AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ನಟಿ ಸಾರಾ ಅರ್ಜುನ್ ಅವರಿಗೆ ಹೊಸ ಅವಕಾಶಗಳು ಸಿಗುತ್ತಿವೆ. ಬಾಲಿವುಡ್ ನಟ ಇಶಾನ್ ಖಟ್ಟರ್ ಜೊತೆ ಅವರು ಹೊಸ ಪ್ರಾಜೆಕ್ಟ್ ಮಾಡುತ್ತಿರುವುದು ಗೊತ್ತಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆದ ಬಳಿಕ ಅಸಲಿ ವಿಷಯ ಹೊರಬಿದ್ದಿದೆ.

‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ
Sara Arjun, Ishaan Khatter
ಮದನ್​ ಕುಮಾರ್​
|

Updated on: Mar 27, 2026 | 7:25 PM

Share

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಸ್ಟಾರ್ ನಾಯಕಿಯಾಗಿ ಬೆಳೆಯುತ್ತಿರುವ ಸಾರಾ ಅರ್ಜುನ್ (Sara Arjun) ಸದ್ಯ ತಮ್ಮ ವೃತ್ತಿಜೀವನದ ಸುವರ್ಣ ಕಾಲದಲ್ಲಿದ್ದಾರೆ. ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಯಶಸ್ಸು ಸಾರಾ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಅದರಲ್ಲೂ ಸದ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿ ಮಾಡುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರದ ಅಬ್ಬರದ ನಡುವೆಯೇ ಸಾರಾ ಅವರ ಹೊಸ ಸಿನಿಮಾ ಬಗ್ಗೆ ದೊಡ್ಡ ಸುದ್ದಿಯೊಂದು ಹರಿದಾಡುತ್ತಿದೆ.

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಾರಾ ಅರ್ಜುನ್ ಮತ್ತು ‘ಹೋಮ್‌ಬೌಂಡ್’ ಖ್ಯಾತಿಯ ನಟ ಇಶಾನ್ ಖಟ್ಟರ್ ಒಟ್ಟಿಗೆ ಇರುವ ವಿಡಿಯೋಗಳು ಮತ್ತು ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ಅವರ ‘ಟೈಗರ್ ಬೇಬಿ’ ಬ್ಯಾನರ್ ಅಡಿಯಲ್ಲಿ ಇವರಿಬ್ಬರು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಜೋಡಿಯ ಕೆಮಿಸ್ಟ್ರಿ ನೋಡಿ ಅಭಿಮಾನಿಗಳು ಕೂಡ ಹೊಸ ಸಿನಿಮಾ ಘೋಷಣೆಯಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದರು.

ಆದರೆ ಅಭಿಮಾನಿಗಳ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ಇದು ಸಿನಿಮಾ ಅಲ್ಲ ಎಂಬ ಸತ್ಯ ಗೊತ್ತಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಸುದ್ದಿಗೆ ಈಗ ಸ್ವತಃ ಸಾರಾ ಅರ್ಜುನ್ ಅವರೇ ಬ್ರೇಕ್ ಹಾಕಿದ್ದಾರೆ. ಇಶಾನ್ ಖಟ್ಟರ್ ಜೊತೆಗಿನ ಆ ಫೋಟೋಗಳು ಸಿನಿಮಾದ್ದಲ್ಲ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇದು ಯಾವುದೋ ಹೊಸ ಸಿನಿಮಾದ ಶೂಟಿಂಗ್ ಅಲ್ಲ, ಬದಲಿಗೆ ಇದೊಂದು ಜಾಹೀರಾತು ಚಿತ್ರೀಕರಣ!

ವೈರಲ್ ಆಗಿರುವ ವಿಡಿಯೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ಸಾರಾ ಅರ್ಜುನ್, ‘ಇದು ಗೂಗಲ್ ಎಐ ಸಲುವಾಗಿ ಮಾಡಲಾದ ಜಾಹೀರಾತು. ಈ ಅಭಿಯಾನದ ಬಗ್ಗೆ ಕುತೂಹಲ ಮೂಡಿಸಲು ಗೂಗಲ್ ಪ್ರಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿನ ಹೊಸ ತಂತ್ರಜ್ಞಾನಗಳನ್ನು ಉತ್ತೇಜಿಸಲು ಈ ವಿಶೇಷ ಪ್ರಚಾರವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

ಹೀಗಾಗಿ, ಸಾರಾ ಮತ್ತು ಇಶಾನ್ ಅವರನ್ನು ಬೆಳ್ಳಿತೆರೆಯ ಮೇಲೆ ಒಟ್ಟಿಗೆ ನೋಡಬಯಸಿದ್ದ ಅಭಿಮಾನಿಗಳಿಗೆ ಸದ್ಯಕ್ಕೆ ನಿರಾಸೆಯಾಗಿದ್ದರೂ, ಗೂಗಲ್‌ನ ಈ ಹೊಸ ಎಐ ಪ್ರಚಾರದಲ್ಲಿ ಅವರ ಅಭಿನಯ ಹೇಗಿರಲಿದೆ ಎಂಬ ಕುತೂಹಲ ಮಾತ್ರ ಹಾಗೆಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೀರಿಲ್ಲ ಎನ್ನುತ್ತಿದ್ದ ಪಾಕಿಸ್ತಾನದಲ್ಲೀಗ ಪ್ರವಾಹದ ಭೀತಿ!
ನೀರಿಲ್ಲ ಎನ್ನುತ್ತಿದ್ದ ಪಾಕಿಸ್ತಾನದಲ್ಲೀಗ ಪ್ರವಾಹದ ಭೀತಿ!
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?