‘ಆ ಜಾಗ ಇನ್ನೂ ಕಾಡುತ್ತದೆ’; ಹಿಟ್ ಆ್ಯಂಡ್ ರನ್ ಕೇಸ್ ಬಗ್ಗೆ ಮಾತನಾಡಿದ್ದ ಸಲ್ಮಾನ್ ಖಾನ್

2002ರ ಸೆಪ್ಟೆಂಬರ್​ 28ರಂದು ಮುಂಬೈನ ಬಾಂದ್ರಾದಲ್ಲಿ ಸಲ್ಲು ಒಡೆತನದ ಟೊಯಾಟೋ ಲ್ಯಾಂಡ್ ಕ್ರೂಸರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ರಜತ್ ಶರ್ಮಾ ಅವರು ನಡೆಸಿಕೊಡುವ ‘ಆಪ್​ ಕಿ ಅದಾಲತ್’ ಕಾರ್ಯಕ್ರಮಕ್ಕೆ ಸಲ್ಮಾನ್ ಖಾನ್ ಅವರು ಆಗಮಿಸಿದ್ದರು. ಈ ವೇಳೆ ಅವರು ಘಟನೆ ಬಗ್ಗೆ ಮಾತನಾಡಿದ್ದರು.

‘ಆ ಜಾಗ ಇನ್ನೂ ಕಾಡುತ್ತದೆ’; ಹಿಟ್ ಆ್ಯಂಡ್ ರನ್ ಕೇಸ್ ಬಗ್ಗೆ ಮಾತನಾಡಿದ್ದ ಸಲ್ಮಾನ್ ಖಾನ್
ಸಲ್ಮಾನ್ ಖಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 19, 2024 | 7:33 AM

2002ರ ಸೆಪ್ಟೆಂಬರ್​ 28ರಂದು ಮುಂಬೈನ ಬಾಂದ್ರಾದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿತ್ತು. ಟೊಯಾಟೋ ಲ್ಯಾಂಡ್ ಕ್ರೂಸರ್ ಕಾರು ಬೇಕರಿ ಸಮೀಪ ಮಲಗಿದ್ದ ವ್ಯಕ್ತಿಗಳ ಮೇಲೆ ಹರಿದಿತ್ತು. ಇದರಿಂದ ಒಬ್ಬರು ಸತ್ತರೆ, ಹಲವರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಇದ್ದಿದ್ದು ಬಾಲಿವುಡ್​ನ ಸ್ಟಾರ್ ಹೀರೋ ಸಲ್ಮಾನ್ ಖಾನ್ (Salman Khan). ಅಸಲಿಗೆ ಅವರು ಈ ಪ್ರಕರಣದಲ್ಲಿ ತಮ್ಮ ಕೈವಾಡ ಇಲ್ಲ ಎಂದು ಹೇಳಿಕೊಂಡಿದ್ದರು. ತಾವು ಹಿಂದೆ ಕೂತಿದ್ದಾಗಿಯೂ, ಡ್ರೈವರ್ ಕಾರು ಓಡಿಸುತ್ತಿದ್ದಾಗಿಯೂ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ಈಗ ಮತ್ತೆ ವೈರಲ್ ಆಗಿದೆ.

ರಜತ್ ಶರ್ಮಾ ಅವರು ನಡೆಸಿಕೊಡುವ ‘ಆಪ್​ ಕಿ ಅದಾಲತ್’ ಕಾರ್ಯಕ್ರಮಕ್ಕೆ ಸಲ್ಮಾನ್ ಖಾನ್ ಅವರು ಆಗಮಿಸಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಅಂದು ನಡೆದ ಘಟನೆಯನ್ನು ನೆನಪಿಸಿಕೊಂಡಿದ್ದರು. ‘ನನಗೆ ಆ ಘಟನೆ ಬಗ್ಗೆ ಈಗಲೂ ಬೇಸರ ಇದೆ. ಮನೆಗೆ ಹೋಗುವಾಗ ನನಗೆ ಆ ಘಟನೆ ನೆನಪಾಗುತ್ತದೆ. ಘಟನೆ ನಡೆದ ಜಾಗದಲ್ಲಿ ಪ್ರತಿ ಬಾರಿ ಬಲಕ್ಕೆ ತಿರುಗುವಾಗ ನನಗೆ ನೋವಾಗುತ್ತದೆ, ಕಾಡುತ್ತದೆ’ ಎಂದು ಸಲ್ಮಾನ್ ಖಾನ್ ಹೇಳಿದ್ದರು.

‘ಇದರಷ್ಟು ಕೆಟ್ಟ ಘಟನೆ ಮತ್ತೊಂದು ನಡೆಯೋಕೆ ಸಾಧ್ಯವಿಲ್ಲ. ಡ್ರೈವರ್ ಗಾಡಿ ಓಡಿಸುತ್ತಿದ್ದರು. ನಾನು ಹಾಗೂ ಕಮಾಲ್ ಹಿಂದೆ ಕೂತಿದ್ದೆವು. ರಸ್ತೆಯ ಮೇಲೆ ಕಲ್ಲಿತ್ತು. ಡ್ರೈವರ್ ಬ್ರೇಕ್ ಹಾಕಿದ. ಇದರಿಂದ ಕಾರು ಸ್ಕಿಡ್ ಆಯಿತು’ ಎಂದು ಅವರು ಹೇಳಿಕೊಂಡಿದ್ದರು. ಜೊತೆಗೆ ತಮ್ಮ ಕಾರಿನಿಂದ ಈ ಘಟನೆ ನಡೆಯಿತಲ್ಲ ಎನ್ನುವ ಬೇಸರ ಅವರಿಗೆ ಇದೆಯಂತೆ.

ಕಾರು ತುಂಬಾನೇ ಸ್ಪೀಡ್ ಇತ್ತು ಎಂದು ಅನೇಕರು ಆರೋಪಿಸಿದ್ದಿದೆ. ಇದಕ್ಕೂ ಸಲ್ಮಾನ್ ಖಾನ್ ಉತ್ತರಿಸಿದ್ದರು. ‘ಕಾರು 180-200 ಕಿಮೀ ಸ್ಪೀಡ್​ನಲ್ಲಿ ಇತ್ತು ಎಂದು ಅನೇಕರು ಆರೋಪಿಸುತ್ತಾರೆ. ಪ್ರೊಫೆಷನಲ್ ರೇಸರ್​ಗಳಿಗೆ ಕಾರು ನೀಡಿದರೂ ಅವರು ಅಲ್ಲಿ ಅಷ್ಟು ವೇಗದಲ್ಲಿ ಅಲ್ಲಿ ಕಾರು ಓಡಿಸೋಕೆ ಸಾಧ್ಯವಿಲ್ಲ’ ಎಂದು ಸಲ್ಲು ಹೇಳಿದ್ದರು. ಹಿಟ್ ಆ್ಯಂಡ್ ರನ್ ಕೇಸ್ ಘಟನೆ ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ಸಲ್ಮಾನ್ ಖಾನ್ ಅವರ ಈ ಹೇಳಿಕೆ ಕೂಡ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಆಸ್ಕರ್ ಲೆವೆಲ್ ಸ್ಟೋರಿ’ ಎಂದು ಅನೇಕರು ಟೀಕೆ ಮಾಡಿದ್ದರು. ‘ಇದೊಂದೇ ಬಾರಿ ಸಲ್ಮಾನ್ ಖಾನ್ ಅವರು ಉತ್ತಮವಾಗಿ ನಟಿಸಿದ್ದರು’ ಎಂದು ಕೆಲವರು ಕಮೆಂಟ್ ಮಾಡಿದ್ದರು.  ‘ದೃಶ್ಯಂ ಸಿನಿಮಾದ ಕಥೆಯಂತೆ ಇದೆ’ ಎಂದು ಕೂಡ ಕೆಲವರು ಟೀಕೆ ಮಾಡಿದ್ದರು.

ಇದನ್ನೂ ಓದಿ: ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

ಸಲ್ಮಾನ್ ಖಾನ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರ ಮನೆಯ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಗುಂಡು ಹಾರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ಸಲ್ಮಾನ್​ಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ