AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ; ನಟಿಯ ಕೈಯಲ್ಲಿವೆ ಇನ್ನೂ ಹಲವು ಸಿನಿಮಾ

The Vaccine War: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೆಲವು ದಿನಗಳ ಶೂಟಿಂಗ್​ ಬಾಕಿ ಇದೆ.

Sapthami Gowda: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ; ನಟಿಯ ಕೈಯಲ್ಲಿವೆ ಇನ್ನೂ ಹಲವು ಸಿನಿಮಾ
ಸಪ್ತಮಿ ಗೌಡ, ದಿ ವ್ಯಾಕ್ಸಿನ್​ ವಾರ್​
ಮದನ್​ ಕುಮಾರ್​
|

Updated on: Jun 08, 2023 | 10:58 PM

Share

ನಟಿ ಸಪ್ತಮಿ ಗೌಡ (Sapthami Gowda) ಅವರಿಗೆ ಇಂದು (ಜೂನ್​ 8) ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅವರಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳ ಮತ್ತು ಆಪ್ತರ ಪ್ರೀತಿ-ಹಾರೈಕೆಗಳನ್ನು ಕಂಡು ಸಪ್ತಮಿ ಗೌಡ ಅವರಿಗೆ ಖುಷಿ ಆಗಿದೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಅವರು ನಟಿಸುತ್ತಿರುವ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ಈ ಸಿನಿಮಾಗೆ ‘ದಿ ಕಾಶ್ಮೀರ್​ ಫೈಲ್ಸ್​’ ಖ್ಯಾತಿಯ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಕನ್ನಡದ ಸಿನಿಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಈ ವರ್ಷ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಈಗ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೆಲವು ದಿನಗಳ ಶೂಟಿಂಗ್​ ಬಾಕಿ ಇದೆ. ಭಾರತದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೂ ಮುನ್ನ ಅಮೆರಿಕದಲ್ಲಿ ಪ್ರೀಮಿಯರ್​ ಮಾಡಲು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಪ್ಲ್ಯಾನ್​ ಪ್ರಕಾರವೇ ಹೋಗುವುದಾದರೆ ‘ದಿ ವ್ಯಾಕ್ಸಿನ್​ ವಾರ್​’ ಬಿಡುಗಡೆ ಆಗಲು ಕೊಂಚ ಕಾಯಬೇಕಾಗುತ್ತದೆ. ಹಾಗಾಗಿ ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಪ್ತಮಿ ಗೌಡ ನಟಿಸಿದ ಮೊದಲ ಸಿನಿಮಾ ‘ಪಾಪ್​ ಕಾರ್ನ್​ ಮಂಕಿ ಟೈಗರ್​’. ಆ ಸಿನಿಮಾದಲ್ಲಿ ಅವರು ಡಾಲಿ ಧನಂಜಯ್​ ಜೊತೆ ತೆರೆ ಹಂಚಿಕೊಂಡಿದ್ದರು. ಎರಡನೇ ಸಿನಿಮಾ ‘ಕಾಂತಾರ’ದಲ್ಲಿ ರಿಷಬ್​ ಶೆಟ್ಟಿ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಅಭಿಷೇಕ್​ ಅಂಬರೀಷ್​ ನಾಯಕತ್ವದ ‘ಕಾಳಿ’ ಸಿನಿಮಾ ಅವರ ಮೂರನೇ ಚಿತ್ರ ಆಗಲಿದೆ. 4ನೇ ಚಿತ್ರದ ಮೂಲಕ ಸಪ್ತಮಿ ಗೌಡ ನೇರವಾಗಿ ಬಾಲಿವುಡ್​ ಟಿಕೆಟ್​ ಪಡೆದರು. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಾಕಷ್ಟು ಕುತೂಹಲ ಇದೆ. ಇದರ ಜೊತೆಗೆ ಯುವ ರಾಜ್​ಕುಮಾರ್​ ಅಭಿನಯದ ‘ಯುವ’ ಸಿನಿಮಾಗೂ ಅವರು ನಾಯಕಿ ಆಗಿದ್ದಾರೆ.

Sapthami Gowda Birthday: ಈ ವರ್ಷದ ಬರ್ತ್​ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ

ವಿವೇಕ್​ ಅಗ್ನಿಹೋತ್ರಿ ಅವರು ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡದ ವಿಷಯವನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಮೂಡಿಬಂದಿತ್ತು. ಆ ಸಿನಿಮಾ ಭಾರಿ ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಕೊರೊನಾ ವ್ಯಾಕ್ಸಿನ್​ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಬಿಡುಗಡೆ ಆದಾಗಲೂ ಸಂಚಲನ ಸೃಷ್ಟಿ ಮಾಡುವ ಸಾಧ್ಯತೆ ಇದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಿಂದ ಸಪ್ತಮಿ ಗೌಡ ಅವರ ವೃತ್ತಿ ಜೀವನಕ್ಕೆ ಇನ್ನಷ್ಟು ಮೈಲೇಜ್​ ಸಿಗುತ್ತದೆ ಎಂದು ನಿರೀಕ್ಷಿಸಲಾಗುತ್ತಿದೆ. ಇದಲ್ಲದೇ ಇನ್ನೂ ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More