ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು

ವೇದಿಕೆಯಲ್ಲಿ ನಟ ಸಲ್ಮಾನ್ ಖಾನ್ ಅವರ ಹೊಸ ಲುಕ್ ನೋಡಿ, ಪಕ್ಕದಲ್ಲಿದ್ದ ಕರೀನಾ ಕಪೂರ್ ಖಾನ್ ಅವರಿಗೂ ಅಚ್ಚರಿ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರಿಗೆ ‘ತೇರೆ ನಾಮ್’ ಸಿನಿಮಾದ ಪಾತ್ರವೇ ನೆನಪಾಗಿದೆ.

ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು
Salman Khan

Updated on: Jun 14, 2026 | 1:13 PM

ಭಾರತೀಯ ಚಿತ್ರರಂಗದ ಮಹತ್ವದ ಸಿನಿಮಾಗಳಲ್ಲಿ ಒಂದಾದ, ಆಮಿರ್ ಖಾನ್ ನಟನೆಯ ‘ಲಗಾನ್’ (Lagaan) ಸಿನಿಮಾ ಬಿಡುಗಡೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಅದ್ಧೂರಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವಿಶೇಷ ಸಂಭ್ರಮಾಚರಣೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan), ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಖಾನ್ ಸೇರಿದಂತೆ ಹಲವು ತಾರೆಯರು ಸಾಕ್ಷಿಯಾಗಿದ್ದರು. ವೇದಿಕೆ ಮೇಲೆ ಸಲ್ಮಾನ್ ಮತ್ತು ಆಮಿರ್ ಒಟ್ಟಿಗೆ ಕಾಣಿಸಿಕೊಂಡಿದ್ದನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಯಾದರು. ಹಾಗಿದ್ದರೂ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಸಲ್ಲು ಭಾಯ್ ಅವರ ಹೊಚ್ಚ ಹೊಸ ಲುಕ್ ಮೇಲೆ!

ಹೌದು, ಸಲ್ಮಾನ್ ಖಾನ್ ಸಂಪೂರ್ಣವಾಗಿ ವಿಭಿನ್ನ ಹಾಗೂ ರಗಡ್ ಮೇಕ್ ಓವರ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನೀಟಾಗಿ ಟ್ರಿಮ್ ಮಾಡಿದ ಗಡ್ಡ ಮತ್ತು ಶಾರ್ಟ್ ಬಝ್-ಕಟ್ ಹೇರ್‌ಸ್ಟೈಲ್‌ನಲ್ಲಿ ಸಲ್ಮಾನ್ ಸಖತ್ ಫಿಟ್ ಹಾಗೂ ಹ್ಯಾಂಡ್ಸಮ್ ಆಗಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ವಿಡಿಯೋ ವೈರಲ್ ಆಗಿದೆ.

ಸಲ್ಮಾನ್ ಖಾನ್ ಅವರ ಈ ಹೊಸ ಅವತಾರ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಸಲ್ಮಾನ್ ಅವರ ಬ್ಲಾಕ್‌ಬಸ್ಟರ್ ‘ತೇರೆ ನಾಮ್’ ಸಿನಿಮಾದ ‘ರಾಧೆ’ ಪಾತ್ರವನ್ನು ಅಭಿಮಾನಿಗಳು ಈ ನೆನಪಿಸಿಕೊಳ್ಳುತ್ತಿದ್ದಾರೆ. ‘ಭಾಯ್ ನಿಜವಾದ ತೇರೆ ನಾಮ್ ಕ್ಯಾರೆಕ್ಟರ್ ತರಹ ಕಾಣುತ್ತಿದ್ದಾರೆ’, ‘ರಾಧೆ ಕಮ್‌ಬ್ಯಾಕ್ 2027’, ‘ರಿಯಲ್ ಲೈಫ್‌ನಲ್ಲಿ ತೇರೆ ನಾಮ್ 2 ರಿಲೀಸ್ ಆಗುತ್ತಿದೆ’ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ವೈರಲ್ ವಿಡಿಯೋ:

ಇನ್ನೂ ಕೆಲವರು ಸಲ್ಮಾನ್ ಖಾನ್ ಅವರ ರಗಡ್ ಲುಕ್ ನೋಡಿ ‘ಗ್ಯಾಂಗ್‌ಸ್ಟರ್ ಸಲ್ಲು’ ಮತ್ತು ‘ಬಾಪ್ ಆಫ್ ಬಾಲಿವುಡ್’ ಎಂದು ಹೊಗಳುತ್ತಿದ್ದಾರೆ. ಇದರ ಮಧ್ಯೆ ಕೆಲವರು ತಮಾಷೆಯಾಗಿ ‘ಐಶ್ವರ್ಯಾ ರೈ ಅವರು ಭಾಯ್‌ಜಾನ್ ಅವರನ್ನು ಹುಚ್ಚರನ್ನಾಗಿ ಮಾಡಿಬಿಟ್ಟಿದ್ದಾರೆ’ ಎಂದು ಕಮೆಂಟ್ ಮಾಡುವ ಮೂಲಕ ಹಳೆಯ ನೆನಪನ್ನು ಕೆದಕಿದ್ದಾರೆ. ಸದ್ಯಕ್ಕೆ ಈ ಲುಕ್​ಗೆ ಕಾರಣ ಏನು ಎಂಬುದು ಗೌಪ್ಯವಾಗಿದೆ.

ಇದನ್ನೂ ಓದಿ: ‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಈ ಹೊಸ ಲುಕ್ ಅನ್ನು ತಮ್ಮ ಮುಂಬರುವ ಚಿತ್ರಕ್ಕಾಗಿ ಮಾಡಿಕೊಂಡಿದ್ದಾರೆ ಎಂದು ಊಹಿಸಲಾಗುತ್ತಿದೆ. ಕಳೆದ ತಿಂಗಳಷ್ಟೇ ಸಲ್ಮಾನ್ ಖಾನ್ ಅವರು ನಿರ್ದೇಶಕ ವಂಶಿ ಪೈಡಿಪಲ್ಲಿ ಅವರೊಂದಿಗೆ ಹೊಸ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿದ್ದರು. ಸದ್ಯಕ್ಕೆ ‘SVC63’ ಎಂದು ಕರೆಯಲಾಗುತ್ತಿರುವ ಈ ಬಿಗ್ ಬಜೆಟ್ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ‘ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್’ ನಿರ್ಮಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us