು ಹಿಂದಕ್ಕೆ ತಳ್ಳಿದ್ದಾರೆ.

ಸಲ್ಮಾನ್ ಖಾನ್ ಬಾಡಿಗಾರ್ಡ್ ನಡೆದುಕೊಂಡ ರೀತಿ ಒಂದಷ್ಟು ಜನರಿಗೆ ಇಷ್ಟವಾಗಿಲ್ಲ. ‘ಶೇರಾ ಈ ರೀತಿ ನಡೆದುಕೊಳ್ಳಬಾರದಿತ್ತು. ಅಭಿಮಾನಿಯನ್ನು ಶೇರಾ ತಳ್ಳುವಾಗ ಸಲ್ಲು ತಡೆಯಬಹುದಿತ್ತು’ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಶೇರಾ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ‘ಸಲ್ಮಾನ್ ಖಾನ್​ ಪ್ರಾಣಕ್ಕೆ ಕುತ್ತಿದೆ. ಹೀಗಾಗಿ, ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ’ ಎಂದು ಕೆಲವರು ಹೇಳಿದ್ದಾರೆ.

View this post on Instagram

A post shared by Voompla (@voompla)

ಇದನ್ನೂ ಓದಿ: ನೆಗೆಟಿವ್ ವಿಮರ್ಶೆ ಮಧ್ಯೆಯೂ ಎದ್ದು ನಿಂತ ಸಲ್ಮಾನ್ ಖಾನ್; ಭರ್ಜರಿ ಕಲೆಕ್ಷನ್ ಮಾಡಿದ ಸಲ್ಲು ಸಿನಿಮಾ

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಈದ್ ಪ್ರಯಕ್ತ ಏಪ್ರಿಲ್ 21ರಂದು ರಿಲೀಸ್ ಆಗಿದೆ. ಈ ಸಿನಿಮಾದ ಕಲೆಕ್ಷನ್ 100 ಕೋಟಿ ರೂಪಾಯಿ ಸಮೀಪಿಸಿದೆ. ಈ ಚಿತ್ರವನ್ನು ಬಾಕ್ಸ್ ಆಫೀಸ್ ಪಂಡಿತರು ಸಾಧಾರಣ ಗೆಲುವು ಎಂದು ಕರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Thu, 27 April 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ