AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.4ಕ್ಕೆ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ತೆರೆಗೆ: ಗಲ್ವಾನ್ ಕಣಿವೆ ಘರ್ಷಣೆಯ ಸಿನಿಮಾ

‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಬಿಡುಗಡೆ ದಿನಾಂಕ ಸತತವಾಗಿ ಮುಂದೂಡಿಕೆ ಆಗುತ್ತಲೇ ಬಂದಿತ್ತು. ಈಗ ಅಂತಿಮವಾಗಿ ಈ ಚಿತ್ರದ ರಿಲೀಸ್ ದಿನಾಂಕವನ್ನು ನಟ ಸಲ್ಮಾನ್ ಖಾನ್ ಬಹಿರಂಗಪಡಿಸಿದ್ದಾರೆ. ಅಲ್ಲದೇ ಇಷ್ಟು ದಿನ ಸಿನಿಮಾ ಬಿಡುಗಡೆ ತಡವಾಗಿದ್ದಕ್ಕೆ ಕಾರಣವೇನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

ಡಿ.4ಕ್ಕೆ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ತೆರೆಗೆ: ಗಲ್ವಾನ್ ಕಣಿವೆ ಘರ್ಷಣೆಯ ಸಿನಿಮಾ
Salman Khan
ಮದನ್​ ಕುಮಾರ್​
|

Updated on: Nov 06, 2026 | 5:22 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ, ಬಹುನಿರೀಕ್ಷಿತ ಹಾಗೂ ಹಲವು ದಿನಗಳಿಂದ ವಿಳಂಬವಾಗಿದ್ದ ಯುದ್ಧ ಆಧಾರಿತ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರವು ಡಿಸೆಂಬರ್ 4ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಶುಕ್ರವಾರ (ನವೆಂಬರ್ 6) ಮುಂಬೈನಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಸ್ವತಃ ಸಲ್ಮಾನ್ ಖಾನ್ ಈ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. 2020ರಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಗಲ್ವಾನ್ ಕಣಿವೆ ಘರ್ಷಣೆಯ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾವನ್ನು ನಿರ್ಮಿಸಲಾಗಿದ್ದು, ಅಪೂರ್ವ ಲಖಿಯಾ ನಿರ್ದೇಶನ ಮಾಡಿದ್ದಾರೆ.

‘ಮಾತೃಭೂಮಿ’ ಚಿತ್ರದ ಬಿಡುಗಡೆ ವಿಳಂಬವಾದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಲ್ಮಾನ್, ‘ಇತ್ತೀಚಿನ ದಿನಗಳಲ್ಲಿ ದೃಶ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ವಿಶ್ಲೇಷಿಸುವ ತಜ್ಞರು ಹೆಚ್ಚಾಗಿದ್ದಾರೆ. ಹೀಗಾಗಿ ನಮ್ಮ ಚಿತ್ರದ ಯಾವುದೇ ದೃಶ್ಯವನ್ನು ಜೂಮ್ ಮಾಡಿ ಯಾರೂ ವಿಎಫ್‌ಎಕ್ಸ್ ಲೋಪಗಳನ್ನು ಎತ್ತಿ ತೋರಿಸಬಾರದು ಎಂಬುದು ನಮ್ಮ ಉದ್ದೇಶವಾಗಿತ್ತು. ಪ್ರೇಕ್ಷಕರಿಗೆ ಅದ್ಭುತ ದೃಶ್ಯ ವೈಭವದ ಅನುಭವ ನೀಡಲು ನಾವು ಶ್ರಮಿಸಿದ್ದೇವೆ’ ಎಂದರು.

ಮುಂದುವರಿದು ಮಾತನಾಡಿದ ಅವರು, ‘ನಾವು ಈ ಸಿನಿಮಾವನ್ನು 45ರಿಂದ 50 ದಿನಗಳಲ್ಲಿ ಮುಗಿಸುವ ಯೋಜನೆ ಹೊಂದಿದ್ದೆವು. ಆದರೆ ಸಹನಟಿ ಚಿತ್ರಾಂಗದಾ ಸಿಂಗ್ ಅವರು ಚಿತ್ರೀಕರಣದ ವೇಳೆ ಗಾಯಗೊಂಡಿದ್ದರಿಂದ ಅವರು ಚೇತರಿಸಿಕೊಳ್ಳಲು ಸಮಯ ಹಿಡಿಯಿತು. ಆರಂಭದಲ್ಲಿ ಜನವರಿ ಅಥವಾ ಜೂನ್‌ನಲ್ಲಿ, ನಂತರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ಯೋಚಿಸಿದ್ದೆವು. ಅಂತಿಮವಾಗಿ ಈಗ ಡಿಸೆಂಬರ್ 4ಕ್ಕೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು.

ಈ ಮೊದಲು ‘ಬ್ಯಾಟಲ್ ಆಫ್ ಗಲ್ವಾನ್’ ಎಂಬ ಶೀರ್ಷಿಕೆ ಹೊಂದಿದ್ದ ಈ ಚಿತ್ರಕ್ಕೆ ನಂತರ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಎಂದು ಮರುನಾಮಕರಣ ಮಾಡಲಾಗಿತ್ತು. 2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ 16 ಬಿಹಾರ್ ರೆಜಿಮೆಂಟ್‌ನ 20 ಭಾರತೀಯ ಯೋಧರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದರು.

ಇದನ್ನೂ ಓದಿ: 11 ವರ್ಷಗಳ ಬಳಿಕ ಹಾಡು ಹಾಡಿದ ಸಲ್ಮಾನ್ ಖಾನ್: ‘ಮಾತೃಭೂಮಿ’ ಚಿತ್ರದ ಹೊಸ ಸಾಂಗ್ ರಿಲೀಸ್

ಈ ಘರ್ಷಣೆಯಲ್ಲಿ ವೀರಮರಣ ಅಪ್ಪಿದ ಕಮಾಂಡಿಂಗ್ ಆಫೀಸರ್ ಬಿಕ್ಕುಮಲ್ಲ ಸಂತೋಷ್ ಬಾಬು ಅವರ ಪಾತ್ರದಲ್ಲಿ ಸಲ್ಮಾನ್ ಖಾನ್ ನಟಿಸಿದ್ದಾರೆ. ಕಳೆದ ವರ್ಷ ತಮ್ಮ 60ನೇ ಜನ್ಮದಿನದಂದು ಸಲ್ಮಾನ್ ಖಾನ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಆದರೆ ಚೀನಾದ ಸರ್ಕಾರಿ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ಈ ಟೀಸರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಸಿನಿಮಾವು ನೈಜ ಘಟನೆಗಳನ್ನು ತಿರುಚಿ, ಅತಿಯಾಗಿ ವೈಭವೀಕರಿಸಿ ತೋರಿಸುತ್ತಿದೆ ಎಂದು ಆರೋಪಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More