‘ಅನಿಮಲ್ ಪಾರ್ಕ್​’ ಚಿತ್ರ ಮಾಡಲು ನಿರ್ದೇಶಕ ರೆಡಿ; ಚಿತ್ರೀಕರಣ ಯಾವಾಗಿನಿಂದ?

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲೂ ರಣಬೀರ್ ಕಪೂರ್ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರಗಳ ಕೆಲಸಗಳು ಪೂರ್ಣಗೊಂಡ ಬಳಿಕ ‘ಅನಿಮಲ್ ಪಾರ್ಕ್’ ಚಿತ್ರದ ಕೆಲಸಗಳಲ್ಲಿ ರಣಬೀರ್ ಬ್ಯುಸಿ ಆಗಲಿದ್ದಾರೆ ಎನ್ನಲಾಗುತ್ತಿದೆ. 2025ರಲ್ಲಿ ಸಿನಿಮಾ ಸೆಟ್ಟೇರಲಿದೆ.

‘ಅನಿಮಲ್ ಪಾರ್ಕ್​’ ಚಿತ್ರ ಮಾಡಲು ನಿರ್ದೇಶಕ ರೆಡಿ; ಚಿತ್ರೀಕರಣ ಯಾವಾಗಿನಿಂದ?
ರಣಬೀರ್
Follow us
ರಾಜೇಶ್ ದುಗ್ಗುಮನೆ
|

Updated on: Jan 31, 2024 | 12:46 PM

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ (Animal Movie) ಸೂಪರ್ ಹಿಟ್ ಎನಿಸಿಕೊಂಡಿದೆ. ಒಂದು ವರ್ಗದ ಜನರು ಚಿತ್ರವನ್ನು ಟೀಕೆ ಮಾಡಿದರೆ ಇನ್ನೂ ಒಂದು ವರ್ಗದ ಜನರು ಸಿನಿಮಾನ ಹೊಗಳಿದ್ದಾರೆ. ‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್ ಮಾಡಲು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘ಅನಿಮಲ್ ಪಾರ್ಕ್’ ಎಂದು ಶೀರ್ಷಿಕೆ ಇಡಲು ನಿರ್ದೇಶಕರು ನಿರ್ಧರಿಸಿದ್ದಾರೆ. 2025ರ ವೇಳೆಗೆ ಶೂಟಿಂಗ್ ಆರಂಭ ಆಗೋ ನಿರೀಕ್ಷೆ ಇದೆ.

ರಣಬೀರ್ ಕಪೂರ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಸಿನಿಮಾ ಶೂಟಿಂಗ್​ನಲ್ಲಿ ರಣಬೀರ್ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಳ್ಳೋದು ಮುಂದಿನ ವರ್ಷ. ನಿತೇಶ್ ತಿವಾರಿ ಅವರ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲೂ ರಣಬೀರ್ ಕಪೂರ್ ಬ್ಯುಸಿ ಆಗಲಿದ್ದಾರೆ. ಈ ಚಿತ್ರಗಳ ಕೆಲಸಗಳು ಪೂರ್ಣಗೊಂಡ ಬಳಿಕ ‘ಅನಿಮಲ್ 2’ ಚಿತ್ರದ ಕೆಲಸಗಳಲ್ಲಿ ರಣಬೀರ್ ಬ್ಯುಸಿ ಆಗಲಿದ್ದಾರೆ ಎನ್ನಲಾಗುತ್ತಿದೆ.

‘ಅನಿಮಲ್ ಪಾರ್ಕ್’ ಸಿನಿಮಾ ರಣವಿಜಯ್ ಪಾತ್ರದ ಮೇಲೆ ಸಾಗಲಿದೆ. ಪತ್ನಿ ಜೊತೆಗಿನ ಕಿತ್ತಾಟ ಮತ್ತಿತ್ಯಾದಿ ವಿಚಾರಗಳು ಹೈಲೈಟ್ ಆಗಲಿವೆ. ಹಲವು ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಲಿದ್ದಾರೆ.  ಈ ಸಿನಿಮಾದ ಒಂದೆಳೆಯನ್ನು ನಿರ್ದೇಶಕರು ಸಿದ್ಧಪಡಿಸಿದ್ದಾರೆ. ಸ್ಕ್ರಿಪ್ಟ್ ಕೆಲಸ ಆರಂಭಿಸೋದು ಬಾಕಿ ಇದೆ.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ಸಂದೀಪ್ ರೆಡ್ಡಿ ವಂಗ ಅವರು ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ಶೂಟಿಂಗ್ ಈ ವರ್ಷವೇ ಆರಂಭ ಆಗಲಿದೆ. 2024ರ ದ್ವಿತೀಯಾರ್ಧದಲ್ಲಿ ಸಿನಿಮಾದ ಶೂಟಿಂಗ್ ಪ್ರಾರಂಭಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ. ಇದಾದ ಬಳಿಕ ಅವರು ‘ಅನಿಮಲ್ ಪಾರ್ಕ್’ ಸಿನಿಮಾ ಶೂಟಿಂಗ್ ಆರಂಭಿಸೋ ಆಲೋಚನೆ ಇದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಅನಿಮಲ್’ ಬಂದಿದ್ದಕ್ಕೆ ರಶ್ಮಿಕಾಗೆ ಸಿಕ್ಕಾಪಟ್ಟೆ ಖುಷಿ

‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಹಾಳಾದ ತಂದೆ ಹಾಗೂ ಮಗನ ಸಂಬಂಧದ ಬಗ್ಗೆ ಇದೆ. ತಂದೆಯನ್ನು ರಕ್ಷಣೆ ಮಾಡಲು ಯಾವ ಹಂತಕ್ಕೆ ಬೇಕಿದ್ದರೂ ಹೋಗೋ ಮಗನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್