AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಲುಂಗಿ ಧರಿಸಿ ಸುತ್ತಾಡಿದ ಸಲ್ಮಾನ್​ ಖಾನ್​; ಸೌತ್​ ಸಿನಿಮಾ ಪ್ರಭಾವಕ್ಕೆ ಒಳಗಾದ್ರಾ ಭಾಯಿಜಾನ್​?

Salman Khan Viral Video: ಸಲ್ಮಾನ್​ ಖಾನ್​ ಅವರು​ ಈ ಗೆಟಪ್​ನಲ್ಲಿ ಎದುರಾಗಿರುವುದು ಅಚ್ಚರಿ ಮೂಡಿಸಿದೆ. ಅವರು ಕಪ್ಪು ಲುಂಗಿ ಧರಿಸಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ.

Salman Khan: ಲುಂಗಿ ಧರಿಸಿ ಸುತ್ತಾಡಿದ ಸಲ್ಮಾನ್​ ಖಾನ್​; ಸೌತ್​ ಸಿನಿಮಾ ಪ್ರಭಾವಕ್ಕೆ ಒಳಗಾದ್ರಾ ಭಾಯಿಜಾನ್​?
ಸಲ್ಮಾನ್ ಖಾನ್
TV9 Web
| Edited By: |

Updated on:Dec 01, 2022 | 11:48 AM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮುಂಬರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಡುವೆ ಸಲ್ಮಾನ್​ ಖಾನ್​ ಅವರ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ಅದರಲ್ಲಿ ಕಪ್ಪು ಲುಂಗಿ (Lungi) ಧರಿಸಿ ಸಲ್ಲು ಕಾಣಿಸಿಕೊಂಡಿದ್ದಾರೆ. ಇದು ಸಿನಿಮಾ ಶೂಟಿಂಗ್​ ಇರಬಹುದಾ ಅಥವಾ ರಿಯಲ್​ ಲೈಫ್​ನಲ್ಲಿ ಅವರು ಈ ಫ್ಯಾಷನ್​ ಫಾಲೋ ಮಾಡುತ್ತಿದ್ದಾರಾ ಎಂಬುದು ಸ್ಪಷ್ಟವಾಗಿಲ್ಲ. ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Jaan) ಸಿನಿಮಾದ ಚಿತ್ರೀಕರಣದ ಸಲುವಾಗಿ ಅವರು ಲುಂಗಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಫ್ಯಾನ್ಸ್​ ಊಹಿಸಿದ್ದಾರೆ. ದಕ್ಷಿಣ ಭಾರತದ ಸ್ಟಾರ್​ ನಟರು ಲುಂಗಿ ಮತ್ತು ಪಂಜೆ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಕಾಮನ್​. ಆದರೆ ಸಲ್ಮಾನ್​ ಖಾನ್​ ಅವರು​ ಈ ಗೆಟಪ್​ನಲ್ಲಿ ಎದುರಾಗಿರುವುದು ಅಚ್ಚರಿ ಮೂಡಿಸಿದೆ.

ಇತ್ತೀಚಿನ ವರ್ಷಗಳಲ್ಲಿ ರಿಲೀಸ್​ ಆದ ಬಹುತೇಕ ಹಿಂದಿ ಸಿನಿಮಾಗಳು ಗೆಲ್ಲುತ್ತಿಲ್ಲ. ಈ ಸಂದರ್ಭದಲ್ಲಿ ಬಾಲಿವುಡ್​ ನಿರ್ದೇಶಕರು ಹೊಸ ರೀತಿಯಲ್ಲಿ ಆಲೋಚಿಸಬೇಕಾದ ಅನಿವಾರ್ಯತೆ ಇದೆ. ಅದೇ ಕಾರಣಕ್ಕಾಗಿ ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರಿಗೆ ಈ ರೀತಿಯ ಗೆಟಪ್​ ನೀಡಲಾಗಿದೆ ಎಂದು ಅನೇಕರು ಊಹಿಸುತ್ತಿದ್ದಾರೆ. ಈ ಚಿತ್ರಕ್ಕೆ ದಕ್ಷಿಣ ಭಾರತದ ಸೊಗಡು ನೀಡಲು ಪ್ರಯತ್ನಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಕೂಡ ಮೂಡಿದೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಸಲ್ಮಾನ್​ ಖಾನ್ ಬ್ಯುಸಿ ಆಗಿದ್ದಾರೆ. ‘ಹಿಂದಿ ಬಿಗ್​ ಬಾಸ್​ ಸೀಸನ್​ 16’ ಕಾರ್ಯಕ್ರಮವನ್ನು ಅವರು ನಡೆಸಿಕೊಡುತ್ತಿದ್ದಾರೆ. ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ಮಾತ್ರವಲ್ಲದೇ ‘ಟೈಗರ್​ 3’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. 2023ರ ದೀಪಾವಳಿಗೆ ‘ಟೈಗರ್​ 3’ ಸಿನಿಮಾ ರಿಲೀಸ್​ ಆಗಲಿದೆ. 2023ರ ಏಪ್ರಿಲ್​ ವೇಳೆಗೆ ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ತೆರೆಕಾಣಲಿದೆ.

ಪಂಚೆಯಲ್ಲಿ ಮಿಂಚಿದ ರಿಷಬ್​ ಶೆಟ್ಟಿ:

ನಟ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ಈ ಚಿತ್ರದ ಪ್ರಚಾರಕ್ಕಾಗಿ ಮಂಬೈಗೆ ತೆರಳಿದ್ದಾಗ ಅವರು ಪಂಚೆ ಧರಿಸಿದ್ದರು. ಅವರ ಸ್ಟೈಲ್​ ನೋಡಿ ಅಲ್ಲಿನ ಮಂದಿ ಫಿದಾ ಆಗಿದ್ದರು. ಸೌತ್​ ಸಿನಿಮಾಗಳಲ್ಲೂ ಸ್ಟಾರ್​ ನಟರ ಪಂಚೆ ಗೆಟಪ್​ ಗಮನ ಸೆಳೆಯುತ್ತದೆ. ಸಲ್ಲು ಕೂಡ ಅದೇ ಸೂತ್ರವನ್ನು ಫಾಲೋ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:48 am, Thu, 1 December 22

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ