Salman Khan: ಸೋಲಿನ ನೋವು ಮರೆತು ಪೋಸ್​ ಕೊಟ್ಟ​ ಸಲ್ಮಾನ್​ ಖಾನ್​; ‘ಘರ್ಜಿಸಲು ಟೈಗರ್​ ರೆಡಿ’ ಎಂದ ಫ್ಯಾನ್ಸ್​

Salman Khan New Photo: ಇನ್​​ಸ್ಟಾಗ್ರಾಮ್​ನಲ್ಲಿ ಸಲ್ಮಾನ್​ ಖಾನ್​ ಅವರನ್ನು 61 ಮಿಲಿಯನ್​ಗಿಂತಲೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಸಲ್ಲು ಹೊಸ ಫೋಟೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಇದು ವೈರಲ್​ ಆಗದೆ.

Salman Khan: ಸೋಲಿನ ನೋವು ಮರೆತು ಪೋಸ್​ ಕೊಟ್ಟ​ ಸಲ್ಮಾನ್​ ಖಾನ್​; ‘ಘರ್ಜಿಸಲು ಟೈಗರ್​ ರೆಡಿ’ ಎಂದ ಫ್ಯಾನ್ಸ್​
ಸಲ್ಮಾನ್ ಖಾನ್
Follow us
ಮದನ್​ ಕುಮಾರ್​
|

Updated on: May 12, 2023 | 6:41 PM

ನಟ ಸಲ್ಮಾನ್​ ಖಾನ್​ (Salman Khan) ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ಅದೃಷ್ಟ ಕೈ ಕೊಟ್ಟಿದೆ. ಗ್ಯಾಂಗ್​​ಸ್ಟರ್​ಗಳಿಂದ ಅವರಿಗೆ ಬೆದರಿಕೆ ಬಂದಿರುವುದು ಗೊತ್ತೇ ಇದೆ. ಹಾಗಂತ ಸಲ್ಮಾನ್​ ಖಾನ್​ ಅವರ ಗತ್ತು, ಗಾಂಭೀರ್ಯಕ್ಕೆ ಏನೂ ಕೊರತೆ ಆಗಿಲ್ಲ. ಎಂದಿನಂತೆ ಅವರು ದಿಲ್ದಾರ್​ ಆಗಿ ಓಡಾಡಿಕೊಂಡಿದ್ದಾರೆ. ಏಪ್ರಿಲ್​ 21ರಂದು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾ ಬಿಡುಗಡೆ ಆಯಿತು. ಈ ಸಿನಿಮಾವನ್ನು ಸ್ವತಃ ಸಲ್ಮಾನ್​ ಖಾನ್​ ಅವರು ನಿರ್ಮಾಣ ಮಾಡಿದ್ದರು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಲಿಲ್ಲ. ಆ ಸೋಲಿನ ನೋವನ್ನು ಮರೆತು ಈಗ ಸಲ್ಮಾನ್​ ಖಾನ್​ ಹೊಸ ಜೋಶ್​ನಲ್ಲಿ ಬಂದಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಫೋಟೋ (Salman Khan New Photo) ಹಂಚಿಕೊಂಡಿದ್ದಾರೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇನ್​​ಸ್ಟಾಗ್ರಾಮ್​ನಲ್ಲಿ ಸಲ್ಮಾನ್​ ಖಾನ್​ ಅವರನ್ನು 61 ಮಿಲಿಯನ್​ಗಿಂತಲೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಸಲ್ಲು ಹೊಸ ಫೋಟೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಇದು ವೈರಲ್​ ಆಗದೆ. ಕೇವಲ 3 ಗಂಟೆಯಲ್ಲಿ 6 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ‘ಘರ್ಜಿಸಲು ಟೈಗರ್​ ರೆಡಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಲ್ಮಾನ್​ ಖಾನ್​ ಅವರು ಈಗ ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಹಲವು ಕಾರಣಗಳಿಂದ ಈ ಸಿನಿಮಾದ ಮೇಲೆ ಹೈಪ್​ ಸೃಷ್ಟಿ ಆಗಿದೆ. ಮನೀಶ್​ ಶರ್ಮಾ ಅವರು ‘ಟೈಗರ್​ 3’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಕತ್ರಿನಾ ಕೈಫ್​ ನಟಿಸುತ್ತಿದ್ದಾರೆ. ಸಲ್ಲು ಮತ್ತು ಕತ್ರಿನಾ ಜೋಡಿಯನ್ನು ಮತ್ತೊಮ್ಮೆ ತೆರೆಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Salman Khan: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಶಾರುಖ್​ ಖಾನ್​ ಮತ್ತು ಸಲ್ಮಾನ್​ ಖಾನ್​ ನಡುವೆ ಒಳ್ಳೆಯ ಗೆಳೆತನ ಇದೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ಟೈಗರ್​ 3’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ. ಮೂಲಗಳ ಪ್ರಕಾರ, ವಿದೇಶದಲ್ಲಿ ಭಾರಿ ಬಿಗಿ ಭದ್ರತೆಯೊಂದಿಗೆ ಶಾರುಖ್​ ಖಾನ್​ ಮತ್ತು ಸಲ್ಮಾನ್​ ಖಾನ್​ ಅವರು ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಇಮ್ರಾನ್​ ಹಷ್ಮಿ ಕೂಡ ಈ ಸಿನಿಮಾದಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ