Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಸಲ್ಲು?

Salman Khan Net Worth: ಸಲ್ಮಾನ್ ಖಾನ್ ಮಾಸ್ ಸಿನಿಮಾಗಳ ಮೂಲಕ ಗಮನ ಸೆಳೆದವರು. ಅವರು ಪ್ರತಿ ಚಿತ್ರಕ್ಕೆ 100 ಕೋಟಿ ರೂಪಾಯಿಗೂ ಮೀರಿ ಸಂಭಾವನೆ ಪಡೆಯುತ್ತಾರೆ.

ಎರಡು ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಸಲ್ಲು?
ಸಲ್ಮಾನ್ ಖಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Aug 02, 2023 | 9:10 AM

ಬಾಲಿವುಡ್ ಸ್ಟಾರ್  ನಟ ಸಲ್ಮಾನ್ ಖಾನ್ (Salman Khan) ಅವರ ಬೇಡಿಕೆ ವರ್ಷ ಕಳೆದಂತೆ ಹೆಚ್ಚುತ್ತಿದೆ. ಅವರನ್ನು ಎಲ್ಲರೂ ಪ್ರೀತಿಯಿಂದ ಸಲ್ಲು ಭಾಯ್​ ಎಂದು ಕರೆಯುತ್ತಾರೆ. ಅವರು ನಟಿಸುವ ಬಹುತೇಕ ಸಿನಿಮಾಗಳು ದೊಡ್ಡ ಮಟ್ಟದ ಬಿಸ್ನೆಸ್ ಮಾಡುತ್ತವೆ. ಈ ಕಾರಣಕ್ಕೆ ಪ್ರತಿ ಚಿತ್ರಕ್ಕೆ ಅವರು ಕೋಟಿಕೋಟಿ ಸಂಭಾವನೆ ಜೇಬಿಗೆ ಇಳಿಸಿಕೊಳ್ಳುತ್ತಾರೆ. ಸಲ್ಮಾನ್ ಖಾನ್ ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಕ್ಕರೂ ನಿರ್ಮಾಪಕರು ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಟಿವಿ, ಒಟಿಟಿ ಹಾಗೂ ಮ್ಯೂಸಿಕ್ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗುತ್ತದೆ. ಇದರಿಂದ ನಿರ್ಮಾಪಕರಿಗೆ ಮಿನಿಮಮ್ ಲಾಭ ಅಂತೂ ಆಗುತ್ತದೆ. ಸಲ್ಲುಗೆ ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಹಾಗಂತ ಅವರ ಬೇಡಿಕೆ ಕಡಿಮೆ ಆಗಿಲ್ಲ. ಹೊಸ ಹೊಸ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಸಲ್ಲು ಅವರ ಒಟ್ಟೂ ಆಸ್ತಿ​ ಎಷ್ಟಿದೆ? ಅವರು ಪ್ರತಿ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ? ಎಲ್ಲೆಲ್ಲಿ ಪ್ರಾಪರ್ಟಿ ಹೊಂದಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಸಲ್ಮಾನ್ ಖಾನ್ ಮಾಸ್ ಸಿನಿಮಾಗಳ ಮೂಲಕ ಗಮನ ಸೆಳೆದವರು. ಅವರು ಪ್ರತಿ ಚಿತ್ರಕ್ಕೆ 100 ಕೋಟಿ ರೂಪಾಯಿಗೂ ಮೀರಿ ಸಂಭಾವನೆ ಪಡೆಯುತ್ತಾರೆ. ನಿರ್ಮಾಪಕರು ಕೂಡ ಯಾವುದೇ ಭಯ ಇಲ್ಲದೆ ಹೂಡಿಕೆ ಮಾಡುತ್ತಾರೆ. 2016ರ ‘ಸುಲ್ತಾನ್​’ ಚಿತ್ರಕ್ಕೆ ಅವರು 100 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ‘ಟೈಗರ್ ಜಿಂದಾ ಹೈ’ ಚಿತ್ರಕ್ಕಾಗಿ 130 ಕೋಟಿ ರೂಪಾಯಿ ಹಣ ಪಡೆದಿದ್ದರು. ಇದು ಸಣ್ಣ ಮಾತಲ್ಲ.

ಸಲ್ಮಾನ್ ಖಾನ್ ಆದಾಯ ಮೂಲ ಕೇವಲ ಸಿನಿಮಾಗೆ ಸೀಮಿತ ಆಗಿಲ್ಲ. ಅವರು ಹಲವು ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಬಿಗ್ ಬಾಸ್ ಶೋ ನಡೆಸಿಕೊಡುತ್ತಾರೆ. ಸಲ್ಮಾನ್ ಖಾನ್ ಆಸ್ತಿ 2,225 ಕೋಟಿ ರೂಪಾಯಿಗೂ ಹೆಚ್ಚಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿತ್ತು. ಅವರ ಬಳಿ ಹಲವು ಐಷಾರಾಮಿ ಕಾರುಗಳೂ ಇವೆ. ಕೊಲೆ ಬೆದರಿಕೆ ಬಂದಿದ್ದರಿಂದ ಅವರು ಬುಲೆಟ್​ಪ್ರೂಫ್​ ಕಾರು ಖರೀದಿಸಿದ್ದಾರೆ.

ಸಲ್ಮಾನ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿವೆ. ಹೀಗಾಗಿ ಅವರು ಮೊದಲಿನಿಂದಲೂ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮುಂಬೈನ ಪ್ರತಿಷ್ಠಿತ ಜಾಗಗಳಲ್ಲಿ ಒಂದಾದ ಬಾಂದ್ರಾದಲ್ಲಿ ಅವರು ಅಪಾರ್ಟ್​ಮೆಂಟ್ ಹೊಂದಿದ್ದಾರೆ. ಪನ್ವೇಲ್​ನಲ್ಲಿ ಸಲ್ಮಾನ್ ಖಾನ್ ಅವರ ದೊಡ್ಡ ಫರ್ಮ್​​ಹೌಸ್ ಇದೆ. ಇದು ನೂರಾರು ಕೋಟಿ ರೂಪಾಯಿ ಬೆಲೆ ಬಾಳುತ್ತದೆ.

ಸಲ್ಮಾನ್ ಖಾನ್ ಅವರು ಪ್ರತಿ ತಿಂಗಳು ಸಂಭಾವನೆ ಎಣಿಸುತ್ತಾರೆ. ಅವರಿಗೆ ಪ್ರತಿ ತಿಂಗಳು 16 ಕೋಟಿ ರೂಪಾಯಿ ವೇತನ ಬರುತ್ತದೆ. ಅಂದರೆ, ವಿವಿಧ ಬ್ರ್ಯಾಂಡ್​ಗಳ ಪ್ರಚಾರ ರಾಯಭಾರಿ ಆಗಿರುವುದರಿಂದ ಅದರಿಂದ ಅವರಿಗೆ ಹಣ ಸಿಗುತ್ತದೆ.

ಇದನ್ನೂ ಓದಿ: ಅತಿಯಾದ ಕೋಪದ ಕಾರಣಕ್ಕೆ ಬಿಗ್​ ಬಾಸ್​ ನಿರೂಪಣೆಯಿಂದ ಹೊರನಡೆದ್ರಾ ಸಲ್ಮಾನ್​ ಖಾನ್​?

ಯಶ್ ರಾಜ್ ಫಿಲ್ಮ್ಸ್ ಸಂಸ್ಥೆ ‘ಟೈಗರ್ 3’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಅವರು ಪಡೆದ ಸಂಭಾವನೆ 100+ ಕೋಟಿ ರೂಪಾಯಿ. ಶಾರುಖ್​ ಖಾನ್ ಅಭಿನಯದ ‘ಪಠಾಣ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಆದರೆ, ಇದಕ್ಕೆ ಅವರು ಹಣ ಪಡೆದಿಲ್ಲ. ‘ಪಠಾಣ್​ Vs ಟೈಗರ್’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Wed, 2 August 23

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ