‘ದಿ ಬುಲ್’ ಚಿತ್ರಕ್ಕಾಗಿ ಬದಲಾದ ಸಲ್ಲು; ಬಾಡಿ ಬಿಲ್ಡ್ ಮಾಡಲು ನಿತ್ಯ ಮೂರುವರೆ ಗಂಟೆ ಜಿಮ್

ಸಲ್ಮಾನ್ ಖಾನ್ ಅವರು ಬಾಡಿ ಬಿಲ್ಡ್ ಮಾಡಿಕೊಳ್ಳಲು ನಿತ್ಯ ಮೂರುವರೆಗೆ ಗಂಟೆ ಜಿಮ್ ಮಾಡುತ್ತಿದ್ದಾರೆ. ಅವರು ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಂಡಿದ್ದಾರೆ. ಒಂದು ತಿಂಗಳುಗಳ ಕಾಲ ಸಲ್ಲು ವರ್ಕೌಟ್ ಬಗ್ಗೆ ಹೆಚ್ಚು ಒತ್ತು ನೀಡಲಿದ್ದಾರೆ.

‘ದಿ ಬುಲ್’ ಚಿತ್ರಕ್ಕಾಗಿ ಬದಲಾದ ಸಲ್ಲು; ಬಾಡಿ ಬಿಲ್ಡ್ ಮಾಡಲು ನಿತ್ಯ ಮೂರುವರೆ ಗಂಟೆ ಜಿಮ್
ಸಲ್ಮಾನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2024 | 11:13 AM

2023ರಲ್ಲಿ ಸಲ್ಮಾನ್ ಖಾನ್ (Salman Khan) ನಟನೆಯ ಎರಡು ಸಿನಿಮಾಗಳು ರಿಲೀಸ್ ಆದವು. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಸೋತರೆ, ‘ಟೈಗರ್ 3’ ಚಿತ್ರ ಸಾಧಾರಣ ಗೆಲುವು ಕಂಡಿತು. ಈಗ ಸಲ್ಮಾನ್ ಖಾನ್ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ‘ದಿ ಬುಲ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾಗಾಗಿ ಅವರು ತೂಕ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸಲ್ಲು ಜಿಮ್​ನಲ್ಲಿ ನಿತ್ಯ ಮೂರುವರೆ ಗಂಟೆ ವರ್ಕೌಟ್ ಮಾಡುತ್ತಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಬಾರಿ ಕರಣ್ ಜೋಹರ್ ಒಡೆತನದ ‘ಧರ್ಮ ಪ್ರೊಡಕ್ಷನ್’ ಜೊತೆ ಕೈ ಜೋಡಿಸಿದ್ದಾರೆ. 1988ರಲ್ಲಿ ಮಾಲ್ಡೀವ್ಸ್​ನಲ್ಲಿ ಭಾರತದ ಶಸಸ್ತ್ರ ಪಡೆ ಆಪರೇಷನ್ ನಡೆಸಿತ್ತು. ಬ್ರಿಗೇಡಿಯರ್ ಫಾರುಕ್ ಪುಲ್ಸಾರಾ ಅವರು ಈ ಆಪರೇಷನ್​ನ ನೇತೃತ್ವ ವಹಿಸಿದ್ದರು. ಫಾರುಕ್ ಪಾತ್ರದಲ್ಲಿ ಸಲ್ಲು ನಟಿಸುತ್ತಿದ್ದಾರೆ. ಕಳೆದ ಡಿಸೆಂಬರ್ 29ರಂದು ‘ದಿ ಬುಲ್’ ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಫೆಬ್ರವರಿಯಲ್ಲಿ ಶೂಟಿಂಗ್ ಶುರವಾಗಲಿದೆ.

ಸಲ್ಮಾನ್ ಖಾನ್ ಅವರು ಬಾಡಿ ಬಿಲ್ಡ್ ಮಾಡಿಕೊಳ್ಳಲು ನಿತ್ಯ ಮೂರುವರೆಗೆ ಗಂಟೆ ಜಿಮ್ ಮಾಡುತ್ತಿದ್ದಾರೆ. ಅವರು ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಂಡಿದ್ದಾರೆ. ಒಂದು ತಿಂಗಳುಗಳ ಕಾಲ ಸಲ್ಲು ವರ್ಕೌಟ್ ಬಗ್ಗೆ ಹೆಚ್ಚು ಒತ್ತು ನೀಡಲಿದ್ದಾರೆ. ಅವರ ಟ್ರಾನ್ಸ್​ಫಾರ್ಮೇಷನ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದಲ್ಲದೆ, ‘ಬಿಗ್ ಬಾಸ್ ಹಿಂದಿ ಸೀಸನ್ 17’ ನಡೆಸಿಕೊಡುತ್ತಿದ್ದಾರೆ. ಈ ತಿಂಗಳಾಂತ್ಯಕ್ಕೆ ಫಿನಾಲೆ ನಡೆಯಲಿದೆ.

ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಅವರು ಇನ್ನೂ ಮದುವೆ ಆಗದಿರಲು ಕಾರಣವೇನು?

ವಿಷ್ಣು ವರ್ಧನ್ ಅವರು ‘ದಿ ಬುಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಉದ್ಯಮಿ ಅಬ್ದುಲ್ ಲುಥುಪಿ ಹಾಗೂ ಪಿಪಲ್ಸ್ ಲಿಬರೇಷನ್ ಆರ್ಗನೈಸೇಷನ್ ಆಫ್ ತಮಿಳ್ ಈಳಂ ಅವರು ಥೈಲೆಂಡ್​ನ ಕಬ್ಜ ಮಾಡಿದ್ದರು. ನಂತರ ಭಾರತದ ಸಹಾಯದಿಂದ ಮತ್ತೆ ಸರ್ಕಾರ ಮರುಸ್ಥಾಪನೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್