AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಆರ್​ಎಸ್​ಎಸ್​ ಬಗ್ಗೆ ಪರ-ವಿರೋಧದ ಅಭಿಪ್ರಾಯಗಳಿವೆ. ಅವುಗಳನ್ನೇ ಇಟ್ಟುಕೊಂಡು ‘ಆಖ್ರಿ ಸವಾಲ್’ ಸಿನಿಮಾ ಮಾಡಲಾಗಿದೆ. ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇ 8ರಂದು ಈ ಸಿನಿಮಾ ತೆರೆಕಾಣಲಿದೆ. ಈಗ ಟೀಸರ್ ಗಮನ ಸೆಳೆಯುತ್ತಿದೆ.

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ
Sanjay Dutt
ಮದನ್​ ಕುಮಾರ್​
|

Updated on: Apr 02, 2026 | 5:56 PM

Share

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಆರ್​ಎಸ್​ಎಸ್​ (RSS) ಕುರಿತಾದ ಕಥೆ ಇದೆ.

‘ಆಖ್ರಿ ಸವಾಲ್’ ಚಿತ್ರದ ಕಥೆಯು ವಿಕ್ಕಿ ಎಂಬ ವಿದ್ಯಾರ್ಥಿಯ ಸುತ್ತ ಸಾಗುತ್ತದೆ. ತನ್ನ ಪ್ರಬಂಧವನ್ನು ತಿರಸ್ಕರಿಸಿದ ಗುರುವಿಗೆ ಆತ ಆರ್​ಎಸ್​ಎಸ್​ ಕುರಿತು ಪ್ರಶ್ನಿಸುತ್ತಾನೆ. ಇದು ಕೇವಲ ವೈಯಕ್ತಿಕ ಭಿನ್ನಾಭಿಪ್ರಾಯವಾಗಿ ಉಳಿಯದೆ, ಇಡೀ ದೇಶದ ಗಮನ ಸೆಳೆಯುವ ಸಾರ್ವಜನಿಕ ಚರ್ಚೆಯಾಗಿ ಮಾರ್ಪಡುತ್ತದೆ. ಸಿನಿಮಾವು ಪ್ರಬಲವಾದ ಗುರು-ಶಿಷ್ಯರ ನಡುವಿನ ಸಂಘರ್ಷವನ್ನು ತೆರೆಯ ಮೇಲೆ ತರಲಿದೆ ಎಂಬುದು ಟೀಸರ್​ನಲ್ಲಿ ಕಾಣಿಸಿದೆ.

ಈ ಮೊದಲು ಬಿಡುಗಡೆಯಾದ ಪೋಸ್ಟರ್‌ನಲ್ಲಿ ಸಂಜಯ್ ದತ್ ಅತ್ಯಂತ ಗಂಭೀರವಾದ ಮುಖಭಾವದಲ್ಲಿ ಕಾಣಿಸಿಕೊಂಡಿದ್ದಾರೆ. ಬೃಹತ್ ಪ್ರಶ್ನಾರ್ಥಕ ಚಿಹ್ನೆಯ ಒಳಗೆ ಅವರ ಮುಖವನ್ನು ಚಿತ್ರಿಸಲಾಗಿದ್ದು, ಕಪ್ಪು ಮತ್ತು ಬೆಂಕಿಯಂತಹ ಕೆಂಪು ಬಣ್ಣದ ವಿನ್ಯಾಸವು ಚಿತ್ರದ ತೀವ್ರತೆಯನ್ನು ಸಾರುತ್ತಿದೆ. ‘ಭಾರತ ಎಂದಿಗೂ ಕೇಳುವುದನ್ನು ನಿಲ್ಲಿಸದ ಪ್ರಶ್ನೆ’ ಎಂಬ ಟ್ಯಾಗ್‌ಲೈನ್ ಪೋಸ್ಟರ್‌ನಲ್ಲಿ ಗಮನ ಸೆಳೆದಿದೆ.

‘ಆಖ್ರಿ ಸವಾಲ್’ ಟೀಸರ್:

ಸಂಜಯ್ ದತ್ ಜೊತೆಗೆ ಅಮಿತ್ ಸಾಧ್, ಸಮೀರಾ ರೆಡ್ಡಿ, ನಮಾಶಿ ಚಕ್ರವರ್ತಿ, ನೀತು ಚಂದ್ರ ಮತ್ತು ತ್ರಿದಾ ಚೌಧರಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂಜಯ್ ದತ್ ಮತ್ತು ನಿಖಿಲ್ ನಂದಾ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಿನಿಮಾವು ಮೇ 8ರಂದು ತೆರೆಕಾಣಲಿದೆ. ಆರ್​ಎಸ್​ಎಸ್​ ಬ್ಯಾನ್ ಆಗಿದ್ದು, ಬಾಬ್ರಿ ಮಸೀದಿ ಧ್ವಂಸ ಆಗಿದ್ದು ಸೇರಿದಂತೆ ಹಲವು ವಿವಾದಿತ ವಿಷಯಗಳ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗುವುದು.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಸದ್ಯ ಸಂಜಯ್ ದತ್ ಅವರು ‘ಧುರಂಧರ್: ದಿ ರಿವೇಂಜ್’ ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದರಲ್ಲಿ ಅವರು ಪಾಕಿಸ್ತಾನಿ ಪೊಲೀಸ್ ಅಧಿಕಾರಿ ಚೌಧರಿ ಅಸ್ಲಂ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ದಾಖಲೆ ಬರೆಯುತ್ತಿದೆ. ಇದಲ್ಲದೇ, ‘ರಾಜಾ ಶಿವಾಜಿ’ ಮತ್ತು ‘ಕೆಡಿ’ ಸಿನಿಮಾಗಳಲ್ಲೂ ಸಂಜಯ್ ದತ್ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ