ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು.

ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್
ಅನುಷ್ಕಾ-ಸಮಂತಾ-ಕೊಹ್ಲಿ
Follow us
ರಾಜೇಶ್ ದುಗ್ಗುಮನೆ
|

Updated on: May 04, 2023 | 1:12 PM

ಅನುಷ್ಕಾ ಶರ್ಮಾ ಹಾಗೂ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನುಷ್ಕಾ ಬಾಲಿವುಡ್​ನಲ್ಲಿ ಬ್ಯುಸಿ ಇದ್ದರೆ, ಸಮಂತಾ ಅವರು ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಈಗ ಇಬ್ಬರೂ ವೆಬ್ ಸೀರಿಸ್ ಒಂದರಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ವರದಿ ಆಗಿದೆ. ವಿಶೇಷ ಎಂದರೆ  ಸಹೋದರ, ವಿರಾಟ್ ಕೊಹ್ಲಿ ಭಾವ ಕರ್ಣೇಶ್ ಶರ್ಮಾ (Karnesh Sharma) ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಅಧಿಕೃತವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಅನುಷ್ಕಾ ಶರ್ಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಮಂತಾ ಕೂಡ ಆ್ಯಕ್ಷನ್ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈಗ ಇಬ್ಬರೂ ಸೇರಿ ಒಂದು ಹೊಸ ವೆಬ್ ಸೀರಿಸ್ ನಿರ್ಮಾಣ ಮಾಡಲು ಹೊರಟಿದ್ದಾರೆ. ಸಮಂತಾ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ ಕರ್ಣೇಶ್ ಶರ್ಮಾ ಅವರು ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಡಲಿದ್ದಾರೆ.

ಕರ್ಣೇಶ್ ಶರ್ಮಾ ಅವರು ಈ ಮೊದಲು ‘ಪಾತಾಳ್ ಲೋಕ್​’ ವೆಬ್​ ಸೀರಿಸ್ ಹಾಗೂ ‘ಬುಲ್​ಬುಲ್​’, ‘ಪರಿ’ ಮೊದಲಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಅವರು ವೆಬ್ ಸೀರಿಸ್ ನಿರ್ದೇಶನಕ್ಕೆ ಕಾಲಿಡುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ 25 ಕೋಟಿ ರೂಪಾಯಿ ಖರ್ಚಾಗಲಿದೆ. ಸಮಂತಾಗೆ ಕಥೆ ಇಷ್ಟವಾಗಿದ್ದು, ಅದನ್ನು ನಿರ್ಮಾಣ ಮಾಡಲು ಅವರು ಕೂಡ ಆಸಕ್ತಿ ತೋರಿಸಿದ್ದಾರೆ.

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು. ಈ ವೆಬ್ ಸೀರಿಸ್ ನಿರ್ದೇಶನ ಮಾಡಿದ್ದ ರಾಜ್​ ಮತ್ತು ಡಿಕೆ ಹೊಸ ವೆಬ್ ಸೀರಿಸ್ ಡೈರೆಕ್ಷನ್ ಮಾಡುತ್ತಿದ್ದಾರೆ. ಇಂಗ್ಲಿಷ್ ‘ಸಿಟಾಡೆಲ್​’ನ ಭಾರತದ ವರ್ಷನ್​ ಇದಾಗಿದ್ದು, ಸಮಂತಾ ಇದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ವರುಣ್ ಧವನ್ ಕೂಡ ಇದರಲ್ಲಿ ನಟಿಸಿದ್ದಾರೆ. ಇದರಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

ಇದನ್ನೂ ಓದಿ:  ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್​ 1; ಸಿನಿಮಾ ಸೋತರೂ ಕಮ್ಮಿ ಆಗಿಲ್ಲ ಖ್ಯಾತಿ

ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೋಲು ಕಂಡಿದೆ. ಸದ್ಯ ಅವರು ‘ಖುಷಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು