AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶರ್ಟ್‌ಲೆಸ್ ಜಿಮ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹಚ್ಚಿದ್ದಾರೆ. ವಿಮರ್ಶಕರು ಮತ್ತು ಟ್ರೋಲರ್‌ಗಳಿಗೆ 'ಶೋಲೆ' ಚಿತ್ರದ ಡೈಲಾಗ್ ಹೊಡೆಯುವ ಮೂಲಕ ಖಡಕ್ ಸಂದೇಶ ರವಾನಿಸಿದ್ದಾರೆ. ಭಾಯ್‌ಜಾನ್ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.

‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್
ಸಲ್ಮಾನ್ ಖಾನ್ Image Credit source: Salman Khan Instagram
ರಾಜೇಶ್ ದುಗ್ಗುಮನೆ
|

Updated on: Jul 25, 2026 | 8:29 AM

Share

ಮುಖ್ಯಾಂಶಗಳು

  • ಜಿಮ್ ಸೆಲ್ಫಿ ಜೊತೆ ವಿಮರ್ಶಕರಿಗೆ ಸಲ್ಮಾನ್ ಖಾನ್ ಖಡಕ್ ಟಾಂಗ್
  • ವಿದ್ಯಾರ್ಥಿ ಹೋರಾಟಕ್ಕೆ ಬೆಂಬಲ ನೀಡಿದ್ದ ಭಾಯ್‌ಜಾನ್
  • ಬ್ಯಾಕ್ ಟು ಬ್ಯಾಕ್ ಪ್ರಾಜೆಕ್ಟ್‌ಗಳಲ್ಲಿ  ಬ್ಯುಸಿಯಾದ ಸುಲ್ತಾನ್

ಬಾಲಿವುಡ್‌ನ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಸಿಕ್ಸ್ ಪ್ಯಾಕ್ ಬಾಡಿಯ ಫೋಟೋ ಹಂಚಿಕೊಂಡು ಅದಕ್ಕೆ ನಿಗೂಢಾರ್ಥದ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಚರ್ಚೆ ಆಗುತ್ತಿದೆ.

ಸಲ್ಮಾನ್ ಖಾನ್ ಶನಿವಾರ (ಜುಲೈ 25) ಮುಂಜಾನೆ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವರ್ಕೌಟ್ ನಂತರದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಸ್ಲಿಮ್ ಹಾಗೂ ಫಿಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಅವರು ತಮ್ಮ ಬಲಿಷ್ಠ ಬೈಸೆಪ್ಸ್ ಹಾಗೂ ಆ್ಯಬ್ಸ್ ಪ್ರದರ್ಶಿಸಿದ್ದಾರೆ. ಈ ಜಿಮ್ ಸೆಲ್ಫಿಗಳಿಗೆ ಸಲ್ಮಾನ್ ನೀಡಿರುವ ಕ್ಯಾಪ್ಷನ್ ಗಮನ ಸೆಳೆಯುತ್ತಿದೆ.

‘ಸಲ್ಮಾನ್ ಖಾನ್ ಹೆದರಿದರು.. ಹೌದು, ಯಾರು ಹೆದರುತ್ತಾರೋ ಅವರು ಸತ್ತಂತೆ’ ಎಂದು ಬರೆದುಕೊಂಡಿದ್ದು, ಇದು ಕೊಟ್ಟ ಟಾಂಗ್ ಎಂದು ಬಣ್ಣಿಸಲಾಗುತ್ತಿದೆ. ‘ಜೋ ಡರ್​​ ಗಯಾ, ವೋ ಮರ್​​ ಗಯಾ’ ಇದು ಬಾಲಿವುಡ್‌ನ ಐಕಾನಿಕ್ ಸಿನಿಮಾ ‘ಶೋಲೆ’ ಚಿತ್ರದ ಪ್ರಸಿದ್ಧ ಡೈಲಾಗ್ ಆಗಿದೆ. ಈ ಸಾಲುಗಳನ್ನು ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರೇ ಬರೆದಿದ್ದರು ಎಂಬುದು ವಿಶೇಷ.

ಇದನ್ನೂ ಓದಿ: ‘ಮನೆಗೆ ವಾಪಸ್ ಹೋಗಿ’: ಮೋದಿ ಟ್ವೀಟ್ ಬಳಿಕ ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಇತ್ತೀಚೆಗೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪರವಾಗಿಯೂ ಸಲ್ಮಾನ್ ಧ್ವನಿ ಎತ್ತಿದ್ದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ ಬೆನ್ನಲ್ಲೇ ಸೋನಮ್ ಅವರಿಗೆ ಉಪವಾಸ ಕೈಬಿಡುವಂತೆ ಸಲ್ಮಾನ್ ಮನವಿ ಮಾಡಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಯಾವುದೇ ರಾಜಕೀಯ ಪಕ್ಷಗಳು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸಲ್ಮಾನ್ ಕಿವಿಮಾತು ಹೇಳಿದ್ದರು. ಇನ್ನು ಸಿನಿಮಾಗಳ ವಿಷಯಕ್ಕೆ ಬರುವುದಾದರೆ ಸಲ್ಮಾನ್ ಖಾನ್ ಸದ್ಯದಲ್ಲೇ ‘ಬಿಗ್ ಬಾಸ್ 20’ ರಿಯಾಲಿಟಿ ಶೋ ನಿರೂಪಣೆ ಮಾಡಲಿದ್ದಾರೆ. ಇದರ ಜೊತೆಗೆ ವಂಶಿ ಪೈಡಿಪಲ್ಲಿ ನಿರ್ದೇಶನದ ಹೊಸ ಆಕ್ಷನ್ ಸಿನಿಮಾದಲ್ಲಿ ನಯನತಾರಾ ಜೊತೆ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ