Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ

ಖ್ಯಾತ ನಟಿ ಶಬಾನಾ ಆಜ್ಮಿ ಅವರಿಗೆ ಬೆಂಗಳೂರು ಫಿಲ್ಮ್ ಫೆಸ್ಟಿವಲ್ ಅಂಗವಾಗಿ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ವೇಳೆ ಶಬಾನಾ ಆಜ್ಮಿ ಅವರ ಸಾಧನೆಯ ಬಗ್ಗೆ ಸಿಎಂ ಮಾತನಾಡಿದರು. ಶಬಾನಾ ಆಜ್ಮಿ ಅವರಿಗೆ ಈಗಾಗಲೇ ಅನೇಕ ಪ್ರಶಸ್ತಿಗಳು ಸಂದಿವೆ.

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ
Shabana Azmi, Siddaramaiah
Follow us
ಮದನ್​ ಕುಮಾರ್​
|

Updated on: Mar 10, 2025 | 2:58 PM

ಬೆಂಗಳೂರಿನಲ್ಲಿ‌ ಇತ್ತೀಚೆಗೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಈ ಫಿಲ್ಮ್​ ಫೆಸ್ಟಿವಲ್ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ಈ ಬಾರಿ ಭಾರತೀಯ ಚಿತ್ರರಂಗದ ಮೇರು ನಟಿ, ಪ್ರತಿಭಾವಂತ ಕಲಾವಿದೆ ಶಬಾನಾ ಆಜ್ಮಿ (Shabana Azmi) ಅವರಿಗೆ ಸಂದಿದೆ. ಆ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್​ 10) ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಜೊತೆಗೆ 10 ಲಕ್ಷ ರೂಪಾಯಿ ಮೊತ್ತದ ಚೆಕ್ ನೀಡಲಾಯಿತು. ಈ ವೇಳೆ ಶಬಾನಾ ಆಜ್ಮಿ ಅವರ ಪತಿ, ಗೀತರಚನಾಕಾರ ಜಾವೇದ್ ಅಖ್ತರ್ ಕೂಡ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು ‘ಮಿಲೇಸುರ್ ಮೇರಾ ತುಮಾರಾ ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ’ ಎಂದು ಶಬಾನಾ ಆಜ್ಮಿ ಅವರನ್ನು ಸ್ಮರಿಸಿದರು. ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಭೀಮ್ ಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಕುಮಾರ ಗಂಧರ್ವ ಇವರೆಲ್ಲ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ’ ಎಂದು ಹೇಳಿದರು. ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, ಜಿಎಸ್​ಟಿಯಲ್ಲೂ ಅನುಕೂಲ ಆಗುವ ರೀತಿಯಲ್ಲಿ ಜಿಎಸ್​ಟಿ ಕೌನ್ಸಿಲ್​ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ ದಂಪತಿ

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಹಾಗೂ ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಕೂಡ ಉಪಸ್ಥಿತರಿದ್ದರು.

1975ರಿಂದಲೂ ಶಬಾನಾ ಆಜ್ಮಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಬಾರಿ ರಾಷ್ಟ್ರ ಪ್ರಶಸ್ತಿ, ಫಿಲ್ಮ್ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ. ಪದ್ಮಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿಗಳು ಕೂಡ ಅವರಿಗೆ ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.