AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಬಾಲಿವುಡ್ ಸ್ಟಾರ್ ನಟನ ಜೊತೆ ಡೇಟಿಂಗ್?

ಸಾರಾ ತೆಂಡೂಲ್ಕರ್ ಅವರ ಹೆಸರು ಬಾಲಿವುಡ್ ಸ್ಟಾರ್ ನಟನ ಜೊತೆ ತಳುಕು ಹಾಕಿಕೊಂಡಿದೆ. ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಸಾರಾ ಮೊದಲು ಕ್ರಿಕೆಟರ್ ಶುಭ್ಮನ್ ಗಿಲ್ ಜೊತೆ ಡೇಟಿಂಗ್ ಮಾಡುತ್ತಿದ್ದರು ಎಂಬ ವದಂತಿಗಳಿದ್ದವು. ಆದರೆ, ಈ ಬಗ್ಗೆ ಅವರು ಯಾವುದೇ ಮಾಹಿತಿ ರಿವೀಲ್ ಮಾಡಿರಲಿಲ್ಲ.

ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಬಾಲಿವುಡ್ ಸ್ಟಾರ್ ನಟನ ಜೊತೆ ಡೇಟಿಂಗ್?
ಸಾರಾ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
|

Updated on:May 05, 2025 | 7:31 AM

Share

ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಮಗಳು ಸಾರಾ ತೆಂಡೂಲ್ಕರ್ (Sara Tendulkar)  ಅವರು ಆಗಾಗ ಚರ್ಚೆಯ ಕೇಂದ್ರ ಬಿಂದು ಆಗುತ್ತಾರೆ. ಸಾರ್ವಜನಿಕವಾಗಿ ಅವರು ಕಾಣಿಸಿಕೊಳ್ಳೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ ಸಾರಾ ಡೇಟಿಂಗ್ ವಿಚಾರ ಸಾಕಷ್ಟು ಚರ್ಚೆ ಆಗುತ್ತದೆ. ಸಾರಾ ತೆಂಡೂಲ್ಕರ್ ಅವರು ಈ ಮೊದಲು ಕ್ರಿಕೆಟರ್ ಶುಭ್​ಮನ್ ಗಿಲ್ ಜೊತೆ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಈಗ ಅವರ ಹೆಸರು ಸ್ಟಾರ್ ಹೀರೋ ಜೊತೆ ತಳುಕು ಹಾಕಿಕೊಂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ ಯಾರು ಆ ಸ್ಟಾರ್ ನಟ? ಸಿದ್ದಾಂತ್ ಚತುರ್ವೇದಿ.

ಸಿದ್ದಾಂತ್ ವೃತ್ತಿ ಜೀವನ ಈಗಷ್ಟೇ ವೇಗ ಪಡೆದುಕೊಳ್ಳುತ್ತಿದೆ. 2019ರ ‘ಗಲ್ಲಿ ಬಾಯ್’ ಚಿತ್ರದ ಮೂಲಕ ಸಿದ್ದಾಂತ್ ಜನಪ್ರಿಯತೆ ಪಡೆದರು. ಅದಕ್ಕೂ ಮೊದಲು ‘ಇನ್​ಸೈಡ್ ಎಡ್ಜ್’ ಹೆಸರಿನ ವೆಬ್ ಸೀರಿಸ್​ನಲ್ಲಿ ಅವರು ನಟಿಸಿದ್ದರು. 2022ರಲ್ಲಿ ಅವರು ನಟಿಸಿದ ‘ಗೆಹರಾಯಿಯಾ’ ಸಿನಿಮಾ ರಿಲೀಸ್ ಆಗಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಈಗ ‘ಧಡಕ್ 2’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಈ ನಟನ ಜೊತೆ ಸಾರಾ ಡೇಟಿಂಗ್ ಶುರು ಹಚ್ಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಾರಾ ಹಾಗೂ ಸಿದ್ದಾಂತ್ ಕೆಲವು ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇವರ ಮಧ್ಯೆ ಪ್ರೀತಿ ಮೂಡಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ, ಅದು ಎಷ್ಟು ಆಳಕ್ಕೆ ಹೋಗಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಈ ವಿಚಾರದಲ್ಲಿ ಸಾರಾ ಆಗಲಿ, ಸಿದ್ದಾಂತ್ ಆಗಲಿ ಬಾಯ್ಬಿಟ್ಟಿಲ್ಲ. ಈ ವಿಚಾರದಲ್ಲಿ ಅವರು ಮೌನ ತಾಳಿದ್ದಾರೆ.

ಇದನ್ನೂ ಓದಿ
Image
‘ಲವ್ ಎಟ್ ಫಸ್ಟ್​ ಸೈಟ್’: ಕರ್ಣನ ನೋಡಿ ನಿಧಿಗೆ ಲವ್; ಹೇಗಿದೆ ನೋಡಿ ಹೊಸ ಪ್ರ
Image
ಬುಡಕಟ್ಟು ಜನಾಂಗದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ವಿಜಯ್
Image
‘ಕೆಜಿಎಫ್ 2’ ರಿಲೀಸ್ ಆಗಿ 3 ವರ್ಷವಾದರೂ ನಿಂತಿಲ್ಲ ಟಾಕ್
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?

ಇದನ್ನೂ ಓದಿ: ನಾನು 3 ವರ್ಷಗಳಿಂದ..; ಸಾರಾ ಜೊತೆಗಿನ ಬ್ರೇಕ್ ಅಪ್ ವದಂತಿಯ ನಡುವೆ ಮೌನ ಮುರಿದ ಶುಭ್​ಮನ್ ಗಿಲ್

ಸಾರಾ ಅವರು ಈ ಮೊದಲು ಶುಭ್​ಮನ್​ ಗಿಲ್ ಜೊತೆ ಡೇಟಿಂಗ್ ಮಾಡಿದ್ದ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಕೆಲವೇ ತಿಂಗಳ ಹಿಂದೆ ಇವರ ಬ್ರೇಕಪ್ ಸುದ್ದಿ ಹೊರ ಬಿದ್ದಿತ್ತು. ಹೀಗಿರುವಾಗಲೇ ಸಾರಾ ಹೆಸರು ನಟನ ಜೊತೆ ತಳುಕು ಹಾಕಿಕೊಂಡಿದೆ. ಇನ್ನು ಸಿದ್ಧಾಂತ್ ಹೆಸರು ಕೂಡ ಚರ್ಚೆಯಲ್ಲಿ ಇತ್ತು. ಅಮಿತಾಭ್ ಬಚ್ಚನ್ ಮೊಮ್ಮಗಳು ನಂದಾ ನವೇಲಿ ಜೊತೆ ಅವರು ಸುತ್ತಾಟ ನಡೆಸುತ್ತಿದ್ದರು ಎನ್ನುವ ಗಾಸಿಪ್ ಬಾಲಿವುಡ್ ಅಂಗಳದಲ್ಲಿ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Mon, 5 May 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ