ಶಾರುಖ್ ಖಾನ್, ಅಜಯ್, ಅಕ್ಷಯ್​ ಕುಮಾರ್​ಗೆ ನೊಟೀಸ್

Bollywood Stars: ಬಾಲಿವುಡ್ ಸ್ಟಾರ್​ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರುಗಳಿಗೆ ಅಲಹಾಬಾದ್ ಹೈಕೋರ್ಟ್ ನೊಟೀಸ್ ನೀಡಿದೆ.

ಶಾರುಖ್ ಖಾನ್, ಅಜಯ್, ಅಕ್ಷಯ್​ ಕುಮಾರ್​ಗೆ ನೊಟೀಸ್
ಎಸ್​ಆರ್​ಕೆ-ಅಜಯ್
Follow us
ಮಂಜುನಾಥ ಸಿ.
|

Updated on: Dec 10, 2023 | 6:50 PM

ಬಾಲಿವುಡ್ (Bollywood) ಸ್ಟಾರ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ ಹಾಗೂ ಅಕ್ಷಯ್ ಕುಮಾರ್ ಅವರುಗಳಿಗೆ ಅಲಹಾಬಾದ್ ಹೈಕೋರ್ಟ್ ನೊಟೀಸ್ ನೀಡಿದೆ. ಈ ಮೂವರು ಸ್ಟಾರ್ ನಟರು ತಂಬಾಕು ಜಾಹೀರಾತಿನಲ್ಲಿ ನಟಿಸಿರುವ ಕಾರಣ ನ್ಯಾಯಾಲಯವು ನೊಟೀಸ್ ನೀಡಿದ್ದು, ಹಾಜರಾಗುವಂತೆ ಸೂಚಿಸಿದೆ. ಮೋತಿಲಾಲ್ ಯಾದವ್ ಎಂಬುವರು ಈ ನಟರ ವಿರುದ್ಧ ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್​ ಕುಮಾರ್​ ಅವರಿಗೆ ನೊಟೀಸ್ ನೀಡಲಾಗಿದೆ.

‘ಪದ್ಮ ಪ್ರಶಸ್ತಿಯಂಥಹಾ ಗೌರವಾನ್ವಿತ ಪ್ರಶಸ್ತಿ ಪಡೆದಿರುವ ವ್ಯಕ್ತಿಗಳು ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಹಾಗೂ ಅವರಿಗೆ ನೀಡಲಾಗಿರುವ ಪದ್ಮ ಪ್ರಶಸ್ತಿಗೂ ಅಗೌರವ ತಂದಿದ್ದಾರೆ. ಅವರು ನಟಿಸಿರುವ ಜಾಹೀರಾತಿನ ಪ್ರಸಾರಕ್ಕೆ ತಡೆ ನೀಡಬೇಕು. ಗೌರವಾನ್ವಿತ ಪ್ರಶಸ್ತಿಗೆ ಭಾಜನವಾಗಿಯೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಾಹೀರಾತಿನಲ್ಲಿ ನಟಿಸಿರುವ ನಟರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದುರು.

ಇದನ್ನೂ ಓದಿ:‘ಡಂಕಿ’ ಕ್ರೇಜ್: ಶಾರುಖ್ ಖಾನ್ ಸಿನಿಮಾ ನೋಡಲು ವಿದೇಶದಿಂದ ಬರುತ್ತಿದ್ದಾರೆ ಅಭಿಮಾನಿಗಳು

ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕರೇಟರಿಗೆ ಹಾಗೂ ಇನ್ನೂ ಕೆಲವರಿಗೆ ಸೇರಿದಂತೆ ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಅವರಿಗೆ ನೊಟೀಸ್ ನೀಡಲಾಗಿದೆ. ಈ ಹಿಂದೆ ಅಮಿತಾಬ್ ಬಚ್ಚನ್ ಸಹ ತಂಬಾಕು ಸಂಸ್ಥೆಗೆ ನೊಟೀಸ್ ನೀಡಿದ್ದರು, ಒಪ್ಪಂದದ ಅವಧಿ ಮುಗಿದಿದ್ದರೂ ತಾವು ನಟಿಸಿರುವ ಜಾಹೀರಾತು ಪ್ರಸಾರ ಮಾಡುತ್ತಿರುವ ಬಗ್ಗೆ ದೂರು ನೀಡಿದ್ದರು. ಅಕ್ಷಯ್ ಕುಮಾರ್ ಸಹ, ತಾವು ತಂಬಾಕು ಜಾಹೀರಾತಿನಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದರು.

ವಿಮಲ್ ನ ತಂಬಾಕು ಜಾಹೀರಾತಿನಲ್ಲಿ ಬಾಲಿವುಡ್​ನ ಹಲವು ದೊಡ್ಡ ನಟರು ನಟಿಸಿದ್ದಾರೆ. ಅಮಿತಾಬ್ ಬಚ್ಚನ್, ರಣ್ವೀರ್ ಸಿಂಗ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಇನ್ನೂ ಕೆಲವು ದೊಡ್ಡ ನಟರು ತಂಬಾಕು ಜಾಹೀರಾತಿನಲ್ಲಿ ನಟಿಸಿದ್ದಾರೆ. ಬಾಲಿವುಡ್ ನಟರುಗಳು ತಂಬಾಕು ಜಾಹೀರಾತಿನಲ್ಲಿ ನಟಿಸುತ್ತಿರುವುದಕ್ಕೆ ನೆಟ್ಟಿಗರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ವಿರೋಧ ವ್ಯಕ್ತವಾದ ಬಳಿಕ ನಟ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಅವರುಗಳು ತಾವು ತಂಬಾಕು ಜಾಹೀರಾತಿನಲ್ಲಿ ನಟಿಸುವುದಿಲ್ಲವೆಂಬ ನಿರ್ಣಯ ತೆಗೆದುಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ