Sara Ali Khan: ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರಕ್ಕೆ ಸಾಧಾರಣ ಓಪನಿಂಗ್​; ಸಾರಾ ಅಲಿ ಖಾನ್​ ಮುಖದಲ್ಲಿ ಮೂಡಿತು ನಗು

Zara Hatke Zara Bachke Collections: ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾಗೆ ಭಾನುವಾರ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಬೋರ್ಡ್​ ಕಾಣಿಸಿಕೊಂಡಿದೆ. ಇದರಿಂದ ಹೆಚ್ಚಿನ ಕಲೆಕ್ಷನ್​ ಆಗವ ಸಾಧ್ಯತೆ ಇದೆ.

Sara Ali Khan: ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರಕ್ಕೆ ಸಾಧಾರಣ ಓಪನಿಂಗ್​; ಸಾರಾ ಅಲಿ ಖಾನ್​ ಮುಖದಲ್ಲಿ ಮೂಡಿತು ನಗು
ವಿಕ್ಕಿ ಕೌಶಲ್​, ಸಾರಾ ಅಲಿ ಖಾನ್​

Updated on: Jun 04, 2023 | 2:36 PM

ನಟಿ ಸಾರಾ ಅಲಿ ಖಾನ್​ (Sara Ali Khan) ಅವರು ಬಾಲಿವುಡ್​ನಲ್ಲಿ ಒಂದು ದೊಡ್ಡ ಯಶಸ್ಸಿಗಾಗಿ ಕಾದಿದ್ದಾರೆ. ಅವರು ನಟಿಸಿದ ಹೊಸ ಸಿನಿಮಾ ‘ಜರಾ ಹಟ್ಕೆ ಜರಾ ಬಚ್ಕೆ’ (Zara Hatke Zara Bachke) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ಮೊದಲ ದಿನ ಈ ಸಿನಿಮಾ ಸಾಧಾರಣ ಓಪನಿಂಗ್​ ಪಡೆದುಕೊಂಡಿದೆ. ಜೂನ್​ 2ರಂದು ತೆರೆಕಂಡು ಈ ಚಿತ್ರಕ್ಕೆ ಮೊದಲ ಸಿನಿಮಾ ಸಂಗ್ರಹ ಆಗಿದ್ದು 5.49 ಕೋಟಿ ರೂಪಾಯಿ. ಆದರೆ ಎರಡನೇ ದಿನವಾದ ಶನಿವಾರ (ಜೂನ್​ 3) ಕೊಂಚ ಚೇತರಿಕೆ ಕಂಡಿದ್ದು, 7.20 ಕೋಟಿ ರೂಪಾಯಿ ಕಲೆಕ್ಷನ್ (Box Office Collection)​ ಆಯಿತು. ಈ ಸಿನಿಮಾದಲ್ಲಿ ಸಾರಾ ಅಲಿ ಖಾನ್​ ಮತ್ತು ವಿಕ್ಕಿ ಕೌಶಲ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಬಾಲಿವುಡ್​ ಸಿನಿಮಾಗಳು ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿಲ್ಲ. ಹಾಗಾಗಿ ಸಾಧಾರಣೆ ಗಳಿಕೆ ಆದರೂ ಕೂಡ ಸಮಾಧಾನಪಟ್ಟುಕೊಳ್ಳಬೇಕಾದ ಪರಿಸ್ಥಿತಿ ಇದೆ. ಮೊದಲ ಎರಡು ದಿನಗಳಲ್ಲಿ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದ ಕಲೆಕ್ಷನ್​ ಎರಡಂಕಿ ಮೀರಲು ಸಾಧ್ಯವಾಗಿಲ್ಲ. ಆದರೆ ಭಾನುವಾರ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಬೋರ್ಡ್​ ಕಾಣಿಸಿಕೊಂಡಿದೆ. ಇದರಿಂದ ಹೆಚ್ಚಿನ ಕಲೆಕ್ಷನ್​ ಆಗವ ಸಾಧ್ಯತೆ ಇದೆ. ಮೂರು ದಿನಕ್ಕೆ 22 ಕೋಟಿ ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಟ್ರೇಡ್​ ವಿಶ್ಲೇಷಕರು ಅಂದಾಜಿಸಿದ್ದಾರೆ.

ಸಾರಾ ಅಲಿ ಖಾನ್​ ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಸ್ಲಿಂ ಎಂಬ ಕಾರಣಕ್ಕೆ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗಿತ್ತು. ತಮ್ಮನ್ನು ಟ್ರೋಲ್ ಮಾಡಿದವರಿಗೆ ಈಗ ಸಾರಾ ಅಲಿ ಖಾನ್​ ಅವರು ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲ ಧರ್ಮದ ಪೂಜಾ ಸ್ಥಳಗಳಿಗೆ ತಾವು ಇಷ್ಟೇ ಶ್ರದ್ಧೆ ಮತ್ತು ಭಕ್ತಿಯಿಂದ ಹೋಗುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Vicky Kaushal: ‘ಆ ವಿಚಾರ ಮಾತಾಡೋದ್ರಲ್ಲಿ ಅರ್ಥವೇ ಇಲ್ಲ’: ಸಲ್ಮಾನ್​ ಖಾನ್​ ಬಾಡಿ ಗಾರ್ಡ್​ ವರ್ತನೆ ಬಗ್ಗೆ ವಿಕ್ಕಿ ಕೌಶಲ್​ ಪ್ರತಿಕ್ರಿಯೆ

‘ನಾನು ನನ್ನ ಕೆಲಸವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಜನರಿಗಾಗಿ ಮತ್ತು ನಿಮಗಾಗಿ ಕೆಲಸ ಮಾಡುತ್ತೇನೆ. ನನ್ನ ಕೆಲಸ ನಿಮಗೆ ಇಷ್ಟವಾಗದಿದ್ದರೆ ನನಗೆ ಬೇಸರ ಆಗುತ್ತದೆ. ಆದರೆ ನನ್ನ ವೈಯಕ್ತಿಕ ನಂಬಿಕೆಗಳು ನನಗೆ ಸಂಬಂಧಿಸಿದ್ದು. ನಾನು ಅಜ್ಮೇರ್​ ಶರೀಫ್​ ದರ್ಗಾಗೆ ಹೋಗುವಷ್ಟೇ ಶ್ರದ್ಧೆಯಿಂದ ಬಂಗ್ಲಾ ಸಾಹಿಬ್​ ಗುರುದ್ವಾರಕ್ಕೆ ಹೋಗುತ್ತೇನೆ. ಅಷ್ಟೇ ಶ್ರದ್ಧೆಯಿಂದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಇದನ್ನು ನಾನು ಮುಂದುವರಿಸುತ್ತೇನೆ. ಜನರು ಏನು ಬೇಕಾದರೂ ಹೇಳಲಿ. ನನಗೆ ತೊಂದರೆ ಇಲ್ಲ. ನಿಮಗೆ ಆ ಕ್ಷೇತ್ರದ ಶಕ್ತಿ ಇಷ್ಟವಾಗಬೇಕು. ನಾನು ಆ ಶಕ್ತಿಯನ್ನು ನಂಬುತ್ತೇನೆ’ ಎಂದು ಸಾರಾ ಅಲಿ ಖಾನ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us