AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬೆನ್ನಲ್ಲೇ ಸಲ್ಲು ಬಳಿ ಬಂತು ಬುಲೆಟ್​ಪ್ರೂಫ್ ಕಾರು; ಹೇಗಿದೆ ಗೊತ್ತಾ 2 ಕೋಟಿ ರೂ. ವಾಹನ?

ಸಲ್ಲುಗೆ ಕೊಲೆ ಬೆದರಿಕೆ ಬಂದಿತ್ತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರು ತಮ್ಮ ಸುರಕ್ಷತಾ ದೃಷ್ಟಿಯಿಂದ ಗನ್ ಲೈಸೆನ್ಸ್ ಪಡೆದಿದ್ದಾರೆ. ಈಗ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಪ್ರಾರಂಭಿಸಿದ್ದಾರೆ.

ಕೊಲೆ ಬೆದರಿಕೆ ಬೆನ್ನಲ್ಲೇ ಸಲ್ಲು ಬಳಿ ಬಂತು ಬುಲೆಟ್​ಪ್ರೂಫ್ ಕಾರು; ಹೇಗಿದೆ ಗೊತ್ತಾ 2 ಕೋಟಿ ರೂ. ವಾಹನ?
ಸಲ್ಮಾನ್ ಖಾನ್
TV9 Web
| Edited By: |

Updated on: Aug 02, 2022 | 10:05 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಬಂದಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಸಲ್ಮಾನ್ ಖಾನ್​ಗೆ ಕೊಲೆ ಹಾಕುವ ಬೆದರಿಕೆ ಹಾಕಿದ್ದಾರೆ. 2018ರಲ್ಲಿ ಲಾರೆನ್ಸ್​​ ಗ್ಯಾಂಗ್​ನಿಂದ ಸಲ್ಮಾನ್ ಅವರನ್ನು ಹತ್ಯೆ ಮಾಡುವ ಪ್ರಯತ್ನವೂ ನಡೆದಿತ್ತು. ಈ ಕಾರಣಕ್ಕೆ ಸಲ್ಮಾನ್ ಖಾನ್ ಅವರು ಈ ಬಾರಿ ಸಾಕಷ್ಟು ಎಚ್ಚರಿಕೆಯಿಂದ ಇದ್ದಾರೆ. ಅವರು ಗನ್ ಇಟ್ಟುಕೊಳ್ಳಲು ಲೈಸೆನ್ಸ್ ಪಡೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ಬಳಿ ಇರುವ ದುಬಾರಿ ಕಾರನ್ನು ಬುಲೆಟ್​ಪ್ರೂಫ್ ಆಗಿ ಬದಲಾಯಿಸಿದ್ದಾರೆ ಸಲ್ಮಾನ್ ಖಾನ್. ಇದೇ ಕಾರಿನಲ್ಲಿ ಅವರು ಎಲ್ಲ ಕಡೆಗಳಲ್ಲೂ ಓಡಾಡುತ್ತಿದ್ದಾರೆ.

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಅವರು ತಮ್ಮ ವಾಹನದಲ್ಲಿ ಓಡಾಡುತ್ತಿರುವಾಗಲೇ ಹತ್ಯೆ ಮಾಡಲಾಗಿತ್ತು. ಈ ಘಟನೆ ಬಳಿಕ ಸಲ್ಲುಗೆ ಕೊಲೆ ಬೆದರಿಕೆ ಬಂದಿತ್ತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರು ತಮ್ಮ ಸುರಕ್ಷತಾ ದೃಷ್ಟಿಯಿಂದ ಗನ್ ಲೈಸೆನ್ಸ್ ಪಡೆದಿದ್ದಾರೆ. ಈಗ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಲ್ಮಾನ್ ಖಾನ್ ಬಳಿ ಟೊಯಾಟೋ ಲ್ಯಾಂಡ್ ಕ್ರೂಸ್ ಎಸ್​ಯುವಿ ಇದೆ. ಇದರ ಎಕ್ಸ್​ ಶೋರೂಂ ಬೆಲೆ 1.50-1.80 ಕೋಟಿ ರೂಪಾಯಿ ಇದೆ. ತೆರಿಗೆಯನ್ನೂ ಸೇರಿಸಿದರೆ ಇದರ ಬೆಲೆ 2 ಕೋಟಿ ರೂಪಾಯಿ ಆಗಲಿದೆ. ಈ ಕಾರನ್ನು ಈಗ ಅವರು ಬುಲೆಟ್​ಪ್ರೂಫ್​ ಆಗಿ ಬದಲಾಯಿಸಿದ್ದಾರೆ. ಈ ಕಾರಿನಲ್ಲಿ ಸಲ್ಮಾನ್ ಖಾನ್ ಅವರು ಮುಂಬೈ ಏರ್​ಪೋರ್ಟ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ಬೆನ್ನಲ್ಲೇ ಸಲ್ಮಾನ್ ಖಾನ್ ಜತೆಗಿನ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಸುದೀಪ್

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್ ಖಾನ್ ಅವರಿಗೆ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಕಭಿ ಈದ್ ಕಭಿ ದಿವಾಲಿ’ ಹಾಗೂ ‘ಟೈಗರ್​ 3’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಎರಡು ಚಿತ್ರದ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ವಿಕ್ರಾಂತ್ ರೋಣ’ ಚಿತ್ರವನ್ನು ಅವರು ಹಿಂದಿಯಲ್ಲಿ ಪ್ರೆಸೆಂಟ್ ಮಾಡಿದ್ದಾರೆ.

Follow Us
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!