‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ

ಕೇಸರಿ ಪೇಟ ಧರಿಸಿ, ಕೈಯಲ್ಲಿ ಮರಾಠಾ ಖಡ್ಗ ಹಿಡಿದು ಸಲ್ಮಾನ್ ಖಾನ್ ಅವರು ಅಬ್ಬರಿಸಿದ್ದಾರೆ. ‘ರಾಜಾ ಶಿವಾಜಿ’ ಸಿನಿಮಾದಲ್ಲಿ ಅವರ ಪಾತ್ರವನ್ನು ಕಂಡು ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದರಿಂದ ಈ ಚಿತ್ರದ ಸ್ಟಾರ್ ಮೆರುಗು ಹೆಚ್ಚಾಗಿದೆ.

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ
Salman Khan

Updated on: May 01, 2026 | 6:15 PM

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿವೆ.

ಕೇಸರಿ ಪೇಟ, ಕುರ್ತಾ ಧರಿಸಿ, ಕೈಯಲ್ಲಿ ಮರಾಠಾ ಖಡ್ಗ ಹಿಡಿದು ಸಲ್ಮಾನ್ ಖಾನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆಯೇ ಚಿತ್ರಮಂದಿರಗಳಲ್ಲಿ ಶಿಳ್ಳೆ-ಚಪ್ಪಾಳೆಗಳ ಸುರಿಮಳೆಯಾಗಿದೆ. ಸಲ್ಮಾನ್ ಅವರ ಈ ಲುಕ್ ಸಿನಿಮಾದ ಹೈಲೈಟ್ ಎನ್ನಲಾಗುತ್ತಿದೆ. ‘ಇಡೀ ಸಿನಿಮಾ ಒಂದು ಕಡೆಯಾದರೆ, ಸಲ್ಮಾನ್ ಖಾನ್ ಅವರ ಎಂಟ್ರಿಯೇ ಒಂದು ಕಡೆ’ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ಸಲ್ಮಾನ್ ಅವರ ಈ ಲುಕ್ ನೋಡಿ ಅವರ ಹಳೆಯ ‘ವೀರ್’ ಸಿನಿಮಾವನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಈ ವಿಶೇಷ ಪಾತ್ರ ಸಲ್ಮಾನ್ ಅವರಿಗೆ ಸಿಕ್ಕಿದ್ದರ ಹಿಂದೆ ಒಂದು ಕುತೂಹಲಕಾರಿ ಕಥೆಯಿದೆ. ನಿರ್ದೇಶಕ ರಿತೇಶ್ ದೇಶ್ಮುಖ್ ಇತ್ತೀಚೆಗೆ ಇದನ್ನು ಹಂಚಿಕೊಂಡಿದ್ದರು.

‘ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಲ್ಮಾನ್ ಈ ಸಿನಿಮಾದ ಬಗ್ಗೆ ಕೇಳಿದರು. ಚಿತ್ರದಲ್ಲಿ ತಮಗೇನು ಪಾತ್ರವಿದೆ ಎಂದು ಪ್ರಶ್ನಿಸಿದರು. ನಾನು ಅವರಿಗೆ ಯಾವುದೇ ಪಾತ್ರ ಇನ್ನು ಯೋಚಿಸಿಲ್ಲ ಎಂದಾಗ, ‘ನನ್ನನ್ನು ಬಿಟ್ಟು ನೀನು ಈ ಸಿನಿಮಾ ಮಾಡಲು ಸಾಧ್ಯವಿಲ್ಲ, ನಾನೂ ಇದರಲ್ಲಿ ಇರಲೇಬೇಕು’ ಅಂತ ಸಲ್ಮಾನ್ ಪಟ್ಟು ಹಿಡಿದರು’ ಎಂದು ರಿತೇಶ್ ಸ್ಮರಿಸಿದ್ದಾರೆ. ಸಲ್ಮಾನ್ ಅವರ ಈ ಪ್ರೀತಿ ಮತ್ತು ಸಿನಿಮಾದ ಮೇಲಿರುವ ಗೌರವದಿಂದಾಗಿ ಅವರಿಗಾಗಿ ‘ಜೀವಾ ಮಹಾಲಾ’ ಪಾತ್ರವನ್ನು ಸೃಷ್ಟಿಸಲಾಯಿತು.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಸಿನಿಮಾಗೆ ಸಂಕಷ್ಟ: ಕಥೆ ಬದಲಾದರೂ ತಪ್ಪದ ‘ಮಾತೃಭೂಮಿ’ ವಿವಾದ

‘ಜಿಯೋ ಸ್ಟುಡಿಯೋಸ್’ ಮತ್ತು ‘ಮುಂಬೈ ಫಿಲ್ಮ್ ಕಂಪನಿ’ ಜೊತೆಯಾಗಿ ನಿರ್ಮಾಣದ ‘ರಾಜ ಶಿವಾಜಿ’ ಸಿನಿಮಾವು ಛತ್ರಪತಿ ಶಿವಾಜಿ ಮಹಾರಾಜರ ಆರಂಭಿಕ ಜೀವನ ಮತ್ತು ಸ್ವರಾಜ್ಯ ಸ್ಥಾಪನೆಯ ಹೋರಾಟದ ಮೇಲೆ ಬೆಳಕು ಚೆಲ್ಲುತ್ತದೆ. ರಿತೇಶ್ ದೇಶ್ಮುಖ್ ಅವರು ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸಿದ್ದು, ಸಂಜಯ್ ದತ್, ಅಭಿಷೇಕ್ ಬಚ್ಚನ್, ವಿದ್ಯಾ ಬಾಲನ್, ಭಾಗ್ಯಶ್ರೀ, ಮಹೇಶ್ ಮಂಜ್ರೇಕರ್ ಮತ್ತು ಬೋಮನ್ ಇರಾನಿ ಅವರಂತಹ ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us