AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸುತ್ತ ಬಂದ ಸಿಕಂದರ್ ಟೀಸರ್; ಖುಷಿಯಾದ ಸಲ್ಮಾನ್ ಖಾನ್ ಫ್ಯಾನ್ಸ್

ಅದ್ದೂರಿಯಾಗಿ ಮೂಡಿಬಂದಿರುವ ‘ಸಿಕಂದರ್’ ಸಿನಿಮಾ ಟೀಸರ್ ಬಿಡುಗಡೆ ಆಗಿದೆ. ಸಲ್ಮಾನ್ ಖಾನ್ ಅವರು ಈ ಚಿತ್ರದಲ್ಲಿ ಆ್ಯಕ್ಷನ್ ಅವತಾರ ತಾಳಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈದ್ ಪ್ರಯುಕ್ತ ಸಿಕಂದರ್ ರಿಲೀಸ್ ಆಗಲಿದೆ. ‘ಗಜಿನಿ’ ಖ್ಯಾತಿಯ ಎ.ಆರ್. ಮುರುಗದಾಸ್ ಅವರು ‘ಸಿಕಂದರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಅಬ್ಬರಿಸುತ್ತ ಬಂದ ಸಿಕಂದರ್ ಟೀಸರ್; ಖುಷಿಯಾದ ಸಲ್ಮಾನ್ ಖಾನ್ ಫ್ಯಾನ್ಸ್
Salman Khan
ಮದನ್​ ಕುಮಾರ್​
|

Updated on: Feb 27, 2025 | 9:01 PM

Share

ಸಲ್ಮಾನ್ ಖಾನ್ ನಟನೆಯ ಸಿನಿಮಾ ಎಂದರೆ ಮಾಸ್ ಆಗಿರಲೇಬೇಕು. ಭರ್ಜರಿ ಆ್ಯಕ್ಷನ್, ಪಂಚಿಂಗ್ ಡೈಲಾಗ್​ ಇರಲೇಬೇಕು. ಅಂಥ ಎಲ್ಲ ನಿರೀಕ್ಷೆಗಳನ್ನು ಪೂರೈಸುವ ರೀತಿಯಲ್ಲಿ ‘ಸಿಕಂದರ್’ ಸಿನಿಮಾದ ಟೀಸರ್​ ಮೂಡಿಬಂದಿದೆ. ಇಂದು (ಫೆಬ್ರವರಿ 27) ‘ಸಿಕಂದರ್’ ಟೀಸರ್​ (Sikandar Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಲ್ಮಾನ್ ಖಾನ್ (Salman Khan) ಅವರು ಮಾಸ್ ಅವತಾರ ತಾಳಿದ್ದಾರೆ. ಫೈಟಿಂಗ್ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ. ಟೀಸರ್ ನೋಡಿದ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಖುಷಿ ಆಗಿದೆ. ಟೀಸರ್​ ಕಂಡು ಬಗೆಬಗೆಯಲ್ಲಿ ಪ್ರತಿಕ್ರಿಯೆ ನೀಡಲಾಗುತ್ತಿದೆ.

ಎ.ಆರ್. ಮುರುಗದಾಸ್ ಅವರು ‘ಸಿಕಂದರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಭಾರಿ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ. ಅದರ ಝಲಕ್ ತೋರಿಸಲು ಈಗ ಟೀಸರ್ ಅನಾವರಣ ಮಾಡಲಾಗಿದೆ. ಒಂದು ಗ್ಯಾಪ್ ಬಳಿಕ ಸಲ್ಮಾನ್ ಖಾನ್ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಸಿಕಂದರ್ ಟೀಸರ್​ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ
Image
ಹಾಲಿವುಡ್ ಸಿನಿಮಾದಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್; ಸಿಕ್ತು ಬಿಗ್ ನ್ಯೂಸ್
Image
ಜೈಲಿನ ದಿನಗಳನ್ನು ನೆನಪಿಸಿಕೊಂಡ ಬಾಲಿವುಡ್ ನಟ ಸಲ್ಮಾನ್ ಖಾನ್
Image
ಶಾರುಖ್ ಖಾನ್-ಸಲ್ಮಾನ್ ಖಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದು ನಿಜವೇ?
Image
ಜೀವ ಬೆದರಿಕೆ ನಡುವೆಯೂ ಚಿತ್ರೀಕರಣಕ್ಕೆ ಮರಳಲಿರುವ ಸಲ್ಮಾನ್ ಖಾನ್​

ಸಿಕಂದರ್ ಟೀಸರ್:

‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಈಗಾಗಲೇ ‘ಅನಿಮಲ್’, ‘ಛಾವ’ ಸಿನಿಮಾಗಳ ಅಭೂತಪೂರ್ವ ಸಕ್ಸಸ್ ಮೂಲಕ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರು ಮತ್ತೊಂದು ಗೆಲುವಿಗಾಗಿ ಎದುರು ನೋಡುತ್ತಿದ್ದಾರೆ. ‘ಸಿಕಂದರ್’ ಮೂಲಕ ಅವರು ಮತ್ತೆ ಸಕ್ಸಸ್ ಕಾಣುವ ಸಾಧ್ಯತೆ ದಟ್ಟವಾಗಿದೆ.

ಈ ವರ್ಷ ಈದ್ ಹಬ್ಬದ ಪ್ರಯುಕ್ತ ‘ಸಿಕಂದರ್’ ಸಿನಿಮಾ ಬಿಡುಗಡೆ ಆಗಲಿದೆ. ಸಲ್ಮಾನ್ ಖಾನ್ ಸಿನಿಮಾ ಬಿಡುಗಡೆ ಆಗುವಾಗ ಅಬ್ಬರ ಜೋರಾಗಿಯೇ ಇರುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಸಲ್ಮಾನ್ ಖಾನ್ ಈ ಟೀಸರ್​ ಶೇರ್ ಮಾಡಿಕೊಂಡಿದ್ದಾರೆ. ಕಮೆಂಟ್ ಮಾಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಜಲ್ ಅಗರ್ವಾಲ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ನಾಡಿಯದ್ವಾಲ ಗ್ರ್ಯಾಂಡ್ ಸನ್ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸದ್ಯಕ್ಕೆ ಸಿನಿಮಾದ ಕಥೆ ಏನು ಎಂಬುದು ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಸಲ್ಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು