AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶ್ರದ್ಧಾ ಕಪೂರ್​ಗೆ ಕರೆ ಮಾಡಿ ಕ್ಷಮೆ ಕೇಳಿದ ಸಲ್ಮಾನ್ ಖಾನ್: ಕಾರಣವೇನು?

ಇತ್ತೀಚೆಗಷ್ಟೆ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್, ಪಾಪರಾಡ್ಜಿಗಳ ವಿರುದ್ಧ ಗರಂ ಆಗಿದ್ದರು, ಬೇರೆ ನಟರಾಗಿದ್ದರೆ ಪಾಪರಾಟ್ಜಿಗಳು ಕ್ಯಾರೆ ಎನ್ನುತ್ತಿರಲಿಲ್ಲ, ಆದರೆ ಸಲ್ಮಾನ್ ಖಾನ್ ಅವರಿಗೆ ಖುದ್ದು ಪಾಪರಾಟ್ಜಿಗಳು ಒಟ್ಟಾಗಿ ಕ್ಷಮೆ ಕೇಳಿದರು. ಅದು ಬಾಲಿವುಡ್​​ನಲ್ಲಿ ಸಲ್ಲು ಸಹಾ. ಇಂಥಹಾ ಸಲ್ಮಾನ್ ಖಾನ್ ಇದೀಗ ನಟಿ ಶ್ರದ್ಧಾ ಕಪೂರ್ ಅವರಿಗೆ ಕ್ಷಮೆ ಕೇಳಿದ್ದಾರೆ.

ನಟಿ ಶ್ರದ್ಧಾ ಕಪೂರ್​ಗೆ ಕರೆ ಮಾಡಿ ಕ್ಷಮೆ ಕೇಳಿದ ಸಲ್ಮಾನ್ ಖಾನ್: ಕಾರಣವೇನು?
Salman Khan Shradha Kapoor
ಮಂಜುನಾಥ ಸಿ.
|

Updated on: Nov 21, 2026 | 3:17 PM

Share

ಮುಖ್ಯಾಂಶಗಳು

  • ನಟಿಯ ಬಳಿ ಕ್ಷಮೆ ಕೇಳಿದ ನಟ ಸಲ್ಮಾನ್ ಖಾನ್
  • ಸಿನಿಮಾ ರಿಲೀಸ್ ಬಗ್ಗೆ ಕ್ಷಮೆ ಕೋರಿದ ಸಲ್ಲು
  • ಶ್ರದ್ಧಾ ಕಪೂರ್ ಬಳಿ ಕ್ಷಮೆ ಕೇಳಿದ್ದಾರೆ ಸಲ್ಲು

ಸಲ್ಮಾನ್ ಖಾನ್ ಅವರನ್ನು ಬಾಲಿವುಡ್​​ನ ಭಾಯಿಜಾನ್ ಎನ್ನಲಾಗುತ್ತದೆ. ಅವರದ್ದೇ ಆಟಿಟ್ಯೂಡ್​​ನಲ್ಲಿ ಸಲ್ಲು ಇರುತ್ತಾರೆ. ಇತ್ತೀಚೆಗಷ್ಟೆ ಸಲ್ಮಾನ್ ಖಾನ್, ಪಾಪರಾಡ್ಜಿಗಳ ವಿರುದ್ಧ ಗರಂ ಆಗಿದ್ದರು, ಬೇರೆ ನಟರಾಗಿದ್ದರೆ ಪಾಪರಾಟ್ಜಿಗಳು ಕ್ಯಾರೆ ಎನ್ನುತ್ತಿರಲಿಲ್ಲ, ಆದರೆ ಸಲ್ಮಾನ್ ಖಾನ್ ಅವರಿಗೆ ಖುದ್ದು ಪಾಪರಾಟ್ಜಿಗಳು ಒಟ್ಟಾಗಿ ಕ್ಷಮೆ ಕೇಳಿದರು. ಅದು ಬಾಲಿವುಡ್​​ನಲ್ಲಿ ಸಲ್ಲು ಸಹಾ. ಇಂಥಹಾ ಸಲ್ಮಾನ್ ಖಾನ್ ಇದೀಗ ನಟಿ ಶ್ರದ್ಧಾ ಕಪೂರ್ ಅವರಿಗೆ ಕ್ಷಮೆ ಕೇಳಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಸಿನಿಮಾ ಡಿಸೆಂಬರ್ 4ಕ್ಕೆ ರಿಲೀಸ್ ಆಗುತ್ತಿದೆ. ಮತ್ತು ಅದೇ ದಿನ ಶ್ರದ್ಧಾ ಕಪೂರ್ ಅವರ ‘ಈಠಾ’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಇದೇ ಕಾರಣಕ್ಕೆ ಸಲ್ಮಾನ್ ಖಾನ್​ ಅವರು ನಟಿ ಶ್ರದ್ಧಾ ಕಪೂರ್ ಬಳಿ ಕ್ಷಮೆ ಕೇಳಿದ್ದಾರೆ. ತಮ್ಮ ‘ಮಾತೃಭೂಮಿ’ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಿಸಿದಾಗ ಶ್ರದ್ಧಾ ಅವರ ಚಿತ್ರವೂ ಅದೇ ದಿನ ಬಿಡುಗಡೆಯಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಸಲ್ಲು ಹೇಳಿದ್ದಾರೆ. ಈ ಘರ್ಷಣೆಯ ಬಗ್ಗೆ ಮೊದಲೇ ಗೊತ್ತಿದ್ದರೆ ಬೇರೆ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದು ಹೇಳಿರುವ ಅವರು, ಈ ಬಗ್ಗೆ ನಟಿ ಶ್ರದ್ಧಾ ಕಪೂರ್ ಅವರಿಗೆ ಕರೆ ಮಾಡಿ ಕ್ಷಮೆ ಕೋರಿದ್ದಾಗಿ ಹೇಳಿದ್ದಾರೆ.

‘ಮಾತೃಭೂಮಿ’ ಮತ್ತು ‘ಈಠಾ’ ಪರಸ್ಪರ ಸ್ಪರ್ಧೆಯಲ್ಲಿರುವ ಈ ಪರಿಸ್ಥಿತಿಯ ಬಗ್ಗೆ ತಮಗೆ ಬೇಸರವಿದೆ ಮತ್ತು ‘ಈಠಾ’ ಬಿಡುಗಡೆಯ ಬಗ್ಗೆ ಗೊತ್ತಿದ್ದರೆ ಅದೇ ದಿನಾಂಕವನ್ನು ಆರಿಸುತ್ತಿರಲಿಲ್ಲ ಎಂದಿದ್ದಾರೆ. ‘ನಾವು ಡಿಸೆಂಬರ್ 4ನೇ ತಾರೀಕನ್ನು ಘೋಷಿಸಿದಾಗ, ಶ್ರದ್ಧಾ ಸಿನಿಮಾ ಕೂಡ ಡಿಸೆಂಬರ್ 4 ರಂದು ಬರುತ್ತಿದ್ದಾರೆ ಎಂಬುದು ನನಗೆ ಗೊತ್ತಿರಲಿಲ್ಲ. ಇದರ ಬಗ್ಗೆ ನನಗೆ ನಿಜವಾಗಿಯೂ ತುಂಬಾ ಬೇಸರವಿದೆ. ನನಗೆ ಮೊದಲೇ ಗೊತ್ತಿದ್ದರೆ, ನಾನು ಶ್ರದ್ಧಾ ಸಿನಿಮಾದ ಎದುರು ಸಿನಿಮಾ ರಿಲೀಸ್ ಮಾಡುತ್ತಿರಲಿಲ್ಲ. ನನಗೆ ವಿಷಯ ಗೊತ್ತಾದ ಬಳಿಕ ನಾನು ಅವರೊಂದಿಗೆ ಮಾತನಾಡಿದೆ. ಅವರಿಗೆ ಫೋನ್ ಮಾಡಿದೆ, ಆಗಿರುವ ತಪ್ಪಿಗೆ ಕ್ಷಮೆ ಕೇಳಿದೆ. ಏಕೆಂದರೆ, ನಾನು ಅವರ (ಶ್ರದ್ಧಾ ಕಪೂರ್) ಬೆಳವಣಿಗೆಯನ್ನು ಹತ್ತಿರದಿಂದ ನೋಡಿದ್ದೇನೆ. ಅವರ ಜೊತೆ ಮಾತನಾಡಿ, ‘ನನ್ನನ್ನು ನಿಜವಾಗಿಯೂ ಕ್ಷಮಿಸಿ, ನನಗೆ ಗೊತ್ತಿರಲಿಲ್ಲ’ ಎಂದು ಹೇಳಿದೆ” ಎಂದು ಸಲ್ಮಾನ್ ತಿಳಿಸಿದ್ದಾರೆ.

ಇದನ್ನೂ ಓದಿ:ಹಲವು ಅಡೆತಡೆಗಳ ಬಳಿಕ ಸಲ್ಮಾನ್ ಖಾನ್ ‘ಮಾತೃಭೂಮಿ’ ಚಿತ್ರಕ್ಕೆ ಸಿಕ್ತು ಸೆನ್ಸಾರ್ ಗ್ರೀನ್ ಸಿಗ್ನಲ್

ಸಲ್ಮಾನ್ ಹೇಳುವ ಪ್ರಕಾರ, ಶ್ರದ್ಧಾ ಈ ಪರಿಸ್ಥಿತಿಯನ್ನು ಸೌಜನ್ಯದಿಂದ ಸ್ವೀಕರಿಸಿದ್ದು, ಬಾಕ್ಸ್ ಆಫೀಸ್‌ನಲ್ಲಿ ಎರಡೂ ಸಿನಿಮಾಗಳಿಗೂ ಅವಕಾಶವಿದೆ ಎಂದು ಧೈರ್ಯ ತುಂಬಿದ್ದಾರೆ. “ಇಲ್ಲ, ಇಲ್ಲ ಸರ್. ನಮ್ಮಿಬ್ಬರ ಸಿನಿಮಾಗಳೂ ಬರಲು ಸಾಕಷ್ಟು ಜಾಗವಿದೆ” ಎಂದು ಅವರು ಹೇಳಿದ್ದಾರೆ. ಅದಕ್ಕೆ ಸಲ್ಮಾನ್, “ಅವರು ತುಂಬಾ ಒಳ್ಳೆಯದು, ನನಗೆ ಸಂತೋಷವಾಗಿದೆ” ಎಂದು ಉತ್ತರಿಸಿದ್ದಾರೆ.

ಜನರು ‘ಈಥಾ’ ಸಿನಿಮಾವನ್ನು ನೋಡಬೇಕು ಎಂದೂ ಅವರು ಪ್ರೋತ್ಸಾಹಿಸಿದ್ದು, ಸಾರ್ವಜನಿಕ ಕಾರ್ಯಕ್ರಮದಲ್ಲೂ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಎಲ್ಲರೂ ಹೋಗಿ ಆ ಸಿನಿಮಾ ನೋಡಬೇಕು ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಈ ಹಿಂದೆ ‘ಈಥಾ’ ಚಿತ್ರದ ಪೋಸ್ಟರ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡು, “ಈಥಾ ಚಿತ್ರಕ್ಕೆ ಆಲ್ ದಿ ಬೆಸ್ಟ್” ಎಂದು ತಂಡಕ್ಕೆ ಶುಭ ಹಾರೈಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
"ಸನ್ಯಾಸಿ, ಸಿಎಂ ಎಲ್ಲವೂ ಹೊರಗಷ್ಟೇ, ಅಮ್ಮನ ಮುಂದೆ ಕೇವಲ ಮಗ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ