ಕೊಲೆ ಬೆದರಿಕೆಯ ಮಧ್ಯೆಯೂ ರಶ್ಮಿಕಾ ಜೊತೆ ಶೂಟ್​ನಲ್ಲಿ ಭಾಗಿ ಆದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಮತ್ತೊಂದು ಬೆದರಿಕೆ ಬಂದಿದೆ. 5 ಕೋಟಿ ರೂಪಾಯಿಗಳನ್ನು ನೀಡುವಂತೆ ಅಥವಾ ಬಿಷ್ಣೋಯ್ ದೇವಸ್ಥಾನದಲ್ಲಿ ಕ್ಷಮೆ ಕೇಳುವಂತೆ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆಯ ನಡುವೆಯೂ ಅವರು ಹೈದರಾಬಾದ್ ನಲ್ಲಿ ‘ಸಿಖಂದರ್’ ಚಿತ್ರದ ಚಿತ್ರೀಕರಣವನ್ನು ಮುಂದುವರಿಸಿದ್ದಾರೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಕೊಲೆ ಬೆದರಿಕೆಯ ಮಧ್ಯೆಯೂ ರಶ್ಮಿಕಾ ಜೊತೆ ಶೂಟ್​ನಲ್ಲಿ ಭಾಗಿ ಆದ ಸಲ್ಮಾನ್ ಖಾನ್
ಸಲ್ಮಾನ್
Follow us
ರಾಜೇಶ್ ದುಗ್ಗುಮನೆ
|

Updated on: Nov 05, 2024 | 11:52 AM

ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಬೆದರಿಕೆ ಬಂದಿದೆ. ಅವರು ಐದು ಕೋಟಿ ರೂಪಾಯಿ ನೀಡಬೇಕು ಅಥವಾ ಕ್ಷಮೆ ಕೇಳಬೇಕು ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ. ಈ ಬೆದರಿಕೆ ಮಧ್ಯೆಯೂ ಸಲ್ಮಾನ್ ಖಾನ್ ಅವರು ಶೂಟಿಂಗ್ ಮಾಡುತ್ತಿದ್ದಾರೆ. ಹೈದರಾಬಾದ್​ನಲ್ಲಿ ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ಶೂಟ್ ಮಾಡುತ್ತಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ ಎದುರಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರು ಕೃಷ್ಣಮೃಗ ಕೊಂದ ಪ್ರಕರಣದಲ್ಲಿ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಅವರು ಕ್ಷಮೆ ಕೇಳಲೇಬೇಕು ಎಂದು ಬಿಷ್ಣೋಯ್ ಗ್ಯಾಂಗ್​ನವರು ಪಟ್ಟು ಹಿಡಿದ್ದಾರೆ. ಈಗ ಸಲ್ಮಾನ್ ಖಾನ್​ಗೆ ಹೊಸ ಬೆದರಿಕೆ ಬಂದಿದೆ.

‘ಬಿಷ್ಣೋಯ್ ದೇವಸ್ಥಾನಕ್ಕೆ ಹೋಗಿ ಸಲ್ಮಾನ್ ಖಾನ್ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಇಲ್ಲವೆ 5 ಕೋಟಿ ರೂ. ಕೊಡಬೇಕು. ಇಲ್ಲವಾದಲ್ಲಿ ಸಲ್ಮಾನ್​​ನ ಕೊಲ್ಲುತ್ತೇವೆ’ ಎಂದು ಬಿಷ್ಣೋಯ್ ಗ್ಯಾಂಗ್​ನವರು ಹೇಳಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಸಹೋದರ ಈ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಇದರ ಮಧ್ಯೆಯೂ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಹೈದರಾಬಾದ್​ನ ಪ್ಯಾಲೆಸ್ ಒಂದರಲ್ಲಿ ಸಿನಿಮಾದ ಶೂಟ್ ನಡೆಯುತ್ತಿದೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಲೀಕ್ ಆಗಿದೆ. ಈ ಪ್ಯಾಲೆಸ್ ಸಖತ್ ಗ್ರ್ಯಾಂಡ್ ಆಗಿ ಇದೆ.

ಮತ್ತೊಂದು ವಿಡಿಯೋದಲ್ಲಿ ಸಲ್ಮಾನ್ ಖಾನ್ ಅವರು ಪ್ಯಾಲೆಸ್​ಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಇದೆ. ಅವರು ವ್ಯಾನಿಟಿ ವ್ಯಾನ್​ನಲ್ಲಿ ಬಂದಿದ್ದಾರೆ. ಸಲ್ಮಾನ್ ಖಾನ್ ಸಿನಿಮಾ ಸೆಟ್​ನಲ್ಲಿ ಲಕ್ಷುರಿ ಕಾರುಗಳ ಬಳಕೆ ಆಗಿದೆ.  ಸೆಟ್ ಹೊರ ಭಾಗದಲ್ಲಿ ರೋಲ್ಸ್ ರಾಯ್ಸ್ ರೀತಿಯ ಕಾರುಗಳನ್ನು ಪಾರ್ಕ್ ಮಾಡಲಾಗಿದೆ.

ಇದನ್ನೂ ಓದಿ: ಅರ್ಧಕ್ಕೆ ನಿಂತೋಯ್ತು ಸಲ್ಮಾನ್ ಖಾನ್-ರಶ್ಮಿಕಾ ನಟನೆಯ ‘ಸಿಖಂದರ್’ ಶೂಟಿಂಗ್?

‘ಸಿಖಂದರ್’ ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಾಜಿದ್ ನಾಡಿಯಾದ್ವಾಲಾ ಅವರ ನಿರ್ಮಾಣ ಚಿತ್ರಕ್ಕೆ ಇದೆ. ರಶ್ಮಿಕಾ ಮಂದಣ್ಣ ಜೊತೆ ಕಾಜಲ್ ಅಗರ್​ವಾಲ್​ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಆಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ