ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​

ಅಮಿತ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀಮಾ ಹೈದರ್ ಹಾಗೂ ಸಚಿನ್ ಅವರ ಆರ್ಥಿಕ ಪರಿಸ್ಥಿತಿ ನೋಡಿ ನಾನು ಈ ಸಹಾಯ ಮಾಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.  

ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​
ಸೀಮಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Aug 03, 2023 | 9:25 AM

ಪಾಕಿಸ್ತಾನ ಮಹಿಳೆ ಸೀಮಾ ಹೈದರ್ (Seema Haider) ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದರು. ಉತ್ತರ ಪ್ರದೇಶದ ವ್ಯಕ್ತಿ ಸಚಿನ್ ಮೀನಾ ಅವರನ್ನು ಹುಡುಕಿ ತಾವು ಬಂದಿರುವುದಾಗಿ ಅವರು ಹೇಳಿಕೊಂಡಿದ್ದರು. ಸದ್ಯ ಈ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೀಮಾ ಸ್ಪೈ ಮಾಡುತ್ತಿರಬಹುದು ಎಂಬ ಅನುಮಾನ ಇದೆ. ಹೀಗಿರುವಾಗಲೇ ಬಾಲಿವುಡ್ ನಿರ್ಮಾಪಕರೊಬ್ಬರು ಅವರಿಗೆ ಸಿನಿಮಾ ಆಫರ್ ನೀಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ತಾಯ್ನಾಡು ಪಾಕಿಸ್ತಾನವನ್ನು ತೊರೆದು ಭಾರತಕ್ಕೆ ಬಂದ ಸೀಮಾ ಅವರು ಸಚಿನ್ ಮತ್ತು 4 ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಅವರಿಗೆ ಜೀವನ ಅಷ್ಟು ಸುಲಭವಿಲ್ಲ. ಈ ಕಾರಣಕ್ಕೆ ಮೀರಠ್ ಮೂಲದ ಅಮಿತ್ ಜಾನಿ ಅವರು ಸೀಮಾಗೆ ಸಿನಿಮಾ ಆಫರ್ ನೀಡಿದ್ದಾರೆ. ಚಿತ್ರದಲ್ಲಿ ನಟಿಸಲು ಅವರಿಗೆ ಆಫರ್ ನೀಡಿರುವ ವಿಚಾರ ಚರ್ಚೆ ಆಗುತ್ತಿದೆ. ಅಮಿತ್ ಅವರ ನಿರ್ಧಾರ ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಅಮಿತ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀಮಾ ಹೈದರ್ ಹಾಗೂ ಸಚಿನ್ ಅವರ ಆರ್ಥಿಕ ಪರಿಸ್ಥಿತಿ ನೋಡಿ ನಾನು ಈ ಸಹಾಯ ಮಾಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಸೀಮಾ ಹಾಗೂ ಸಚಿನ್ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಭಾರತದ ಸುರಕ್ಷತಾ ದೃಷ್ಟಿಯಿಂದ ದೊಡ್ಡ ಮಟ್ಟದ ತನಿಖೆ ಆಗುತ್ತಿದೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸೀಮಾ ಹಾಗೂ ಸಚಿನ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದರು. ತಮಗೆ ಯಾವುದೇ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದರು.

‘ಸೀಮಾ ಹೈದರ್ ಅವರ ಆರ್ಥಿಕ ಪರಿಸ್ಥಿತಿ ನೋಡಿ ನನಗೆ ಬೇಸರವಾಗಿದೆ. ಈ ಕಾರಣಕ್ಕೆ ಅವರಿಗೆ ಸಹಕಾರಿ ಆಗಲಿ ಎಂಬ ಕಾರಣಕ್ಕೆ ನಾನು ಸಿನಿಮಾ ಆಫರ್ ನೀಡುತ್ತಿದ್ದೇನೆ. ಉದಯಪುರದ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಸಾಹು ಹತ್ಯೆಯ ಕುರಿತು ಸಿನಿಮಾ ಮಾಡುತ್ತಿದ್ದೇನೆ. ಈ ಚಿತ್ರದಲ್ಲಿ ಸೀಮಾ ಕೂಡ ನಟಿಸುತ್ತಿದ್ದಾರೆ’ ಎಂದಿದ್ದಾರೆ ಅಮಿತ್. ಈ ಚಿತ್ರವನ್ನು ನವೆಂಬರ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸೀಮಾ ಈ ಆಫರ್ ಒಪ್ಪುತ್ತಾರಾ? ಒಪ್ಪಿದರೆ ಅವರಿಗೆ ನಟಿಸಲು ಪೊಲೀಸರು ಒಪ್ಪಿಗೆ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವಿವಾದಾತ್ಮಕ ವಿಚಾರಗಳ ಮೇಲೆ ಸಿನಿಮಾ ಮಾಡುವವರ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿದೆ. ಒಂದಷ್ಟು ವಿವಾದ ಸೃಷ್ಟಿ ಆದರೆ ಸಿನಿಮಾ ಹೈಪ್ ಪಡೆದುಕೊಳ್ಳಲಿದೆ ಎಂಬುದು ಅನೇಕರ ನಂಬಿಕೆ. ಈ ಕಾರಣದಿಂದಲೇ ಸೀಮಾ ಅವರಿಗೆ ಸಿನಿಮಾ ಆಫರ್ ನೀಡಲಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸೀಮಾ ಹೈದರ್ ಹಿಂತಿರುಗದಿದ್ದರೆ ಭಾರತದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಕರೆ; ಸುದ್ದಿಯಲ್ಲಿರುವ ಈ ಮಹಿಳೆ ಯಾರು?

ಸೀಮಾ ಹೈದರ್ ಅವರು ಪಾಕಿಸ್ತಾನದಿಂದ ನೇಪಾಳಕ್ಕೆ ತೆರಳಿ, ಅಲ್ಲಿಂದ ಭಾರತಕ್ಕೆ ಬಂದಿದ್ದಾರೆ. ಇದಕ್ಕಾಗಿ ಅವರು ನಕಲಿ ದಾಖಲೆ ಕೂಡ ಸೃಷ್ಟಿಸಿಕೊಂಡಿದ್ದಾರೆ. ನೇಪಾಳದ ಕಠ್ಮಂಡುವಿನ ಪಶುಪತಿನಾಥ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಸಚಿನ್​ ಅವರನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾಗಿರುವುದಾಗಿ ಸೀಮಾ ಹೇಳಿಕೊಂಡಿದ್ದರು. ಇತ್ತೀಚೆಗೆ ಅವರು ಭಾರತೀಯ ಪೌರತ್ವ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿ ಕೋರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:08 am, Thu, 3 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ