
ಸಲ್ಮಾನ್ ಖಾನ್ ನಟನೆಯ ಸಿನಿಮಾ ಎಂದರೆ ಮಾಸ್ ಆಗಿರಲೇಬೇಕು. ಭರ್ಜರಿ ಆ್ಯಕ್ಷನ್, ಪಂಚಿಂಗ್ ಡೈಲಾಗ್ ಇರಲೇಬೇಕು. ಅಂಥ ಎಲ್ಲ ನಿರೀಕ್ಷೆಗಳನ್ನು ಪೂರೈಸುವ ರೀತಿಯಲ್ಲಿ ‘ಸಿಕಂದರ್’ ಸಿನಿಮಾದ ಟೀಸರ್ ಮೂಡಿಬಂದಿದೆ. ಇಂದು (ಫೆಬ್ರವರಿ 27) ‘ಸಿಕಂದರ್’ ಟೀಸರ್ (Sikandar Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಲ್ಮಾನ್ ಖಾನ್ (Salman Khan) ಅವರು ಮಾಸ್ ಅವತಾರ ತಾಳಿದ್ದಾರೆ. ಫೈಟಿಂಗ್ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ. ಟೀಸರ್ ನೋಡಿದ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಖುಷಿ ಆಗಿದೆ. ಟೀಸರ್ ಕಂಡು ಬಗೆಬಗೆಯಲ್ಲಿ ಪ್ರತಿಕ್ರಿಯೆ ನೀಡಲಾಗುತ್ತಿದೆ.
ಎ.ಆರ್. ಮುರುಗದಾಸ್ ಅವರು ‘ಸಿಕಂದರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಭಾರಿ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ. ಅದರ ಝಲಕ್ ತೋರಿಸಲು ಈಗ ಟೀಸರ್ ಅನಾವರಣ ಮಾಡಲಾಗಿದೆ. ಒಂದು ಗ್ಯಾಪ್ ಬಳಿಕ ಸಲ್ಮಾನ್ ಖಾನ್ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಸಿಕಂದರ್ ಟೀಸರ್ ನಿರೀಕ್ಷೆ ಹೆಚ್ಚಿಸಿದೆ.
‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಈಗಾಗಲೇ ‘ಅನಿಮಲ್’, ‘ಛಾವ’ ಸಿನಿಮಾಗಳ ಅಭೂತಪೂರ್ವ ಸಕ್ಸಸ್ ಮೂಲಕ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರು ಮತ್ತೊಂದು ಗೆಲುವಿಗಾಗಿ ಎದುರು ನೋಡುತ್ತಿದ್ದಾರೆ. ‘ಸಿಕಂದರ್’ ಮೂಲಕ ಅವರು ಮತ್ತೆ ಸಕ್ಸಸ್ ಕಾಣುವ ಸಾಧ್ಯತೆ ದಟ್ಟವಾಗಿದೆ.
ಈ ವರ್ಷ ಈದ್ ಹಬ್ಬದ ಪ್ರಯುಕ್ತ ‘ಸಿಕಂದರ್’ ಸಿನಿಮಾ ಬಿಡುಗಡೆ ಆಗಲಿದೆ. ಸಲ್ಮಾನ್ ಖಾನ್ ಸಿನಿಮಾ ಬಿಡುಗಡೆ ಆಗುವಾಗ ಅಬ್ಬರ ಜೋರಾಗಿಯೇ ಇರುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಸಲ್ಮಾನ್ ಖಾನ್ ಈ ಟೀಸರ್ ಶೇರ್ ಮಾಡಿಕೊಂಡಿದ್ದಾರೆ. ಕಮೆಂಟ್ ಮಾಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕಾಜಲ್ ಅಗರ್ವಾಲ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ನಾಡಿಯದ್ವಾಲ ಗ್ರ್ಯಾಂಡ್ ಸನ್ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸದ್ಯಕ್ಕೆ ಸಿನಿಮಾದ ಕಥೆ ಏನು ಎಂಬುದು ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಸಲ್ಲು ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.