Salman Khan: ‘ಪಠಾಣ್​​’ ಸಿನಿಮಾ ಜತೆ ಬರಲಿದ್ದಾರೆ ಸಲ್ಮಾನ್ ಖಾನ್​; ಏನಿದು ಸಮಾಚಾರ?

‘ಪಠಾಣ್​’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Salman Khan: ‘ಪಠಾಣ್​​’ ಸಿನಿಮಾ ಜತೆ ಬರಲಿದ್ದಾರೆ ಸಲ್ಮಾನ್ ಖಾನ್​; ಏನಿದು ಸಮಾಚಾರ?
ಶಾರುಖ್ ಖಾನ್-ಸಲ್ಮಾನ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on:Jan 21, 2023 | 12:14 PM

ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಜನ್ಮದಿನದಂದು ಶಾರುಖ್ ಖಾನ್ ಆಗಮಿಸಿ ಬರ್ತ್​​ಡೇ ವಿಶ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಲ್ಮಾನ್ ಖಾನ್ ಅವರು ಶಾರುಖ್ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಜತೆಗೆ ಬರುತ್ತಿದ್ದಾರೆ. ಅಂದರೆ, ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ (Kisi Ka Bhai Kisi Ki Jaan Teaser) ಸಿನಿಮಾದ ಟೀಸರ್ ‘ಪಠಾಣ್​’ ಸಿನಿಮಾದ ಆರಂಭದಲ್ಲಿ ಪ್ರಸಾರ ಆಗಲಿದೆ.

‘ಪಠಾಣ್​’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ಹಲವು ಸಿನಿಮಾ ತಂಡಗಳು ‘ಪಠಾಣ್​’ ಚಿತ್ರದ ಜತೆ ಟೀಸರ್​, ಟ್ರೇಲರ್ ಪ್ರಸಾರ ಮಾಡಲು ಮುಂದೆ ಬಂದಿವೆ. ಈಗ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಟೀಸರ್​​ ‘ಪಠಾಣ್​’ ಸಿನಿಮಾ ಜತೆ ಬರುತ್ತಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಸಲ್ಮಾನ್​ ಅವರು ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಪೋಸ್ಟರ್​​ಗಳು ಇತ್ತೀಚೆಗೆ ರಿಲೀಸ್ ಆಗಿದ್ದವು. ಈಗ ಜನವರಿ 25ರಂದು ಟೀಸರ್ ರಿಲೀಸ್ ಆಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ‘ಪಠಾಣ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ ಭೇಟಿಗಾಗಿ 1,100 ಕಿ.ಮೀ. ಸೈಕಲ್​ ಸವಾರಿ ಮಾಡಿದ ಅಭಿಮಾನಿ; ಕಡೆಗೂ ಸಿಕ್ತು ದರ್ಶನ

‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಚಿತ್ರವನ್ನು ಫರ್ಹಾದ್ ಸಮ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪೂಜಾ ಹೆಗ್ಡೆ, ಶೆಹನಾಜ್ ಗಿಲ್​ ಮೊದಲಾದವರು ನಟಿಸಿದ್ದಾರೆ. ಆ್ಯಕ್ಷನ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ರಾಮ್ ಚರಣ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:14 pm, Sat, 21 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ