ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ; 1,735 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ, ಇದರಲ್ಲಿ ಏನೆಲ್ಲ ಇದೆ?
ಏಪ್ರಿಲ್ 14ರ ಮುಂಜಾನೆ ಬೈಕ್ನಲ್ಲಿ ಬಂದ ಇಬ್ಬರು ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ ಮಾಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು 1,735 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಮ್ನ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳು ಇವೆ.
ಸಲ್ಮಾನ್ ಖಾನ್ ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 1,735 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಆರು ಮಂದಿ ಅರೆಸ್ಟ್ ಆಗಿದ್ದು ಇನ್ನು ಮೂವರಿಗಾಗಿ ಹುಡುಕಾಟ ನಡೆದಿದೆ. ಏಪ್ರಿಲ್ ತಿಂಗಳಲ್ಲಿ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ ಮೇಲೆ ಇಬ್ಬರು ಬೈಕ್ನಲ್ಲಿ ಬಂದು ಗುಂಡಿನ ದಾಳಿ ಮಾಡಿದ್ದರು. ಈ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಕೇಳಿ ಬಂದಿದೆ.
ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಮ್ನ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳು ಇವೆ. ಸಾಕ್ಷಿ ಹೇಳಿದ 46 ಮಂದಿ ಹಾಗೂ ಅವರ ಸ್ಟೇಟ್ಮೆಂಟ್ ಪಡೆದಿರುವ ವಿಚಾರ ಇದೆ. 22 ಪಂಚನಾಮೆಗಳು, ತಾಂತ್ರಿಕ ಸಾಕ್ಷಿಗಳು ಚಾರ್ಜ್ಶೀಟ್ ದಾಖಲೆಗಳಲ್ಲಿ ಇವೆ. ಈ ದೋಷಾರೋಪ ಪಟ್ಟಿಯನ್ನು ಕೋರ್ಟ್ ಕೂಲಂಕುಷವಾಗಿ ಪರಿಶೀಲಿಸಲಿದೆ. ಆ ಬಳಿಕ ಮುಂದಿನ ಕ್ರಮದ ಬಗ್ಗೆ ಕೋರ್ಟ್ ನಿರ್ಧಾರ ಮಾಡಲಿದೆ.
ಏಪ್ರಿಲ್ 14ರ ಮುಂಜಾನೆ ಬೈಕ್ನಲ್ಲಿ ಬಂದ ಇಬ್ಬರು ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ ಮಾಡಿದ್ದರು. ಈ ಘಟನೆ ಸಲ್ಮಾನ್ ಖಾನ್ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿತ್ತು. ಈ ಕಾರಣದಿಂದಲೇ ಸಲ್ಮಾನ್ ಖಾನ್ ಅವರಿಗೆ ನೀಡಲಾದ ಭದ್ರತೆಯನ್ನು ಈಗ ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಧೋನಿ ಬರ್ತ್ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿದ್ದಾರೆ. ಕೃಷ್ಣ ಮೃಗವನ್ನು ಬಿಷ್ಣೋಯ್ ಸಮುದಾಯದವರು ದೇವರ ರೀತಿ ಪೂಜೆ ಮಾಡುತ್ತಾರೆ. ಈ ಕಾರಣದಿಂದಲೇ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಬಳಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ. ಇದನ್ನು ಸಲ್ಮಾನ್ ಖಾನ್ ಒಪ್ಪಿಕೊಂಡಿಲ್ಲ. ಹೀಗಾಗಿ, ಸಲ್ಲು ವಿರುದ್ಧ ಹಗೆ ತೀರಿಸಿಕೊಳ್ಳಲು ಬಿಷ್ಣೋಯ್ ಗ್ಯಾಂಗ್ ನಿರಂತರವಾಗಿ ಸಂಚು ರೂಪಿಸುತ್ತಿದೆ. ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಅನೇಕ ಬಾರಿ ವಿಫಲ ಪ್ರಯತ್ನ ನಡೆದಿದೆ. ಸಲ್ಮಾನ್ ಖಾನ್ ಸದ್ಯ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.