Kisi Ka Bhai Kisi Ki Jaan: ಸೋಮವಾರದ ಪರೀಕ್ಷೆಯಲ್ಲಿ ಸಲ್ಲು ಸಿನಿಮಾ ಪಾಸ್​; 100 ಕೋಟಿ ರೂ. ಗಡಿ ಮುಟ್ಟಲು ಇನ್ನೆಷ್ಟು ಬಾಕಿ?

ಸೋಮವಾರದ ಕಲೆಕ್ಷನ್​ ಎಷ್ಟಾಗುತ್ತದೆ ಎಂಬುದರ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗುತ್ತದೆ. ಈ ಪರೀಕ್ಷೆಯಲ್ಲಿ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರ ಪಾಸ್​ ಆಗಿದೆ.

Kisi Ka Bhai Kisi Ki Jaan: ಸೋಮವಾರದ ಪರೀಕ್ಷೆಯಲ್ಲಿ ಸಲ್ಲು ಸಿನಿಮಾ ಪಾಸ್​; 100 ಕೋಟಿ ರೂ. ಗಡಿ ಮುಟ್ಟಲು ಇನ್ನೆಷ್ಟು ಬಾಕಿ?
ಸಲ್ಮಾನ್ ಖಾನ್
Follow us
ಮದನ್​ ಕುಮಾರ್​
|

Updated on:Apr 25, 2023 | 3:41 PM

ಸೂಪರ್​ ಸ್ಟಾರ್​ ನಟರ ಸಿನಿಮಾಗಳು ಮೊದಲೆರಡು ದಿನದಲ್ಲೇ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದರೆ ಅದನ್ನು ದೊಡ್ಡ ಗೆಲುವು ಎನ್ನಬಹುದು. ಸಾಮಾನ್ಯವಾಗಿ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಯಶ್​ ಮುಂತಾದ ಸ್ಟಾರ್​ ಕಲಾವಿದರ ಸಿನಿಮಾಗಳಿಂದ ಈ ರೀತಿಯ ಕಲೆಕ್ಷನ್​ ನಿರೀಕ್ಷಿಸಲಾಗುತ್ತದೆ. ಪ್ರತಿ ಬಾರಿಯೂ ಇಷ್ಟೇ ಪ್ರಮಾಣದಲ್ಲಿ ಕಮಾಯಿ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚೆಗೆ ರಿಲೀಸ್​ ಆದ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾ ಮೊದಲ ದಿನ ಸಾಧಾರಣ ಕಲೆಕ್ಷನ್​ (Box Office Collection) ಮಾಡಿತು. ಆದರೆ ನಂತರದ ದಿನಗಳಲ್ಲಿ ಚೇತರಿಕೆ ಕಂಡಿದೆ. ವೀಕೆಂಡ್​ನಲ್ಲಿ ಉತ್ತಮ ಕಮಾಯಿ ಮಾಡಿದೆ. ಅಷ್ಟೇ ಅಲ್ಲದೇ, 4ನೇ ದಿನ ಕೂಡ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರ ಮುಂದುವರಿದಿದೆ. ಹಾಗಾಗಿ ಈ ಸಿನಿಮಾ ಶೀಘ್ರದಲ್ಲೇ 100 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ.

‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಂಜಾನ್ ಸಂದರ್ಭದಲ್ಲಿ (ಏಪ್ರಿಲ್ 21) ರಿಲೀಸ್ ಆಯಿತು. ಮೊದಲ ದಿನವಾದ ಶುಕ್ರವಾರ ಈ ಚಿತ್ರ 15 ಕೋಟಿ ರೂಪಾಯಿ ಗಳಿಕೆ ಮಾಡಿತು. ಶನಿವಾರ (ಏಪ್ರಿಲ್ 23) ಬರೋಬ್ಬರಿ 25.75 ಕೋಟಿ ರೂಪಾಯಿ ಗಳಿಸಿದೆ. ಭಾನುವಾರ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಿತು. ಈ ಸಿನಿಮಾ ಭಾನುವಾರ 26.61 ಕೋಟಿ ರೂಪಾಯಿ ಹಾಗೂ ಸೋಮವಾರ 10.17 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 78.34 ಕೋಟಿ ರೂಪಾಯಿ ದಾಟಿದೆ.

ಸೋಮವಾರದ ಕಲೆಕ್ಷನ್​ ಎಷ್ಟಾಗುತ್ತದೆ ಎಂಬುದರ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗುತ್ತದೆ. ಹಾಗಾಗಿ 4ನೇ ದಿನದ ಗಳಿಕೆ ತುಂಬ ಮುಖ್ಯವಾಗುತ್ತದೆ. ಈ ಪರೀಕ್ಷೆಯಲ್ಲಿ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಪಾಸ್​ ಆಗಿದೆ. ಒಟ್ಟು ಕಲೆಕ್ಷನ್​ 100 ಕೋಟಿ ರೂಪಾಯಿ ಗಡಿ ಮುಟ್ಟಲು ಇನ್ನು 22 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. ಪ್ರತಿ ದಿನ 10+ ಕೋಟಿ ರೂಪಾಯಿ ಗಳಿಕೆ ಆದರೆ ಈ ಸಿನಿಮಾ ಸೂಪರ್​ ಹಿಟ್​ ಪಟ್ಟಿಗೆ ಸೇರಿಕೊಳ್ಳಲಿದೆ.

Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾಗೆ ಫರ್ಹಾದ್​ ಸಮ್ಜಿ ಅವರು ನಿರ್ದೇಶನ ಮಾಡಿದ್ದಾರೆ. ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ದಗ್ಗುಬಾಟಿ ವೆಂಕಟೇಶ್​ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:41 pm, Tue, 25 April 23

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್