AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲ್ಮಾನ್ ಫಾರ್ಮ್‌ಹೌಸ್‌ಗೆ ಹೋಗೋದು ಸುಲಭ, ಆದ್ರೆ ವಾಪಸ್ ಬರೋದು ಭಾಯ್ ಇಷ್ಟ’

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಪನ್ವೇಲ್ ಫಾರ್ಮ್‌ಹೌಸ್‌ಗೆ ಪ್ರವೇಶ ಪಡೆಯುವುದು ಹೇಗೆ ಮತ್ತು ಅಲ್ಲಿಂದ ಹೊರಡಲು 'ಭಾಯ್' ಪರ್ಮಿಷನ್ ಯಾಕೆ ಬೇಕು ಎಂಬ ಆಸಕ್ತಿದಾಯಕ ಸೀಕ್ರೆಟ್‌ಗಳನ್ನು ನಟನ ಭಾವ ಆಯುಷ್ ಶರ್ಮಾ ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಸಲ್ಮಾನ್ ಫಾರ್ಮ್‌ಹೌಸ್‌ಗೆ ಹೋಗೋದು ಸುಲಭ, ಆದ್ರೆ ವಾಪಸ್ ಬರೋದು ಭಾಯ್ ಇಷ್ಟ’
ಸಲ್ಮಾನ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 21, 2026 | 11:05 AM

Share

ಮುಖ್ಯಾಂಶಗಳು

  • ಸಲ್ಮಾನ್ ಖಾನ್ ಫಾರ್ಮ್‌ಹೌಸ್ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಇದು
  • ಬರಬಹುದು ಆದ್ರೆ ಹೋಗೋ ಹಾಗಿಲ್ಲ
  • 'ಭಾಯ್‌ಜಾನ್' ಗ್ರೀನ್ ಸಿಗ್ನಲ್ ನೀಡೋವರೆಗೂ ಅತಿಥಿಗಳಿಗೆ ನೋ ಎಕ್ಸಿಟ್

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಪನ್ವೇಲ್ ಫಾರ್ಮ್‌ಹೌಸ್ ಸದಾ ಸುದ್ದಿಯಲ್ಲಿರುತ್ತದೆ. ಸಿನಿಮಾ ತಾರೆಯರು ಹಾಗೂ ಆಪ್ತರಿಂದ ತುಂಬಿ ತುಳುಕುವ ಈ ಐಷಾರಾಮಿ ಫಾರ್ಮ್‌ಹೌಸ್ ಪ್ರವೇಶದ ಬಗ್ಗೆ ನಟನ ಸೋದರ ಭಾವ ಆಯುಷ್ ಶರ್ಮಾ ಇತ್ತೀಚಿನ ಸಂದರ್ಶನವೊಂದರಲ್ಲಿ ಅತ್ಯಂತ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಪ್ರವೇಶಕ್ಕೂ ಮುನ್ನ ಸಲ್ಮಾನ್ ಪರ್ಮಿಷನ್ ಕಡ್ಡಾಯ

‘ದಿ ಲಲ್ಲನ್‌ಟಾಪ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಯುಷ್, ‘ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ಗೆ ಯಾರೂ ಅಷ್ಟು ಸುಲಭವಾಗಿ ಹೋಗಲು ಸಾಧ್ಯವಿಲ್ಲ. ಸ್ವತಃ ಸಲ್ಮಾನ್ ಅವರೇ ಆಹ್ವಾನ ನೀಡಿದವರಿಗೆ ಮಾತ್ರ ಅಲ್ಲಿಗೆ ಎಂಟ್ರಿ ಇರುತ್ತದೆ. ಭಾಯ್ ಅನುಮತಿಯಿಲ್ಲದೆ ಯಾರೂ ಆ ಜಾಗಕ್ಕೆ ಕಾಲಿಡಲು ಸಾಧ್ಯವಿಲ್ಲ’ ಎಂದಿದ್ದಾರೆ.

ಹೋಗೋದು ನಿಮ್ಮಿಷ್ಟ, ವಾಪಸ್ ಬರೋದು ಸಲ್ಮಾನ್ ಇಷ್ಟ

ಫಾರ್ಮ್‌ಹೌಸ್ ಒಳಗಿನ ಮತ್ತೊಂದು ಮಜಾದ ವಿಚಾರವನ್ನು ಹಂಚಿಕೊಂಡ ಆಯುಷ್, ‘ಅಲ್ಲಿಗೆ ಹೋದ ಮೇಲೆ ಇನ್ನೊಂದು ಕುತೂಹಲಕಾರಿ ಘಟನೆ ನಡೆಯುತ್ತದೆ. ಅತಿಥಿಗಳು ತಮ್ಮ ಇಷ್ಟದಂತೆ ಅಲ್ಲಿಗೆ ಹೋಗಬಹುದು. ಆದರೆ, ಅಲ್ಲಿಂದ ಯಾವಾಗ ಹೊರಡಬೇಕು ಎಂಬುದನ್ನು ಸಲ್ಮಾನ್ ಖಾನ್ ಅವರೇ ನಿರ್ಧರಿಸುತ್ತಾರೆ! ಅವರು ಗ್ರೀನ್ ಸಿಗ್ನಲ್ ಕೊಡುವವರೆಗೂ ಅತಿಥಿಗಳು ಅಲ್ಲೇ ಕಾಯಬೇಕಾಗುತ್ತದೆ’ ಎಂದು ನಗುತ್ತಾ ರಹಸ್ಯ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ?

ಮೊದಲ ಭೇಟಿಯಲ್ಲೇ ಕಿವಿಮಾತು ಹೇಳಿದ್ದ ಭಾಯ್‌ಜಾನ್

ಇದೇ ಸಂದರ್ಶನದಲ್ಲಿ ಆಯುಷ್, ತಾವು ನಟನಾಗಲು ಹೆಣಗಾಡುತ್ತಿದ್ದ ದಿನಗಳಲ್ಲಿ ಸಲ್ಮಾನ್ ಖಾನ್ ಅವರನ್ನು ಮೊದಲ ಬಾರಿಗೆ ಭೇಟಿಯಾದ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ‘ಆಗ ಸಲ್ಮಾನ್ ನನ್ನನ್ನು ನೋಡಿ, ನಿನ್ನಲ್ಲಿ ಉತ್ತಮ ನಟನಾಗುವ ಸಾಮರ್ಥ್ಯವಿದೆ. ಆದರೆ ನೀನಿನ್ನೂ ಸಂಪೂರ್ಣವಾಗಿ ಸಿದ್ಧವಾಗಿಲ್ಲ ಎಂದು ನೇರವಾಗಿಯೇ ಹೇಳಿದರು. ಅಲ್ಲದೆ, ನಟನೆಯ ಜೊತೆಗೆ ಇತರ ವಿಷಯಗಳ ಮೇಲೂ ಗಮನಹರಿಸಿ ಶ್ರಮಪಡುವಂತೆ ಸಲಹೆ ನೀಡಿದ್ದರು’ ಎಂದು ಹಳೇ ನೆನಪನ್ನು ಹಂಚಿಕೊಂಡಿದ್ದಾರೆ.

ಖಾಸಗಿ ಬದುಕಿನ ಝಲಕ್

ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಮತ್ತು ಆಯುಷ್ ಶರ್ಮಾ ಅವರ ವಿವಾಹವು ನವೆಂಬರ್ 18, 2014ರಂದು ಹೈದರಾಬಾದ್‌ನ ಐತಿಹಾಸಿಕ ಫಲಕ್ನುಮಾ ಅರಮನೆಯಲ್ಲಿ ನಡೆದಿತ್ತು. ಪ್ರಸ್ತುತ ಈ ದಂಪತಿಗೆ ಅಹಿಲ್ ಮತ್ತು ಆಯತ್ ಎಂಬ ಇಬ್ಬರು ಮಕ್ಕಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ