AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಲ್ಮಾನ್ ಖಾನ್ ಅವರು ‘ಸಿಂಘಂ ಅಗೇನ್’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ನಿರ್ದೇಶಕರ ಪ್ಲ್ಯಾನ್ ಪ್ರಕಾರ ಶೂಟಿಂಗ್​ ನಡೆದಿಲ್ಲ. ಸಿನಿಮಾವನ್ನು ಸೆನ್ಸಾರ್​ಗೆ ಕಳಿಸುವ ಗಡಿಬಿಡಿಯಲ್ಲಿ ಇದ್ದ ಡೈರೆಕ್ಟರ್​ ರೋಹಿತ್ ಶೆಟ್ಟಿ ಅವರು ಸಲ್ಮಾನ್​ ಖಾನ್​ಗಾಗಿ ಕಾಯಲು ಸಾಧ್ಯವಾಗಿಲ್ಲ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?
ಅಜಯ್ ದೇವಗನ್, ಸಲ್ಮಾನ್ ಖಾನ್​
ಮದನ್​ ಕುಮಾರ್​
|

Updated on: Oct 21, 2024 | 8:31 PM

Share

ಬಹುನಿರೀಕ್ಷಿತ ‘ಸಿಂಘಂ ಅಗೇನ್’ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಧೂಳೆಬ್ಬಿಸಿದೆ. ನವೆಂಬರ್​ 1ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಅಜಯ್ ದೇವಗನ್ ಮುಖ್ಯ ಭೂಮಿಕೆ ನಿಭಾಯಿಸಿರುವ ‘ಸಿಂಘಂ ಅಗೇನ್’ ಚಿತ್ರದಲ್ಲಿ ಹಲವು ಸ್ಟಾರ್​ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ. ಸಲ್ಮಾನ್ ಖಾನ್​ ಕೂಡ ಈ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ಅವರ ಪಾತ್ರವನ್ನು ಕ್ಯಾನ್ಸಲ್ ಮಾಡಲಾಗಿದೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ವರದಿ ಪ್ರಕಟ ಆಗಿದೆ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ರಣವೀರ್​ ಸಿಂಗ್, ದೀಪಿಕಾ ಪಡುಕೋಣೆ, ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​ ಮುಂತಾದ ಕಲಾವಿದರು ಅತಿಥಿ ಪಾತ್ರ ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳು ಟ್ರೇಲರ್​ನಲ್ಲಿ ಹೈಲೈಟ್ ಆಗಿವೆ. ಆದರೆ ಸಲ್ಮಾನ್ ಖಾನ್ ಅವರ ಪಾತ್ರದ ಶೂಟಿಂಗ್ ಮಾಡುವುದು ಇನ್ನೂ ಬಾಕಿ ಕಿತ್ತು. ಚುಲ್​ ಬುಲ್ ಪಾಂಡೆಯಾಗಿ ಸಲ್ಮಾನ್​ ಖಾನ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅಕ್ಟೋಬರ್​ 14ರಂದು ಸಲ್ಮಾನ್ ಖಾನ್​ ಅವರು ‘ಸಿಂಘಂ ಅಗೇನ್’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಕ್ಟೋಬರ್​ 12ರಂದು ಸಲ್ಮಾನ್ ಖಾನ್ ಅವರ ಆಪ್ತರಾದ ಬಾಬಾ ಸಿದ್ಧಿಕಿ ಹತ್ಯೆ ಆಯಿತು. ಆ ಘಟನೆಯಿಂದ ಸಲ್ಮಾನ್ ಖಾನ್ ಸಖತ್ ವಿಚಲಿತರಾದರು. ಇಂಥ ಸಂದರ್ಭದಲ್ಲಿ ಅವರನ್ನು ಶೂಟಿಂಗ್​ಗೆ ಬನ್ನಿ ಅಂತ ಕರೆಯುವುದು ಸೂಕ್ತವಲ್ಲ ಎಂದು ನಿರ್ದೇಶಕ ರೋಹಿತ್ ಶೆಟ್ಟಿ ಅವರು ಆ ಪಾತ್ರವನ್ನೇ ಕೈ ಬಿಡುವ ನಿರ್ಧಾರ ಮಾಡಿದರು ಎನ್ನಲಾಗಿದೆ.

ಇದನ್ನೂ ಓದಿ:  ‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಪರಿಸ್ಥಿತಿ ಇಷ್ಟೆಲ್ಲ ಗಂಭೀರ ಆಗಿರುವಾಗ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಸಲ್ಮಾನ್ ಖಾನ್ ಅವರನ್ನು ಅತಿಥಿ ಪಾತ್ರದ ಶೂಟಿಂಗ್​ಗೆ ಕರೆದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ