ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ

‘ಸಲೀಂ ಖಾನ್​ ಕುಟುಂಬದವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ನಡೆದಿದ್ದು ಆಘಾತಕಾರಿ ಸಂಗತಿ. ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಆತಂಕ ಉಂಟಾಗಿದೆ’ ಎಂದು ಸಲ್ಮಾನ್​ ಖಾನ್​ ಫ್ಯಾಮಿಲಿಯವರು ಹೇಳಿದ್ದಾರೆ. ಜೀವ ಬೆದರಿಕೆ ನಡುವೆಯೂ ಸಲ್ಮಾನ್​ ಖಾನ್​ ಅವರು ಸಿನಿಮಾ ಕೆಲಸಗಳಲ್ಲಿ ಮುಂದುವರಿಯುವುದು ಅನಿವಾರ್ಯ.

ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ
ಸಲ್ಮಾನ್​ ಖಾನ್​
Follow us
ಮದನ್​ ಕುಮಾರ್​
|

Updated on: Apr 15, 2024 | 8:07 PM

ಬಾಲಿವುಡ್​ ನಟ ಸಲ್ಮಾನ್​ ಖಾನ್​ (Salman Khan) ಅವರ ಮನೆ ಮೇಲೆ ಭಾನುವಾರ (ಏಪ್ರಿಲ್​ 14) ಗುಂಡಿನ ದಾಳಿ ನಡೆದಿದ್ದು ಎಲ್ಲರಲ್ಲೂ ಆತಂಕ ಮೂಡಿಸಿತು. ಈ ಘಟನೆ ನಡೆದ ಬಳಿಕ ಸಲ್ಮಾನ್​ ಖಾನ್​ ಅವರು ಮನೆಯಿಂದ ಹೊರಬಂದಿರಲಿಲ್ಲ. ಇಂದು (ಏ.15) ಸಂಜೆ ಅವರು ಮೊದಲ ಬಾರಿಗೆ ಮನೆಯಿಂದ ಹೊರಬಂದಿದ್ದಾರೆ. ಅಲ್ಲದೇ, ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಕುಟುಂಬದವರು (Salman Khan Family) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಕೆಲವು ಗಾಳಿಸುದ್ದಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ದಾಳಿಯ ಬಗ್ಗೆ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್​ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಆಗಿತ್ತು. ಆದರೆ ಸಲೀಂ ಖಾನ್​ (Salim Khan) ಆ ರೀತಿ ಯಾವುದೇ ಹೇಳಿಕೆ ನೀಡಿಲ್ಲ ಎಂಬುದನ್ನು ಈಗ ಸ್ಪಷ್ಟಪಡಿಸಲಾಗಿದೆ.

‘ಇಬ್ಬರು ಅಪರಿಚಿತರು ಬೈಕ್​ನಲ್ಲಿ ಬಂದು ಸಲೀಂ ಖಾನ್​ ಕುಟುಂಬದ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ಮಾಡಿದ್ದು ಆಘಾತಕಾರಿ ಸಂಗತಿಯಾಗಿದೆ. ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಆತಂಕ ಆಗಿದೆ. ದುರದೃಷ್ಟಕರ ವಿಷಯ ಏನೆಂದರೆ, ಕೆಲವು ವ್ಯಕ್ತಿಗಳು ನಮ್ಮ ಕುಟುಂಬದ ಆಪ್ತರು ಎಂದು ಹೇಳಿಕೊಂಡು ಮಾಧ್ಯಮಗಳಲ್ಲಿ ಲಘುವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಘಟನೆ ಒಂದು ಪ್ರಚಾರದ ಗಿಮಿಕ್​ ಮತ್ತು ಇದರಿಂದ ಸಲ್ಮಾನ್​ ಖಾನ್​ ಕುಟುಂಬದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದೆಲ್ಲ ಹೇಳಿದ್ದಾರೆ. ಆದರೆ ಅದು ನಿಜವಲ್ಲ. ಅಂಥವರ ಮಾತನ್ನು ಗಂಭೀರವಾಗಿ ಪರಿಗಣಿಸಬಾರದು’ ಎಂದು ಸಲ್ಲು ಕುಟುಂಬದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​

‘ಸಲೀಂ ಖಾನ್​ ಕುಟುಂಬದ ಯಾರೂ ಕೂಡ ಮಾಧ್ಯಮಗಳಿಗೆ ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿಲ್ಲ. ಈ ಸಮಯದಲ್ಲಿ ಕುಟುಂಬದವರು ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ನಮಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇದೆ. ನಮ್ಮ ಕುಟುಂಬಕ್ಕೆ ರಕ್ಷಣೆ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಬೆಂಬಲ ಮತ್ತು ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಸಲ್ಮಾನ್ ಖಾನ್​ ಸಹೋದರ ಅರ್ಬಾಜ್​ ಖಾನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಲ್ಮಾನ್​ ಖಾನ್​ ಅವರು ಬಾಲಿವುಡ್​ನ ಬಹುಬೇಡಿಕೆಯ ನಟ. ಅನೇಕ ಜಾಹೀರಾತು, ಸಿನಿಮಾ ಮುಂತಾದ ಪ್ರಾಜೆಕ್ಟ್​ಗಳನ್ನು ಅವರು ಈಗಾಗಲೇ ಒಪ್ಪಿಕೊಂಡಿದ್ದಾರೆ. ಅವುಗಳ ಸಲುವಾಗಿ ಮನೆಯಿಂದ ಹೊರಬರುವುದು ಅನಿವಾರ್ಯ. ಸದ್ಯಕ್ಕೆ ಅವರಿಗೆ ಜೀವ ಬೆದರಿಕೆ ಇದ್ದರೂ ಕೂಡ ಮನೆಯಿಂದ ಹೊರಬಂದಿದ್ದಾರೆ. ಪರಿಸ್ಥಿತಿ ಕಷ್ಟ ಇರುವುದರಿಂದ ಅವರು ಭದ್ರತೆ ಹೆಚ್ಚಿಸಿಕೊಳ್ಳಬೇಕಿದೆ. ಒಟ್ಟಾರೆ ಈ ಘಟನೆಯಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ