Salman Khan: ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆ ಎದುರು ಹೇಗಿದೆ ಪರಿಸ್ಥಿತಿ?

ಸಲ್ಮಾನ್​ ಖಾನ್​ ಮನೆಯ ಎದುರು ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದವರು ಮತ್ತು ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಬಂತು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಸಲ್ಮಾನ್​ ಖಾನ್​ ಅವರ ಮನೆ ಸುತ್ತಲಿನ ಇಂಚಿಂಚೂ ಜಾಗವನ್ನು ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ.

Salman Khan: ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆ ಎದುರು ಹೇಗಿದೆ ಪರಿಸ್ಥಿತಿ?
ಸಲ್ಮಾನ್​ ಖಾನ್​ ಮನೆ ಎದುರು ಅಧಿಕಾರಿಗಳಿಂದ ತಪಾಸಣೆ
Follow us
ಮದನ್​ ಕುಮಾರ್​
|

Updated on: Apr 14, 2024 | 10:00 AM

ಇಬ್ಬರು ಅಪರಿಚಿತ ವ್ಯಕ್ತಿಗಳು ಸಲ್ಮಾನ್​ ಖಾನ್​ (Salman Khan) ಮನೆಯ ಎದುರು ಗುಂಡಿನ ದಾಳಿ ನಡೆಸಿದ್ದಾರೆ. ಭಾನುವಾರ (ಏಪ್ರಿಲ್​ 14) ಮುಂಜಾನೆ ಈ ಘಟನೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿ ಇರುವ ಸಲ್ಮಾನ್​ ಖಾನ್​ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಬೆಳಗ್ಗೆ 5 ಗಂಟೆ ಸುಮಾರಿಗೆ ಗುಂಡಿನ ಸದ್ದು (Gunshot) ಕೇಳಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಪೊಲೀಸ್​ ಅಧಿಕಾರಿಗಳ ಪ್ರಕಾರ, ಕಿಡಿಗೇಡಿಗಳು ಮೂರು ಬಾರಿ ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ಸಲ್ಮಾನ್​ ಖಾನ್​ ಮನೆಗೆ (Salman Khan House) ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ತಲುಪಿದ್ದಾರೆ. ಸ್ಥಳ ಪರಿಶೀಲನೆಯ ಕಾರ್ಯ ಭರದಿಂದ ಆಗುತ್ತಿದೆ. ಗುಂಡಿನ ದಾಳಿ ನಡೆಸಿದವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ.

ಈ ಸುದ್ದಿ ಕೇಳಿ ಸಲ್ಮಾನ್​ ಖಾನ್​ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಈಗಾಗಲೇ ಸಲ್ಮಾನ್​ ಖಾನ್​ ಅವರನ್ನು ಹತ್ಯೆ ಮಾಡುವುದಾಗಿ ಲಾರೆಯ್ಸ್​ ಬಿಷ್ಣೋಯ್​ ಬೆದರಿಕೆ ಹಾಕಿರುವುದು ಗೊತ್ತೇ ಇದೆ. ಆ ಬಳಿಕ ಸಲ್ಮಾನ್​ ಖಾನ್​ ಭದ್ರತೆ ಹೆಚ್ಚಿಸಿಕೊಂಡಿದ್ದರು. ಈಗ ಗುಂಡಿನ ದಾಳಿ ಬಳಿಕ ಇನ್ನಷ್ಟು ಭಯದ ವಾತಾವರಣ ನಿರ್ಮಾಣ ಆಗಿದೆ. ಇದು ಯಾರ ಕೃತ್ಯ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ಸಲ್ಮಾನ್​ ಖಾನ್​ ಅವರ ಮನೆಯ ಎದುರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಸಲ್ಲು ಮನೆಯ ಸುತ್ತಮುತ್ತಲಿನ ಇಂಚಿಂಚೂ ಜಾಗವನ್ನು ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಕೂಡ ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಈ ಘಟನೆ ಬಗ್ಗೆ ಸಲ್ಮಾನ್​ ಖಾನ್​ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಇದನ್ನೂ ಓದಿ: ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ಸಲ್ಮಾನ್​ ಖಾನ್​ ಅವರ ಮೇಲೆ ಈ ಮೊದಲು ಕೂಡ ಹತ್ಯೆ ಪ್ರಯತ್ನ ನಡೆದಿತ್ತು. ಆದರೆ ಕಿಡಿಗೇಡಿಗಳ ಪ್ಲ್ಯಾನ್​ ವಿಫಲವಾಗಿತ್ತು. ಇತ್ತೀಚೆಗಷ್ಟೇ ಸಲ್ಮಾನ್​ ಖಾನ್​ ಅವರು ಸಂಭ್ರಮದಿಂದ ಈದ್​ ಹಬ್ಬ ಆಚರಿಸಿದರು. ಬೆಳಗ್ಗೆಯಿಂದ ರಾತ್ರಿ ತನಕ ಅವರ ಮನೆ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಸಂಜೆ ವೇಳೆಗೆ ಸಲ್ಮಾನ್​ ಖಾನ್​ ಅವರು ಮನೆಯ ಬಾಲ್ಕನಿಗೆ ಬಂದು ಎಲ್ಲರತ್ತ ಕೈ ಬೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ