AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ದೆಹಲಿಯ ಪಂಚಶೀಲ್ ಪಾರ್ಕ್‌ನಲ್ಲಿರುವ ತಮ್ಮ ಹಳೆಯ ಕುಟುಂಬದ ಮನೆಯ ಇನ್ನೂ ಎರಡು ಮಹಡಿಗಳನ್ನು ಬರೋಬ್ಬರಿ ₹37 ಕೋಟಿ ನೀಡಿ ಖರೀದಿಸಿದ್ದಾರೆ. ಈ ಮೂಲಕ 10,800 ಚದರ ಅಡಿಯ ಈ ಐತಿಹಾಸಿಕ ಮನೆಯ ಸಂಪೂರ್ಣ ಮಾಲೀಕತ್ವ ಈಗ ಕಿಂಗ್ ಖಾನ್ ವಶವಾಗಿದೆ. ಸಿನಿಮಾ ರಂಗಕ್ಕೆ ಬರುವ ಮುನ್ನ ವಾಸಿಸುತ್ತಿದ್ದ ಈ ಮನೆಯೊಂದಿಗೆ ಶಾರುಖ್‌ಗೆ ಭಾವನಾತ್ಮಕ ಸಂಬಂಧವಿದೆ.

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 10, 2026 | 7:33 AM

Share

ಮುಖ್ಯಾಂಶಗಳು

  • ದೆಹಲಿಯಲ್ಲಿ ಆಸ್ತಿ ಖರೀದಿ ಮಾಡಿದ ಶಾರುಖ್ ಖಾನ್
  • ಪಂಚಶೀಲ್ ಪಾರ್ಕ್‌ನಲ್ಲಿ 37 ಕೋಟಿ ವ್ಯವಹಾರ
  • ಹಳೆಯ ಮನೆ ಜೊತೆ ಕಿಂಗ್ ಖಾನ್​ಗೆ ಭಾವನಾತ್ಮಕ ಸಂಬಂಧ

ಬಾಲಿವುಡ್‌ ನಟ ಶಾರುಖ್ ಖಾನ್ ತಮ್ಮ ಸಿನಿಮಾಗಳ ಜೊತೆಗೆ ಐಷಾರಾಮಿ ಜೀವನದ ಕಾರಣದಿಂದಲೂ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಶಾರುಖ್, ಈಗ ದೆಹಲಿಯಲ್ಲಿ ಹೊಸದೊಂದು ದುಬಾರಿ ಆಸ್ತಿಯನ್ನು ಖರೀದಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.

ದೆಹಲಿಯ ಪ್ರೀಮಿಯಂ ಪ್ರದೇಶವಾದ ಪಂಚಶೀಲ್ ಪಾರ್ಕ್‌ನಲ್ಲಿ ಶಾರುಖ್ ಖಾನ್ ಅವರ ಹಳೆಯ ಕುಟುಂಬದ ಮನೆ ಇತ್ತು. ಈ ಹಿಂದೆ ಅವರು ಈ ಕಟ್ಟಡದ ಬೇಸ್‌ಮೆಂಟ್ ಮತ್ತು ಗ್ರೌಂಡ್ ಫ್ಲೋರ್ (ನೆಲ ಮಹಡಿ) ಮಾತ್ರ ಹೊಂದಿದ್ದರು. ಈಗ ಇದೇ ಕಟ್ಟಡದ ಎರಡು ಮತ್ತು ಮೂರನೇ ಮಹಡಿಗಳನ್ನು ಸಹ ಶಾರುಖ್ ಖರೀದಿಸಿದ್ದು, ಇದಕ್ಕಾಗಿ ಬರೋಬ್ಬರಿ 37 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಈ ಮೂಲಕ ತಮ್ಮ ಹಳೆಯ ನೆನಪಿನ ಮನೆಯ ಸಂಪೂರ್ಣ ಮಾಲೀಕತ್ವವನ್ನು ಅವರು ಪಡೆದುಕೊಂಡಿದ್ದಾರೆ.

ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ, ದಕ್ಷಿಣ ದೆಹಲಿಯಲ್ಲಿರುವ ಈ ಆಸ್ತಿಯು ಸುಮಾರು 10,800 ಚದರ ಅಡಿ ವಿಸ್ತೀರ್ಣ ಹೊಂದಿದೆ. ಇಲ್ಲಿ ಪ್ರತಿ ಚದರ ಅಡಿಗೆ ಸುಮಾರು 34,260 ರೂಪಾಯಿ ಬೆಲೆ ಬಾಳುತ್ತದೆ. ಶಾರುಖ್ ಖಾನ್ ಸಿನಿಮಾ ರಂಗಕ್ಕೆ ಬರುವ ಮುನ್ನ ಇದೇ ಮನೆಯಲ್ಲಿ ವಾಸಿಸುತ್ತಿದ್ದರು. ಹೀಗಾಗಿ ಈ ಮನೆಯೊಂದಿಗೆ ಅವರಿಗೆ ಭಾವನಾತ್ಮಕ ಸಂಬಂಧವಿದೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿಯಲ್ಲಿ ಸೆಲೆಬ್ರಿಟಿಯೊಬ್ಬರು ಮಾಡಿದ ಅತಿ ದೊಡ್ಡ ಆಸ್ತಿ ವ್ಯವಹಾರ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ

ಕಿಂಗ್ ಖಾನ್ ಕಳೆದ ಕೆಲವು ವರ್ಷಗಳಿಂದ ಆಸ್ತಿ ಹೂಡಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈನಲ್ಲಿರುವ ಅವರ ಪ್ರಸಿದ್ಧ ಬಂಗಲೆ ‘ಮನ್ನತ್’ ಸದ್ಯ ನವೀಕರಣಗೊಳ್ಳುತ್ತಿದ್ದು, ಅಲ್ಲಿ ಇನ್ನೂ ಕೆಲವು ಮಹಡಿಗಳನ್ನು ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಅಲಿಬಾಗ್‌ನಲ್ಲಿ ದೊಡ್ಡ ಫಾರ್ಮ್‌ಹೌಸ್ ಹೊಂದಿರುವ ಶಾರುಖ್ ಅವರಿಗೆ ದುಬೈನಿಂದ ಲಂಡನ್‌ವರೆಗೆ ವಿಶ್ವದ ಹಲವು ಪ್ರಮುಖ ನಗರಗಳಲ್ಲಿ ಕೋಟ್ಯಂತರ ಮೌಲ್ಯದ ಸ್ವಂತ ಮನೆಗಳಿವೆ. ಸದ್ಯ ಶಾರುಖ್ ಖಾನ್ ಅವರು ‘ಕಿಂಗ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ