AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​

ಇಂದು (ಏಪ್ರಿಲ್​ 11) ಮುಂಜಾನೆ 4.55 ಗಂಟೆಗೆ ಶಂಕಿತರ ಚಲನವಲನ ಸಿಸಿಟಿವಿಯಲ್ಲಿ ಕಾಣಿಸಿದೆ. ಸಮವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ನಿವಾಸದ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​
ಸಿಸಿಟಿವಿ ವಿಡಿಯೋದ ದೃಶ್ಯ, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 14, 2024 | 1:53 PM

Share

ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರ ಮನೆ ಎದುರು ಗುಂಡಿನ ದಾಳಿ ನಡೆದಿರುವುದು ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ. ಏಪ್ರಿಲ್​ 14ರ ಮುಂಜಾನೆಯೇ ಸಲ್ಲು ಮನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿದ್ದಾರೆ. ಶಂಕಿತರ ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಶಂಕಿತ ಶೂಟರ್​ಗಳ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಬೈಕ್​ನಲ್ಲಿ ಬಂದ ಕಿಡಿಗೇಡಿಗಳು ಸಲ್ಮಾನ್​ ಖಾನ್​ ನಿವಾಸದ ಎದುರು ಶೂಟೌಟ್​ (Shootout) ನಡೆಸಿದ್ದಾರೆ. ಅದೃಷ್ಟವಶಾತ್​ ಯಾರಿಗೂ ಹಾನಿ ಆಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಶಂಕಿತರ ವಿಡಿಯೋ (CCTV Video) ಹರಿದಾಡುತ್ತಿದೆ. ಆರೋಪಿಗಳನ್ನು ಆದಷ್ಟು ಬೇಗ ಪೊಲೀಸರು ಬಂಧಿಸಲಿದ್ದಾರೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ.

ಭಾನುವಾರ ಬೆಳಗ್ಗೆ 4.55 ಗಂಟೆಗೆ ಶಂಕಿತರ ಚಲನವಲನ ಕಾಣಿಸಿದೆ. ಒಂದೇ ವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಮುಂಬೈ ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದವರು ಘಟನೆ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಅವರಿಗೆ ಈ ಮೊದಲು ಕೂಡ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಕಾರಣದಿಂದ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದರು. ಬುಲೆಟ್​ಪ್ರೂಫ್​ ಕಾರುಗಳನ್ನು ಅವರು ಖರೀದಿಸಿದ್ದರು. ಈಗ ಅವರ ನಿವಾಸದ ಎದುರಲ್ಲೇ ಶೂಟೌಟ್​ ನಡೆದಿರುವ ಕಾರಣ ತಮ್ಮ ಸುರಕ್ಷತೆ ಬಗ್ಗೆ ಸಲ್ಮಾನ್​ ಖಾನ್​ ಅವರು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಹಲವು ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಸಲ್ಮಾನ್​ ಖಾನ್​ ಅವರ ಫಾರ್ಮ್​ಹೌಸ್​ಗೆ ನುಸುಳಲು ಪ್ರಯತ್ನಿಸಿದ್ದು ವರದಿ ಆಗಿತ್ತು.

ಇದನ್ನೂ ಓದಿ: Salman Khan: ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆ ಎದುರು ಹೇಗಿದೆ ಪರಿಸ್ಥಿತಿ?

ಶೂಟೌಟ್​ ಘಟನೆಗೆ ಸಂಬಂಧಿಸಿದಂತೆ ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ. ಸಲ್ಮಾನ್​ ಖಾನ್​ ಮಾತ್ರವಲ್ಲ, ಜನಸಾಮಾನ್ಯರಿಗೂ ಮುಂಬೈನಲ್ಲಿ ಭದ್ರತೆ ಇಲ್ಲ ಎಂದು ಶಿವ ಸೇನಾ ಮುಖಂಡ ಆನಂದ್​ ದುಬೆ ಹೇಳಿದ್ದಾರೆ. ‘ಮಹಾರಾಷ್ಟ್ರದಲ್ಲಿ ಕಾನೂನು, ಸುವ್ಯವಸ್ಥೆ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗೃಹ ಮಂತ್ರಿ ಎಲ್ಲಿದ್ದಾರೆ? ಅವರು 24 ಗಂಟೆ ರಾಜಕೀಯ ಪ್ರಚಾರ ಮತ್ತು ಷಡ್ಯಂತ್ರದಲ್ಲಿ ಬ್ಯುಸಿ ಆಗಿದ್ದಾರೆ’ ಎಂದು ಶಿವಸೇನೆಯ ಸಂಜಯ್​ ರಾವತ್​ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್