ಸಲ್ಮಾನ್ ಖಾನ್​ ರಕ್ಷಣೆಗೆ 70 ಜನರ ನೇಮಕ; 4 ಹಂತಗಳಲ್ಲಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್​ ಅವರು ‘ಸಿಕಂದರ್’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದು, ಅವರ ರಕ್ಷಣೆಗೆ ಅಂದಾಜು 70 ಜನರನ್ನು ನೇಮಿಸಲಾಗಿದೆ. ಒಟ್ಟು ನಾಲ್ಕು ಹಂತಗಳಲ್ಲಿ ಅವರಿಗೆ ಭದ್ರತೆ ನೀಡಲಾಗಿದೆ. ಸಿನಿಮಾ ತಂಡ ಬಹಳ ಎಚ್ಚರಿಕೆ ವಹಿಸುತ್ತಿದೆ.

ಸಲ್ಮಾನ್ ಖಾನ್​ ರಕ್ಷಣೆಗೆ 70 ಜನರ ನೇಮಕ; 4 ಹಂತಗಳಲ್ಲಿ ಭದ್ರತೆ
ಸಲ್ಮಾನ್ ಖಾನ್
Follow us
ಮದನ್​ ಕುಮಾರ್​
|

Updated on: Nov 08, 2024 | 5:03 PM

ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಅವರ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಆಯಿತು. ಆ ಬಳಿಕ ಸಲ್ಮಾನ್ ಖಾನ್ ಅವರಿಗೂ ಕೊಲೆ ಬೆದರಿಕೆ ಹಾಕಲಾಯಿತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರ ಆಪ್ತರಿಗೆ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಜೀವ ಬೆದರಿಕೆ ಇದೆ ಎಂದ ಮಾತ್ರಕ್ಕೆ ಸಲ್ಮಾನ್ ಖಾನ್ ಅವರು ಸುಮ್ಮನೆ ಮನೆಯಲ್ಲಿ ಕುಳಿತಿರಲು ಸಾಧ್ಯವಿಲ್ಲ. ಅವರು ಸಿನಿಮಾ ಹಾಗೂ ಬಿಗ್ ಬಾಸ್​ ಶೂಟಿಂಗ್​ನಲ್ಲಿ ಭಾಗವಹಿಸಲೇಬೇಕು. ಹಾಗಾಗಿ ಅವರ ಭದ್ರತೆಯನ್ನು ಹೆಚ್ಚು ಮಾಡಲಾಗಿದೆ. ವರದಿಗಳ ಪ್ರಕಾರ, ಒಟ್ಟು 70 ಜನರು ಸಲ್ಮಾನ್ ಖಾನ್​ ಅವರ ರಕ್ಷಣೆಗೆ ನಿಂತಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ನಾಯಕಿ ಆಗಿದ್ದಾರೆ. ಖ್ಯಾತ ನಿರ್ದೇಶಕ ಮುರುಗದಾಸ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್​ ಹೇಳುತ್ತಿದ್ದಾರೆ. ಮುಂದಿನ ಹಂತದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯಲಿದೆ. ನಗರದಲ್ಲಿ 2 ಸೆಟ್​ ಹಾಕಲಾಗಿದೆ. ಇನ್ನುಳಿದ ಭಾಗದ ಚಿತ್ರೀಕರಣ ಖಾಸಗಿ ಹೋಟೆಲ್​ನಲ್ಲಿ ನಡೆಯಲಿದೆ. ಈ ಎಲ್ಲ ಜಾಗಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಖಾಸಗಿ ಹೋಟೆಲ್​ನ ಒಂದು ಭಾಗದಲ್ಲಿ ಮಾತ್ರ ಶೂಟಿಂಗ್ ನಡೆಯಲಿದೆ. ಆದರೆ ಭದ್ರತೆಯ ದೃಷ್ಟಿಯಿಂದ ಇಡೀ ಹೋಟೆಲ್​ ಅನ್ನು ಸಲ್ಮಾನ್ ಖಾನ್ ಅವರ ಸೆಕ್ಯೂರಿಟಿ ಟೀಮ್​ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಹೋಟೆಲ್​ಗೆ ಬರುವ ಎಲ್ಲರ ಗುರುತು ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸಲಾಗುತ್ತದೆ. ಹೋಟೆಲ್​ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ನಂತರ ಎರಡನೇ ಹಂತದಲ್ಲಿ ಸಲ್ಮಾನ್ ಖಾನ್ ಅವರ ಖಾಸಗಿ ಭದ್ರತಾ ತಂಡ ಕೂಡ ತಪಾಸಣೆ ಮಾಡಲಿದೆ.

ಇದನ್ನೂ ಓದಿ: ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ

ಶೂಟಿಂಗ್​ ಸಂದರ್ಭದಲ್ಲಿ ಏನಾದರೂ ಅವಘಡ ಸಂಭವಿಸಿದರೆ ‘ಸಿಕಂದರ್’ ಚಿತ್ರತಂಡಕ್ಕೆ ಕಪ್ಪು ಚುಕ್ಕಿ ಆಗಲಿದೆ. ಆ ಕಾರಣದಿಂದ ಚಿತ್ರತಂಡದವರು ಹೆಚ್ಚಿನ ಜಾಗ್ರತೆ ವಹಿಸುತ್ತಿದ್ದಾರೆ. ಎನ್​ಎಸ್​ಜಿ ಕಮಾಂಡೋಗಳು, ಪೊಲೀಸ್ ಅಧಿಕಾರಿಗಳು, ಖಾಸಗಿ ಸೆಕ್ಯೂರಿಟಿ ಸಿಬ್ಬಂದಿ ಸೇರಿದಂತೆ ಒಟ್ಟು 70 ಜನರು ಸಲ್ಮಾನ್ ಖಾನ್ ಅವರ ರಕ್ಷಣೆಗೆ ನಿಂತಿದ್ದಾರೆ. ಇನ್ನು, ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್​ ಶೇರ ಕೂಡ ಕೆಲವು ಅತ್ಯುತ್ತಮ ಬಾಡಿಗಾರ್ಡ್​ಗಳನ್ನು ಆಯ್ಕೆ ಮಾಡಿ ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಸುದ್ದಿ ಆಗಿದೆ. ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಸಲ್ಮಾನ್ ಖಾನ್ ಅವರಿಗೆ ಅಪಾಯ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ