Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈದ್​’ ಹಬ್ಬಕ್ಕೆ ಸಲ್ಮಾನ್​ ಖಾನ್​ ಕಡೆಯಿಂದ ಸಿಗಲಿದೆ ಗಿಫ್ಟ್​: ಏನಿದು ಸರ್ಪ್ರೈಸ್​?

ನಟಿಸಿದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಾಗ ಸ್ಟಾರ್​ ಕಲಾವಿದರು ಕೂಡ ಎಚ್ಚರಿಕೆ ವಹಿಸಬೇಕಾಗುತ್ತದೆ. ಸಲ್ಮಾನ್​ ಖಾನ್​ ಅವರಿಗೂ ಅಂಥದ್ದೇ ಪರಿಸ್ಥಿತಿ ಬಂದಿದೆ. ಹಾಗಾಗಿ ಅವರು ಹೊಸ ಸಿನಿಮಾದ ಘೋಷಣೆಗೆ ಸಮಯ ತೆಗೆದುಕೊಂಡಿದ್ದಾರೆ. ಅವರ ಮುಂದಿನ ಸಿನಿಮಾದ ಶೀರ್ಷಿಕೆ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾತರರಾಗಿದ್ದಾರೆ.

‘ಈದ್​’ ಹಬ್ಬಕ್ಕೆ ಸಲ್ಮಾನ್​ ಖಾನ್​ ಕಡೆಯಿಂದ ಸಿಗಲಿದೆ ಗಿಫ್ಟ್​: ಏನಿದು ಸರ್ಪ್ರೈಸ್​?
ಸಲ್ಮಾನ್ ಖಾನ್​
Follow us
ಮದನ್​ ಕುಮಾರ್​
|

Updated on: Apr 10, 2024 | 6:14 PM

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಪ್ರಮಾಣದ ಗೆಲುವು ಸಿಕ್ಕಿಲ್ಲ. 2023ರ ನವೆಂಬರ್​ನಲ್ಲಿ ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ 3’ ಸಿನಿಮಾ ಬಿಡುಗಡೆ ಆಯಿತು. ಆ ಬಳಿಕ ಅವರು ನಟಿಸಲಿರುವ ಹೊಸ ಸಿನಿಮಾದ (Salman Khan New Movie) ಬಗ್ಗೆ ಘೋಷಣೆ ಆಗಿಲ್ಲ. ಈ ಕುರಿತಂತೆ ಒಂದು ಎಗ್ಸೈಟಿಂಗ್ ಸುದ್ದಿ ಕೇಳಿಬರುತ್ತಿದೆ. ಈಗ ಸಲ್ಮಾನ್​ ಖಾನ್​ ಅವರು ಹೊಸ ಸಿನಿಮಾ ಘೋಷಣೆಗೆ ಸಜ್ಜಾಗಿದ್ದಾರೆ. ಈದ್​ (Eid 2024) ಹಬ್ಬದ ಪ್ರಯುಕ್ತ ಅವರು ಅಭಿಮಾನಿಗಳಿಗೆ ಹೊಸ ಸಿನಿಮಾ ಟೈಟಲ್​ ತಿಳಿಸಲಿದ್ದಾರೆ ಎಂದು ವರದಿ ಆಗಿದೆ. ಆ ಮೂಲಕ ಅವರು ಹಬ್ಬದ ಗಿಫ್ಟ್​ ನೀಡಲಿದ್ದಾರೆ.

ಸಲ್ಮಾನ್​ ಖಾನ್​ ಮತ್ತು ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಜೊತೆಯಾಗಿ ಹೊಸ ಸಿನಿಮಾ ಮಾಡಲಿದ್ದಾರೆ ಎಂದು ಗಾಸಿಪ್​ ಹಬ್ಬಿದೆ. ಆ ಸಿನಿಮಾಗೆ ಎ.ಆರ್​. ಮುರುಗದಾಸ್​ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಪ್ರಾಜೆಕ್ಟ್​ ಬಗ್ಗೆ ಅಧಿಕೃತ ಘೋಷಣೆ ಆಗುವುದು ಬಾಕಿ ಇದೆ. ವರದಿಗಳ ಪ್ರಕಾರ ಈದ್​ ಹಬ್ಬದ ದಿನ, ಅಂದರೆ ಏಪ್ರಿಲ್​ 11ರಂದು ಸಲ್ಮಾನ್​ ಖಾನ್​ ಅವರ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ.

ಮೇ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಭಾರತ ಮತ್ತು ವಿದೇಶದ ಹಲವು ಲೊಕೇಷನ್​ಗಳಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ. 2025ರ ಈದ್​ ಹಬ್ಬದ ವೀಕೆಂಡ್​ನಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂದು ಗುರಿ ಇಟ್ಟುಕೊಳ್ಳಲಾಗಿದೆ. ಎ.ಆರ್​. ಮುರುಗದಾಸ್​ ಹಾಗೂ ಸಲ್ಮಾನ್​ ಖಾನ್​ ಅವರ ಕಾಂಬಿನೇಷನ್​ ಆದ್ದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ಸೋಲು ಕಂಡಾಗ ಸ್ಟಾರ್​ ನಟರು ಕೂಡ ಸ್ಕ್ರಿಪ್ಟ್ ಆಯ್ಕೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕಾಗುತ್ತದೆ. ಸಲ್ಮಾನ್​ ಖಾನ್​ ಅವರು ಬಹಳ ಕಾಳಜಿ ವಹಿಸಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ಹೊಸ ಸಿನಿಮಾ ಘೋಷಣೆಗೆ ಸಮಯ ತೆಗೆದುಕೊಂಡಿದ್ದಾರೆ. ಹೊಸ ಚಿತ್ರದ ಟೈಟಲ್​ ಏನು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾತರರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು