Salman Khan: ಪ್ರಮುಖ ದಿನ ಮಿಸ್ ಮಾಡಿಕೊಳ್ಳಲಿದ್ದಾರೆ ಸಲ್ಮಾನ್ ಖಾನ್

ಸದ್ಯ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಈ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಲಿದ್ದಾರೆ. 2025ರ ಈದ್​ಗೆ ಈ ಚಿತ್ರ ರಿಲೀಸ್ ಆಗಲಿದೆ. 2026ರ ಈದ್​ನ ಮಿಸ್​ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

Salman Khan: ಪ್ರಮುಖ ದಿನ ಮಿಸ್ ಮಾಡಿಕೊಳ್ಳಲಿದ್ದಾರೆ ಸಲ್ಮಾನ್ ಖಾನ್
ಸಲ್ಮಾನ್ ಖಾನ್

Updated on: Sep 16, 2024 | 2:05 PM

ಸಲ್ಮಾನ್ ಖಾನ್ ಹಾಗೂ ಈದ್​ಗೆ ಎಲ್ಲಿಲ್ಲದ ನಂಟು. ಅವರು ಈ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಮಾಡಲು ಆದ್ಯತೆ ನೀಡುತ್ತಾರೆ. ಈ ಮೊದಲು ಅವರು ಹಲವು ಸಿನಿಮಾಗಳನ್ನು ಈ ದಿನ ರಿಲೀಸ್ ಮಾಡಿ ಗೆದ್ದಿದ್ದಾರೆ. 2025ರಲ್ಲಿ ‘ಸಿಖಂದರ್’ ಸಿನಿಮಾ ರಿಲೀಸ್ ಮಾಡುವ ಉದ್ದೇಶ ಇಟ್ಟುಕೊಂಡಿದ್ದಾರೆ. ಆದರೆ, 2026ರ ಈದ್ ಹಬ್ಬವನ್ನು ಅವರು ಮಿಸ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಸದ್ಯ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಈ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಲಿದ್ದಾರೆ. ಈ ಚಿತ್ರ 2025ರ ಈದ್​ಗೆ ರಿಲೀಸ್ ಆಗಲಿದೆ. ಆ ಬಳಿಕ ಅವರು ಅಟ್ಲೀ ಸಿನಿಮಾ ನಿರ್ದೇಶನದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ನಟಿಸುತ್ತಿದ್ದಾರೆ. 2025ರಲ್ಲಿ ಅವರು ಸಂಪೂರ್ಣವಾಗಿ ಅಟ್ಲಿ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಇದರ ವಿಎಫ್​ಎಕ್ಸ್ ಕೆಲಸಗಳು ಹೆಚ್ಚಿರಲಿದ್ದು, 2026ರ ಮಧ್ಯಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಹೀಗಾಗಿ, ಅವರಿಗೆ ಹಬ್ಬ ಮಿಸ್ ಆಗಲಿದೆ.

ಇನ್ನು, 2026ರ ಈದ್​ಗೆ ಹಲವು ಸಿನಿಮಾಗಳು ಬರೋಕೆ ರೆಡಿ ಆಗಿವೆ. ಶಾರುಖ್ ಖಾನ್ ನಟನೆಯ ‘ಕಿಂಗ್’, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಸಿನಿಮಾ ಕೂಡ ಇದೇ ದಿನಾಂಕದಂದು ಬರುತ್ತಿವೆ. ಇವುಗಳ ಜೊತೆ ಕ್ಲ್ಯಾಶ್ ಬೇಡ ಎಂದು ಸಲ್ಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು

ಈ ವರ್ಷ ಈದ್​ಗೆ ಸಲ್ಲು ಸಿನಿಮಾ ರಿಲೀಸ್ ಆಗಿಲ್ಲ. ಆದರೆ, ಅವರು ಹೊಸ ಸಿನಿಮಾ ಅನೌನ್ಸ್ ಮಾಡಿ ಅಪ್​ಡೇಟ್ ಕೊಟ್ಟರು. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರದ ನಾಯಕಿ. ಸದ್ಯ ಈ ಸಿನಿಮಾಗೆ ಶೂಟ್​ ನಡೆಯುತ್ತಿದೆ. ವಿದೇಶದಲ್ಲಿ ಶೂಟ್ ನಡೆಯಬೇಕಿದೆ. ಎಆರ್​ ಮುರುಗದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us