AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲನ್​ ಆದ ಬಾಲಿವುಡ್​ ಹೀರೋ; ಒಂದೇ ದೃಶ್ಯಕ್ಕೆ 10 ಕೋಟಿ ರೂ. ಸುರಿಯಲಿರುವ ನಿರ್ಮಾಪಕರು

‘ಟೈಗರ್​ 3’ ಚಿತ್ರದಲ್ಲಿ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಇಮ್ರಾನ್​ ಹಷ್ಮಿ ರೀತಿಯೇ ಸಲ್ಮಾನ್​ ಖಾನ್​ ಹಾಗೂ ಕತ್ರಿನಾ ಕೈಫ್​ ಅವರ ಎಂಟ್ರಿ ಸೀನ್​ ಕೂಡ ಈ ಬಾರಿ ಸಖತ್​ ವಿಶೇಷವಾಗಿರಲಿವೆ ಎನ್ನಲಾಗಿದೆ.

ವಿಲನ್​ ಆದ ಬಾಲಿವುಡ್​ ಹೀರೋ; ಒಂದೇ ದೃಶ್ಯಕ್ಕೆ 10 ಕೋಟಿ ರೂ. ಸುರಿಯಲಿರುವ ನಿರ್ಮಾಪಕರು
ಸಲ್ಮಾನ್​ ಖಾನ್​ - ಇಮ್ರಾನ್​ ಹಷ್ಮಿ
TV9 Web
| Edited By: |

Updated on: Jul 23, 2021 | 9:56 AM

Share

ಸೋಲು ಗೆಲುವು ಏನೇ ಇರಲಿ, ಸಲ್ಮಾನ್​ ಖಾನ್​ (Salman Khan) ಸಿನಿಮಾ ಎಂದರೆ ಬಜೆಟ್​ ಅದ್ದೂರಿಯಾಗಿಯೇ ಇರುತ್ತದೆ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಬಳಿಕ ಸಲ್ಮಾನ್​ ಖಾನ್ ಗಮನ ಸಂಪೂರ್ಣವಾಗಿ ‘ಟೈಗರ್​ 3’ (Tiger 3) ಚಿತ್ರದ ಮೇಲೆ ನೆಟ್ಟಿದೆ. ಈ ಸಿನಿಮಾ ಬಗ್ಗೆ ಹಲವು ಅಚ್ಚರಿಯ ಸುದ್ದಿಗಳು ಕೇಳಿಬರುತ್ತಿದೆ. ಈ ಚಿತ್ರದಲ್ಲಿ ವಿಲನ್​ ಆಗಿ ಇಮ್ರಾನ್​ ಹಷ್ಮಿ (Emraan Hashmi) ನಟಿಸುತ್ತಿರುವುದು ವಿಶೇಷ. ಬಹುಕೋಟಿ ಬಜೆಟ್​ನಲ್ಲಿ ತಯಾರಾಗುತ್ತಿರುವ ‘ಟೈಗರ್​ 3’ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಇದೆ.

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ಎಲ್ಲ ಸಿನಿಮಾದಲ್ಲಿಯೂ ಹೀರೋ ಎಂಟ್ರಿ ದೃಶ್ಯಕ್ಕೆ ಸಿಕ್ಕಾಪಟ್ಟೆ ಬಜೆಟ್​ ಮೀಸಲಿಡುವುದು ಸಹಜ. ಆದರೆ ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ.

ಸಲ್ಮಾನ್​ ಖಾನ್​ ಎದುರು ಇಮ್ರಾನ್​ ಹಷ್ಮಿ ಖಳನಾಯಕನಾಗಿ ಕಾದಾಡಲಿದ್ದಾರೆ. ಒಂದು ಫೈಟ್​ ದೃಶ್ಯದ ಮೂಲಕ ವಿಲನ್​ ಪಾತ್ರವನ್ನು ಪರಿಚಯಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 10 ಕೋಟಿ ರೂ. ಖರ್ಚು ಆಗಲಿದೆ. ತಿಂಗಳುಗಳ ಕಾಲ ಈ ಫೈಟಿಂಗ್​ ದೃಶ್ಯದ ಶೂಟಿಂಗ್​ ನಡೆಯಲಿದೆ ಎಂಬ ಮಾಹಿತಿ ಬಿ-ಟೌನ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಪಾತ್ರಕ್ಕಾಗಿ ಇಮ್ರಾನ್​ ಹಷ್ಮಿ ಕಟ್ಟುಮಸ್ತಾಗಿ ಬಾಡಿ ಬಿಲ್ಡ್​ ಮಾಡುತ್ತಿದ್ದಾರೆ.

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಸಲ್ಮಾನ್​ ಖಾನ್​ ಹಾಗೂ ಕತ್ರಿನಾ ಕೈಫ್​ ಅವರ ಎಂಟ್ರಿ ಸೀನ್​ ಕೂಡ ಈ ಬಾರಿ ಸಖತ್​ ವಿಶೇಷವಾಗಿರಲಿವೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ:

ವಿದೇಶದಲ್ಲಿದ್ದಾರಾ ಸಲ್ಮಾನ್​ ಖಾನ್​ ಪತ್ನಿ ನೂರ್​ ಮತ್ತು 17 ವರ್ಷದ ಮಗಳು? ಹೊಸ ರಹಸ್ಯ

ಮೈ ಕಾಣುವಂತೆ ಬಟ್ಟೆ ಧರಿಸಿ ಬಂದಿದ್ದ ಕತ್ರಿನಾ ಕೈಫ್​ ಜೊತೆ ಈ ರೀತಿ ನಡೆದುಕೊಂಡಿದ್ರಾ ಸಲ್ಮಾನ್​ ಖಾನ್​?

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ