ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ (Salman Khan Birthday) ಅವರು ಬಾಲಿವುಡ್ ಸೆಲೆಬ್ರಿಟಿಗಳಿಗೋಸ್ಕರ ಭರ್ಜರಿ ಪಾರ್ಟಿ ಆಯೋಜನೆ ಮಾಡಿದ್ದರು. ಮುಂಬೈನ ನಿವಾಸದಲ್ಲಿ ಸಲ್ಲು ಈ ಪಾರ್ಟಿ ನಡೆದಿದೆ. ಈ ಪಾರ್ಟಿಯಲ್ಲಿ ಶಾರುಖ್ ಖಾನ್, ಕಾರ್ತಿಕ್ ಆರ್ಯನ್, ಪೂಜಾ ಹೆಗ್ಡೆ ಸೇರಿ ಅನೇಕರು ಭಾಗಿ ಆಗಿದ್ದಾರೆ.
ಸಲ್ಮಾನ್ ಖಾನ್ ಅವರು ಬಾಲಿವುಡ್ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್. 57 ವರ್ಷವಾದರೂ ಮದುವೆ ಆಗಿಲ್ಲ. ಅನೇಕರ ಜತೆ ಡೇಟಿಂಗ್ ಮಾಡಿದರಾದರೂ ಯಾರನ್ನೂ ಮದುವೆ ಆಗಿಲ್ಲ. ಈಗ ಬರ್ತ್ಡೇನ ಅವರು ಭರ್ಜರಿಯಾಗಿ ಆಚರಿಸಿಕೊಂಡಿದ್ದಾರೆ. ಹಿಂದಿ ಚಿತ್ರರಂಗದ ಬಹುತೇಕ ಸೆಲೆಬ್ರಿಟಿಗಳು ಇಲ್ಲಿ ಹಾಜರಿ ಹಾಕಿದ್ದರು. ಈ ವಿಡಿಯೋಗಳು ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಸದ್ಯ ಎಲ್ಲೆಡೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಎಲ್ಲ ಕಡೆಗಳಲ್ಲೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಆದರೆ, ಇಲ್ಲಿಗೆ ಆಗಮಿಸಿದ ಯಾವ ಸೆಲೆಬ್ರೆಟಿಗಳೂ ಮಾಸ್ಕ್ ಹಾಕಿರಲಿಲ್ಲ. ಇದನ್ನು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ‘ಎಲ್ಲ ಕಡೆಗಳಲ್ಲೂ ಕೊರೊನಾ ಹಬ್ಬುತ್ತಿದೆ. ಆದರೆ, ಇವರು ಅದ್ದೂರಿಯಾಗಿ ಪಾರ್ಟಿ ಮಾಡುತ್ತಿದ್ದಾರೆ. ಅದೂ ಮಾಸ್ಕ್ ಇಲ್ಲದೆ’ ಎಂದು ಕೆಲವರು ಕೊಂಕು ತೆಗೆದಿದ್ದಾರೆ.
ಕೊವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲೇ ಕರಣ್ ಜೋಹರ್ ಅವರು ಅದ್ದೂರಿಯಾಗಿ ಬರ್ತ್ಡೇ ಪಾರ್ಟಿ ಆಚರಿಸಿಕೊಂಡಿದ್ದರು. ಆ ಪಾರ್ಟಿಯಲ್ಲಿ ಭಾಗಿಯಾದ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಅಂಟಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗಲೂ ಹಾಗೆಯೇ ಆಗಬಹುದು ಎಂದು ಕೆಲವರು ಹೇಳಿದ್ದಾರೆ. ಆದರೆ, ಈ ಬಗ್ಗೆ ಸಲ್ಮಾನ್ ಖಾನ್ ತಲೆಕೆಡಿಸಿಕೊಂಡಿಲ್ಲ.
ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಒಳ್ಳೆಯ ಫ್ರೆಂಡ್ಸ್. ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗಿದೆ. ಬರ್ತ್ಡೇ ದಿನ ಬಂದು ಸಲ್ಮಾನ್ ಖಾನ್ಗೆ ವಿಶ್ ಮಾಡಿದ ವಿಡಿಯೋಗಳು ವೈರಲ್ ಆಗುತ್ತಿವೆ.
ಇದನ್ನೂ ಓದಿ: ಸಲ್ಮಾನ್ ಖಾನ್ಗೆ ಈಗ 57 ವರ್ಷ ವಯಸ್ಸು; ಡೇಟಿಂಗ್ ಇತಿಹಾಸ ದೊಡ್ಡದಿದೆ; ಶಾದಿ ಬಗ್ಗೆ ಮಾತೇ ಇಲ್ಲ
ಸಲ್ಮಾನ್ ಖಾನ್ ‘ಟೈಗರ್ 3’ ಹಾಗೂ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಗಳಿಂದ ಟೀಸರ್ ಅಥವಾ ಪೋಸ್ಟರ್ ರಿಲೀಸ್ ಆಗುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:25 am, Tue, 27 December 22