ಕೇದಾರನಾಥಕ್ಕೆ ಭೇಟಿ ಕೊಟ್ಟ ನಟಿ ಸಾರಾ ಅಲಿ ಖಾನ್ ವಿರುದ್ಧ ಫತ್ವಾ

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ವಿವಾದಕ್ಕೆ ಈಡಾಗಿದೆ. ಇಸ್ಲಾಮಿಕ್ ಧರ್ಮಗುರುಗಳು ನಟಿಯ ವಿರುದ್ಧ ಫತ್ವಾ ಹೊರಡಿಸಿದ್ದು, ಶರಿಯಾ ಪ್ರಕಾರ ಇದು ಹರಾಮ್ ಎಂದು ಹೇಳಿದ್ದಾರೆ. ಸಾರಾ ಅಲಿ ಖಾನ್ ಅಲ್ಲಾಹನಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇದಾರನಾಥಕ್ಕೆ ಭೇಟಿ ಕೊಟ್ಟ ನಟಿ ಸಾರಾ ಅಲಿ ಖಾನ್ ವಿರುದ್ಧ ಫತ್ವಾ
ಸಾರಾ ಅಲಿ ಖಾನ್

Updated on: Oct 30, 2026 | 10:53 AM

ಮುಖ್ಯಾಂಶಗಳು

  • ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಸಾರಾ ಅಲಿ ಖಾನ್ ವಿರುದ್ಧ ಹೊರಬಿದ್ದ ಫತ್ವಾ
  • ಶರಿಯಾ ಕಾಯ್ದೆ ಪ್ರಕಾರ ಹರಾಮ್: ನಟಿ ಸಾರಾ ಕ್ಷಮೆಯಾಚಿಸಲು ಇಸ್ಲಾಮಿಕ್ ಧರ್ಮಗುರು ಆಗ್ರಹ
  • ನಿಯಮದಂತೆಯೇ ಅಫಿಡವಿಟ್ ಸಲ್ಲಿಸಿ ದರ್ಶನ ಪಡೆದಿದ್ದ ಸಾರಾ: ಬಿಡಿಆರ್‌ಟಿ ಸ್ಪಷ್ಟನೆ

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಮೂಲದ ಇಸ್ಲಾಮಿಕ್ ಧರ್ಮಗುರು ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ನಟಿಯ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ಹಿಂದೂ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಇಸ್ಲಾಂ ಶರಿಯಾ ಕಾಯ್ದೆಯ ಪ್ರಕಾರ ಹರಾಮ್ ಎಂದು ಅವರು ಕರೆದಿದ್ದಾರೆ.

ಸಾರಾ ಅಲಿ ಖಾನ್ ಅವರು ಅಕ್ಟೋಬರ್ 25ರಂದು ಕೇದಾರನಾಥಕ್ಕೆ ಭೇಟಿ ನೀಡಿದ್ದರು. ಅವರು ಭಕ್ತರ ಸಾಲಿನಲ್ಲಿ ನಿಂತು ದರ್ಶನ ಪಡೆದಿದ್ದರು. ದೇವಾಲಯದ ಹೊರಗೆ ಕೈಮುಗಿದು ನಿಂತಿದ್ದ ಅವರ ಫೋಟೋಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದನ್ನು ಖಂಡಿಸಿರುವ ಧರ್ಮಗುರು, ಇಸ್ಲಾಂ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮದಂತೆ ಪೂಜೆ ಮಾಡುವುದು ಶರಿಯಾ ಪ್ರಕಾರ ಅಪರಾಧ ಎಂದು ಹೇಳಿದ್ದಾರೆ. ನಟಿ ಸಾರಾ ಕೂಡಲೇ ಅಲ್ಲಾಹನಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಕೇದಾರನಾಥ ದೇವಾಲಯದ ಜೊತೆ ವಿಶಿಷ್ಟ ಅನುಬಂಧವಿದೆ. ಅವರು ‘ಕೇದಾರ್​​ನಾಥ್ ಚಿತ್ರದ ಶೂಟಿಂಗ್​​ನ ಇಲ್ಲಿ ಮಾಡಿದ್ದರು. ಇದಾದ ಬಳಿಕ ನಿಯಮಿತವಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ಮತ್ತು ನಟಿ ಅಮೃತಾ ಸಿಂಗ್ ಅವರ ಪುತ್ರಿಯಾಗಿರುವ ಸಾರಾ, ಈ ಹಿಂದೆಯೂ ಅವರ ದೇವಾಲಯ ಭೇಟಿಗಳ ವಿರುದ್ಧ ಕೆಲವು ಧರ್ಮಗುರುಗಳಿಂದ ವಿರೋಧ ವ್ಯಕ್ತವಾಗಿತ್ತು.

ಇನ್ನೊಂದೆಡೆ ಬದ್ರಿನಾಥ್-ಕೇದಾರನಾಥ ದೇವಾಲಯ ಸಮಿತಿಯು ಅನ್ಯಧರ್ಮೀಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತಂದಿದೆ. ಹಿಂದೂಯೇತರರು ದೇವಾಲಯದಲ್ಲಿ ಪೂಜೆ ಸಲ್ಲಿಸಲು ಬಯಸಿದರೆ ಪ್ರಮಾಣಪತ್ರ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾರಾ ಅಲಿ ಖಾನ್ ಅವರ ತಂಡವು ದೇವಾಲಯ ಪ್ರವೇಶಕ್ಕೂ ಮುನ್ನ ಈ ನಿಯಮದಂತೆ ಅಗತ್ಯ ಪ್ರಮಾಣಪತ್ರವನ್ನು ಸಲ್ಲಿಸಿತ್ತು ಎಂದು ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಹನ್ ಸಿಂಗ್ ರಂಗರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಸಾರಾ ಅಲಿ ಖಾನ್ ವಿರುದ್ಧ ಓರಿ ಗಂಭೀರ ಆರೋಪ; ಪಾರ್ಟಿಯಲ್ಲಿ ಹುಡುಗಿಯನ್ನು ಕುರ್ಚಿಯಿಂದ ತಳ್ಳಿದ್ರಂತೆ ನಟಿ

ಸಾರಾ ಅಲಿ ಖಾನ್ ಅವರ ಈ ಭೇಟಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೆಲವರು ನಟಿಯ ನಿರ್ಧಾರವನ್ನು ಬೆಂಬಲಿಸಿದರೆ, ಇನ್ನು ಕೆಲವರು ಧರ್ಮಗುರುಗಳ ಹೇಳಿಕೆಗೆ ಬೆಂಬಲ ಸೂಚಿಸುತ್ತಿದ್ದಾರೆ. ಪ್ರಸ್ತುತ ಸಾರಾ ಅಲಿ ಖಾನ್ ಈ ಫತ್ವಾ ಮತ್ತು ವಿವಾದದ ಕುರಿತು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us