ಹೊಸ ಲುಕ್ ಹಂಚಿಕೊಂಡು ಸಿನಿಮಾ ಬಗ್ಗೆ ಲೇಟೆಸ್ಟ್ ಅಪ್ಡೇಟ್ ನೀಡಿದ ಸಲ್ಮಾನ್ ಖಾನ್
‘ಹೌಸ್ಫುಲ್ 4’, ‘ಬಚ್ಚನ್ ಪಾಂಡೆ’ ಅಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಫರ್ಹಾದ್ ಸಮ್ಜಿಗೆ ಇದೆ. ಈಗ ಅವರ ನಿರ್ದೇಶನದಲ್ಲಿ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಮೂಡಿ ಬರುತ್ತಿದೆ.
ನಟ ಸಲ್ಮಾನ್ ಖಾನ್ ಅವರು ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ (Kisi Ka Bhai Kisi Ki Jaan) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಮೊದಲು ಬೇರೆಯದೇ ಟೈಟಲ್ ಇಡಲಾಗಿತ್ತು. ಆದರೆ, ಇತ್ತೀಚೆಗೆ ಸಿನಿಮಾ ಶೀರ್ಷಿಕೆ ಬದಲಿಸಲಾಗಿತ್ತು. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರ ಲುಕ್ ಈ ಮೊದಲೇ ರಿವೀಲ್ ಆಗಿತ್ತು. ಸಲ್ಮಾನ್ ಖಾನ್ ಅವರು ಉದ್ದ ಕೂದಲಿನ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗ ಈ ಚಿತ್ರದ ಹೊಸ ಫೋಟೋ ಹಂಚಿಕೊಳ್ಳಲಾಗಿದೆ. ಈ ಫೋಟೋದಲ್ಲಿ ಸಲ್ಮಾನ್ ಖಾನ್ ((Salman Khan) ) ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
‘ಹೌಸ್ಫುಲ್ 4’, ‘ಬಚ್ಚನ್ ಪಾಂಡೆ’ ಅಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಫರ್ಹಾದ್ ಸಮ್ಜಿಗೆ ಇದೆ. ಅವರು ಗಾಯಕ ಹಾಗೂ ಸಂಗೀತ ನಿರ್ದೇಶಕ ಕೂಡ ಹೌದು. ಈಗ ಅವರ ನಿರ್ದೇಶನದಲ್ಲಿ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಲುಕ್ ಈಗಾಗಲೇ ರಿವೀಲ್ ಆಗಿದೆ. ಸಿನಿಮಾದ ಟೀಸರ್ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ.
ಸಲ್ಮಾನ್ ಖಾನ್ ಅವರು ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. 2023ರ ಈದ್ ಹಬ್ಬಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ. ಈದ್ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರ ಚಿತ್ರಗಳು ರಿಲೀಸ್ ಆಗೋದು ವಾಡಿಕೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಈ ವಾಡಿಕೆಗೆ ಬ್ರೇಕ್ ಬಿದ್ದಿತ್ತು. ಈಗ 2023ರಲ್ಲಿ ಸಲ್ಮಾನ್ ಖಾನ್ ಅವರ ಸಿನಿಮಾ ಈದ್ಗೆ ರಿಲೀಸ್ ಆಗುತ್ತಿದೆ.
View this post on Instagram
ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಕೇಸ್ನಿಂದ ಹೊರ ಬರಲು 25 ಕೋಟಿ ರೂ. ಖರ್ಚು ಮಾಡಿದ್ದ ಸಲ್ಮಾನ್ ಖಾನ್
ಸಲ್ಮಾನ್ ಖಾನ್ ಅವರು ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರಿಗೆ ಒಂದೊಳ್ಳೆಯ ಗೆಲುವಿನ ಅವಶ್ಯಕತೆ ಇದೆ. ಈ ಕಾರಣಕ್ಕಾಗಿ ಸಲ್ಮಾನ್ ಖಾನ್ ಕಾಯುತ್ತಿದ್ದಾರೆ. ‘ಕಿಸಿ ಕಾ ಭಾಯ್ ಹಾಗೂ ಕಿಸಿ ಕಿ ಜಾನ್’ ಚಿತ್ರದಿಂದ ಸಲ್ಮಾನ್ ಗೆಲುವಿನ ನಗು ಬೀರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:11 am, Sun, 4 December 22