ಸಲ್ಮಾನ್ ಖಾನ್ ವಿಶಾಲ ಹೃದಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ

ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಮಾತೃಭೂಮಿ ಸಿನಿಮಾದ ತಾರಾಗಣ ಹಾಗೂ ತಾಂತ್ರಿಕ ಬಳಗಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ಕೈಗಡಿಯಾರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಪನ್ವೆಲ್ ಫಾರ್ಮ್‌ಹೌಸ್‌ನಲ್ಲಿ ನಡೆದ ವಿಶೇಷ ಕೂಟದಲ್ಲಿ ಈ  ಉಡುಗೊರೆ ನೀಡಿ ಚಿತ್ರತಂಡದ ಶ್ರಮವನ್ನು ಕೊಂಡಾಡಿದ್ದಾರೆ.

ಸಲ್ಮಾನ್ ಖಾನ್ ವಿಶಾಲ ಹೃದಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ
ಸಲ್ಮಾನ್ ಖಾನ್

Updated on: Nov 18, 2026 | 10:57 AM

ಬಾಲಿವುಡ್‌ನ ಜನಪ್ರಿಯ ನಟ ಸಲ್ಮಾನ್ ಖಾನ್ ತಮ್ಮ ಉದಾರ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಈಗ ಅವರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ತಮ್ಮ ಮುಂಬರುವ ಬಹುನಿರೀಕ್ಷಿತ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಸಿನಿಮಾದ ಚಿತ್ರತಂಡಕ್ಕೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಚಿತ್ರದ ಇಡೀ ತಾರಾಗಣ ಹಾಗೂ ತಾಂತ್ರಿಕ ಬಳಗಕ್ಕೆ ಲಕ್ಷಾಂತರ ಮೌಲ್ಯದ ದುಬಾರಿ ವಾಚ್​​ಗಳನ್ನು ಉಡುಗೊರೆಯಾಗಿ ನೀಡಿ ಎಲ್ಲರ ಮುಖದಲ್ಲೂ ಖುಷಿ ತಂದಿದ್ದಾರೆ.

ಪನ್ವೆಲ್‌ನಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ನವೆಂಬರ್ 12ರಂದು ಸಲ್ಮಾನ್ ಖಾನ್ ವಿಶೇಷ ಔತಣಕೂಟವನ್ನು ಆಯೋಜಿಸಿದ್ದರು. ಸಿನಿಮಾ ಪ್ರಚಾರದ ಬಗ್ಗೆ ಚರ್ಚಿಸಲು ಎಂದು ಎಲ್ಲರನ್ನೂ ಕರೆಯಲಾಗಿತ್ತು. ಕೊನೆಯಲ್ಲಿ ಚಿತ್ರತಂಡದ ಎಲ್ಲರಿಗೂ ದುಬಾರಿ ವಾಚ್​​ಗಳನ್ನು ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದರು. ಈ ವಿಶೇಷ ಉಡುಗೊರೆಯು ಎಲ್ಲರ ಉತ್ಸಾಹವನ್ನು ಇಮ್ಮಡಗೊಳಿಸಿದೆ.

Loading...

ತಂಡದ ಪುರುಷ ಮತ್ತು ಮಹಿಳಾ ಸದಸ್ಯರಿಗೆ ವಿಭಿನ್ನ ಬ್ರಾಂಡ್‌ನ ಗಡಿಯಾರಗಳನ್ನು ಆಯ್ಕೆ ಮಾಡಲಾಗಿತ್ತು. ಪುರುಷರಿಗೆ ಲಾಂಗಿನ್ಸ್ ಹಾಗೂ ಟ್ಯಾಗ್ ಹ್ಯೂಯರ್ ಗಡಿಯಾರಗಳನ್ನು ನೀಡಲಾಗಿದೆ. ಮಹಿಳೆಯರಿಗೆ ರಾಡೋ ಬ್ರಾಂಡ್‌ನ ವಾಚ್‌ಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಒಟ್ಟು 20 ರಿಂದ 25 ಮಂದಿಗೆ 2 ಲಕ್ಷದಿಂದ 6 ಲಕ್ಷ ರೂಪಾಯಿ ಮೌಲ್ಯದ ವಾಚ್‌ಗಳನ್ನು ಸಲ್ಮಾನ್ ಖಾನ್ ತಮ್ಮ ಕೈಯಾರೆ ವಿತರಿಸಿದ್ದಾರೆ.

ಅಪೂರ್ವ ಲಖಿಯಾ ನಿರ್ದೇಶನದ ಈ ವಾರ್ ಡ್ರಾಮಾ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆಗೆ ಚಿತ್ರಂಗದಾ ಸಿಂಗ್ ಪ್ರಮುಖ ಪಾತ್ರದಲ್ಲಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್‌ಗಳಿಲ್ಲದೆ ಪ್ರಮಾಣಪತ್ರ ಪಡೆದಿರುವ ಈ ಸಿನಿಮಾ ಡಿಸೆಂಬರ್ 4ರಂದು ತೆರೆಕಾಣಲಿದೆ.

ಇದನ್ನೂ ಓದಿ:  ಬಾಕ್ಸ್ ಆಫೀಸ್ ಕ್ಲಾಶ್ ನಡುವೆಯೂ ಶ್ರದ್ಧಾ ಕಪೂರ್ ಚಿತ್ರಕ್ಕೆ ಶುಭ ಹಾರೈಸಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರ ಈ ಸರಳತೆ ಮತ್ತು ಕಾಳಜಿಗೆ ಚಿತ್ರತಂಡದ ಸದಸ್ಯರು ಫಿದಾ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಸುಂದರ ಕ್ಷಣದ ಫೋಟೋಗಳು ಭಾರೀ ವೈರಲ್ ಆಗುತ್ತಿವೆ. ಚಿತ್ರದ ಯಶಸ್ಸಿಗಾಗಿ ಶ್ರಮಿಸುತ್ತಿರುವ ತಂಡಕ್ಕೆ ಈ ಗಿಫ್ಟ್ ದೊಡ್ಡ ಪ್ರೋತ್ಸಾಹ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us