Sara Ali Khan: ಹಿಂದೂಗಳ ದೇವಸ್ಥಾನಕ್ಕೆ ತೆರಳಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಖಡಕ್​ ತಿರುಗೇಟು ನೀಡಿದ ಸಾರಾ ಅಲಿ ಖಾನ್​

ಟ್ರೋಲ್ ಮಾಡಿದವರಿಗೆ ಸಾರಾ ಅಲಿ ಖಾನ್​ ಅವರು ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Sara Ali Khan: ಹಿಂದೂಗಳ ದೇವಸ್ಥಾನಕ್ಕೆ ತೆರಳಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಖಡಕ್​ ತಿರುಗೇಟು ನೀಡಿದ ಸಾರಾ ಅಲಿ ಖಾನ್​
ಸಾರಾ ಅಲಿ ಖಾನ್
Follow us
ಮದನ್​ ಕುಮಾರ್​
|

Updated on: Jun 02, 2023 | 7:15 AM

ನಟಿ ಸಾರಾ ಅಲಿ ಖಾನ್​ (Sara Ali Khan) ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwar Temple) ಭೇಟಿ ನೀಡಿದ್ದರು. ಮುಸ್ಲಿಂ ಎಂಬ ಕಾರಣಕ್ಕೆ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗಿತ್ತು. ತಮ್ಮನ್ನು ಟ್ರೋಲ್ (Troll)​ ಮಾಡಿದವರಿಗೆ ಈಗ ಸಾರಾ ಅಲಿ ಖಾನ್​ ಅವರು ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲ ಧರ್ಮದ ಪೂಜಾ ಸ್ಥಳಗಳಿಗೆ ತಾವು ಇಷ್ಟೇ ಶ್ರದ್ಧೆ ಮತ್ತು ಭಕ್ತಿಯಿಂದ ಹೋಗುವುದಾಗಿ ಅವರು ಹೇಳಿದ್ದಾರೆ. ಪ್ರಸ್ತುತ ಸಾರಾ ಅಲಿ ಖಾನ್​ ಅವರು ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದಾರೆ. ಈ ನಡುವೆ ಅವರಿಗೆ ಟ್ರೋಲ್​ ಕಾಟ ಎದುರಾಗಿದೆ. ಅದಕ್ಕೆ ಅವರು ತಲೆ ಕೆಡಿಸಿಕೊಂಡಿಲ್ಲ. ತಮ್ಮ ನಿಲುವು ಏನು ಎಂಬುದನ್ನು ಅವರು ಸುದ್ದಿಗೋಷ್ಠಿಯಲ್ಲೇ ಸ್ಪಷ್ಟಪಡಿಸಿದ್ದಾರೆ.

‘ನಾನು ನನ್ನ ಕೆಲಸವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಜನರಿಗಾಗಿ ಮತ್ತು ನಿಮಗಾಗಿ ಕೆಲಸ ಮಾಡುತ್ತೇನೆ. ನನ್ನ ಕೆಲಸ ನಿಮಗೆ ಇಷ್ಟವಾಗದಿದ್ದರೆ ನನಗೆ ಬೇಸರ ಆಗುತ್ತದೆ. ಆದರೆ ನನ್ನ ವೈಯಕ್ತಿಕ ನಂಬಿಕೆಗಳು ನನಗೆ ಸಂಬಂಧಿಸಿದ್ದು. ನಾನು ಅಜ್ಮೇರ್​ ಶರೀಫ್​ ದರ್ಗಾಗೆ ಹೋಗುವಷ್ಟೇ ಶ್ರದ್ಧೆಯಿಂದ ಬಂಗ್ಲಾ ಸಾಹಿಬ್​ ಗುರುದ್ವಾರಕ್ಕೆ ಹೋಗುತ್ತೇನೆ. ಅಷ್ಟೇ ಶ್ರದ್ಧೆಯಿಂದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಇದನ್ನು ನಾನು ಮುಂದುವರಿಸುತ್ತೇನೆ. ಜನರು ಏನು ಬೇಕಾದರೂ ಹೇಳಲಿ. ನನಗೆ ತೊಂದರೆ ಇಲ್ಲ. ನಿಮಗೆ ಆ ಕ್ಷೇತ್ರದ ಶಕ್ತಿ ಇಷ್ಟವಾಗಬೇಕು. ನಾನು ಆ ಶಕ್ತಿಯನ್ನು ನಂಬುತ್ತೇನೆ’ ಎಂದು ಸಾರಾ ಅಲಿ ಖಾನ್​ ಹೇಳಿದ್ದಾರೆ.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಸಾರಾ ಅಲಿ ಖಾನ್​ ಅವರು ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿದ್ದರು. ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದರು. ಈ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಅದನ್ನು ಕಂಡು ಅನೇಕರು ಕಮೆಂಟ್​ ಮಾಡಿದ್ದರು. ಸಾರಾ ಅಲಿ ಖಾನ್​ಗೆ ಕೆಲವರು ಮೆಚ್ಚುಗೆ ಸೂಚಿಸಿದರೆ, ಇನ್ನೂ ಕೆಲವರು ತಕರಾರು ತೆಗೆದಿದ್ದರು. ಇದೆಲ್ಲ ಪ್ರಚಾರದ ಗಿಮಿಕ್​ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದರು. ಸಿನಿಮಾದ ಗೆಲುವಿಗಾಗಿ ಸೆಲೆಬ್ರಿಟಿಗಳು ಇಂಥದ್ದನ್ನೆಲ್ಲ ಮಾಡುತ್ತಾರೆ ಎಂಬ ಕಮೆಂಟ್​ಗಳು ಕೂಡ ಬಂದಿದ್ದವು. ಅದಕ್ಕೆಲ್ಲ ಈಗ ಸಾರಾ ಅಲಿ ಖಾನ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Sara Ali Khan: ಕಾನ್​ನಲ್ಲಿ ಸಾರಾ ಅಲಿ ಖಾನ್ ಧರಿಸಿರುವ ಉಡುಪಿನ ವಿಶೇಷತೆ ಗೊತ್ತೆ?

ಸಾರಾ ಅಲಿ ಖಾನ್​ ಅವರು ನಟಿಸಿರುವ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಸಾರಾ ಅಲಿ ಖಾನ್​ ಮತ್ತು ವಿಕ್ಕಿ ಕೌಶಲ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಜೂನ್​ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸೈಫ್ ಅಲಿ ಖಾನ್​ ಅವರ ಮಗಳು ಎಂಬ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಸಾಕಷ್ಟು ಅವಕಾಶಗಳು ಸಿಗುತ್ತಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅವರು ಗೆಲುವು ಕಂಡಿಲ್ಲ. ಲವ್​, ರಿಲೇಷನ್​ಶಿಪ್​ ಕಾರಣಕ್ಕೂ ಅವರು ಆಗಾಗ ಸುದ್ದಿ ಆಗುತ್ತಾರೆ. ಈ ಹಿಂದೆ ನಟ ಕಾರ್ತಿಕ್​ ಆರ್ಯನ್​ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಇತ್ತೀಚೆಗೆ ಸಾರಾ ಅಲಿ ಖಾನ್​ ಅವರು ಕಾನ್​ ಚಿತ್ರೋತ್ಸವಕ್ಕೆ ಹಾಜರಿ ಹಾಕಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ