Salman Khan: ವಂಶಿಕಾ ಮಾತ್ರವಲ್ಲ, ಸಲ್ಮಾನ್​ ಖಾನ್​ ಹೆಸರಲ್ಲೂ ನಡೆದಿದೆ ಮೋಸ; ಅಧಿಕೃಕವಾಗಿ ಹೇಳಿಕೆ ಬಿಡುಗಡೆ ಮಾಡಿದ ಸಲ್ಲು

Salman Khan Films: ಸಲ್ಮಾನ್​ ಖಾನ್​ ಅವರ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಜನರು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಸಲ್ಲು ಈ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Salman Khan: ವಂಶಿಕಾ ಮಾತ್ರವಲ್ಲ, ಸಲ್ಮಾನ್​ ಖಾನ್​ ಹೆಸರಲ್ಲೂ ನಡೆದಿದೆ ಮೋಸ; ಅಧಿಕೃಕವಾಗಿ ಹೇಳಿಕೆ ಬಿಡುಗಡೆ ಮಾಡಿದ ಸಲ್ಲು
ಸಲ್ಮಾನ್​ ಖಾನ್​
Follow us
ಮದನ್​ ಕುಮಾರ್​
|

Updated on: Jul 17, 2023 | 2:49 PM

ಬಾಲನಟಿ ವಂಶಿಕಾ ಅಂಜನಿ ಕಶ್ಯಪ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅನೇಕ ಜನರಿಗೆ ಮೋಸ ಮಾಡಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂತು. ಇಂಥ ಕೆಲಸ ಮಾಡಿದ್ದಾರೆ ಎನ್ನಲಾದ ನಿಶಾ ನರಸಪ್ಪ ವಿರುದ್ಧ ಈಗಾಗಲೇ ಅನೇಕ ದೂರುಗಳು ದಾಖಲಾಗಿವೆ. ಇಂಥ ಫ್ರಾಡ್​ (Fraud) ನಡೆಯುವುದು ಸ್ಯಾಂಡಲ್​ವುಡ್​ನಲ್ಲಿ ಮಾತ್ರವಲ್ಲ. ಬಾಲಿವುಡ್​ ಮಂದಿಯ ಹೆಸರನ್ನೂ ಹೇಳಿಕೊಂಡು ಕೆಲವರು ಮೋಸ ಮಾಡುತ್ತಿರುವುದು ಗೊತ್ತಾಗಿದೆ. ಖ್ಯಾತ ನಟ ಸಲ್ಮಾನ್​ ಖಾನ್ (Salman Khan)​ ಮತ್ತು ಅವರ ನಿರ್ಮಾಣ ಸಂಸ್ಥೆಯ (Salman Khan Films) ಹೆಸರು ಬಳಸಿಕೊಂಡು ಯಾರೋ ಕಿಡಿಗೇಡಿಗಳು ಜನರಿಂದ ಹಣ ಕೀಳುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಕಡೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಸಲ್ಮಾನ್​ ಖಾನ್​ ಅವರ ಒಡೆತನದ ‘ಸಲ್ಮಾನ್​ ಖಾನ್​ ಫಿಲ್ಮ್ಸ್​’ ಕಂಪನಿಯ ಮೂಲಕ ಸ್ಪಷ್ಟನೆ ನೀಡಲಾಗಿದೆ. ‘ಸಲ್ಮಾನ್​ ಖಾನ್​ ಅವರಾಗಲಿ, ಸಲ್ಮಾನ್​ ಖಾನ್​ ಫಿಲ್ಮ್ಸ್​ ಕಂಪನಿ ಕಡೆಯಿಂದಾಗಲಿ ಯಾವುದೇ ಕಲಾವಿದರ ಆಯ್ಕೆ ಸದ್ಯಕ್ಕೆ ನಡೆಯುತ್ತಿಲ್ಲ. ನಮ್ಮ ಸಿನಿಮಾಗಳಿಗೆ ಕಲಾವಿದರನ್ನು ಆಯ್ಕೆ ಮಾಡುವ ಸಲುವಾಗಿ ನಾವು ಯಾವುದೇ ಕಾಸ್ಟಿಂಗ್​ ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ. ಯಾರಿಂದಲಾದರೂ ಈ ಬಗ್ಗೆ ಮೆಸೇಜ್​ ಅಥವಾ ಇ-ಮೇಲ್​ ಬಂದರೆ ದಯವಿಟ್ಟು ನಂಬಬೇಡಿ. ಸಲ್ಮಾನ್​ ಖಾನ್​ ಮತ್ತು ಅವರ ಸಂಸ್ಥೆಯ ಹೆಸರನ್ನು ಅನಧಿಕೃತವಾಗಿ ಬಳಸಿಕೊಂಡಿರುವುದು ಕಂಡುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಲಾಗಿದೆ.

ಬಾಲಿವುಡ್​ನಲ್ಲಿ ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಟನಾಗಿ, ನಿರ್ಮಾಪಕನಾಗಿ, ಕಿರುತೆರೆ ಕಾರ್ಯಕ್ರಮಗಳ ನಿರೂಪಕನಾಗಿ ಅವರು ಹೆಸರು ಮಾಡಿದ್ದಾರೆ. ಚಿತ್ರರಂಗದಲ್ಲಿ ಎಷ್ಟೋ ಜನರಿಗೆ ಅವರು ಅವಕಾಶ ನೀಡಿದ್ದಾರೆ. ಹಲವು ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಬಾಲಿವುಡ್​ಗೆ ಪರಿಚಯಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಈಗ ಅವರ ಹೆಸರಲ್ಲಿ ಯಾರೋ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಜನರು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಸಲ್ಲು ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಸದ್ಯ ಸಲ್ಮಾನ್​ ಖಾನ್​ ಅವರು ‘ಬಿಗ್​ ಬಾಸ್​ ಒಟಿಟಿ 2’ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಅಲ್ಲದೇ, ‘ಟೈಗರ್​ 3’ ಚಿತ್ರದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಒಂದಿಲ್ಲೊಂದು ಕಾರಣಕ್ಕೆ ಸಲ್ಲು ಆಗಾಗ ಸುದ್ದಿ ಆಗುತ್ತಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್