‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
ಸಲೀಂ-ಸಲ್ಮಾನ್
Follow us
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:26 AM

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಇದೆ. ಲಾರೆನ್ಸ್ ಗ್ಯಾಂಗ್​ನವರು ಸಲ್ಲುಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಮನೆಯ ಬಳಿ ಫೈರಿಂಗ್ ಆಗಿದೆ. ಇದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಸದ್ಯ ಸಲ್ಮಾನ್ ಖಾನ್​ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಈ ಬಗ್ಗೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ. ಮುಂದೇನಾಗುತ್ತದೆ ಎನ್ನುವ ಚಿಂತೆ ಅಭಿಮಾನಿಗಳನ್ನು ಬಹುವಾಗಿ ಕಾಡುತ್ತಿದೆ.

ಏಪ್ರಿಲ್ 14ರ ಮುಂಜಾನೆ ಮುಂಬೈನ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿರುವ ಸಲ್ಮಾನ್ ಖಾನ್ ಮನೆ ಸಮೀಪ ಗುಂಡಿನ ದಾಳಿ ಕೇಳಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಬೈಕ್​ನಲ್ಲಿ ಬಂದವರು ವೆಸ್ಟರ್ನ್​ ಎಕ್ಸ್​ಪ್ರೆಸ್ ಹೈವೇ ಅತ್ತ ತೆರಳಿದ್ದಾರೆ. ಹೀಗಾಗಿ ದಾಳಿ ಮಾಡಿದವರು ಮುಂಬೈನಿಂದ ಹೊರ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಕಳೆದ ವರ್ಷ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್​ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬೆದರಿಕೆ ಬಂದಿತ್ತು. ಅವರ ಗ್ಯಾಂಗ್​ನ ಹಿಟ್​ಲಿಸ್ಟ್​ನಲ್ಲಿ ಸಲ್ಮಾನ್ ಖಾನ್ ಹೆಸರು ಇದೆ. ಆ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಇತ್ತೀಚೆಗೆ ಈದ್ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ