AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಹೊಸ ಸಿನಿಮಾ ಟೈಟಲ್ ಲೀಕ್; ಸಲ್ಲು ‘ಟೈಗರ್’, ಕಿಂಗ್ ಖಾನ್ ‘ಲಯನ್’!

Nayantara: ಆಟ್ಲೀ ಹಾಗೂ ಶಾರುಖ್ ಖಾನ್ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಟೈಟಲ್ ಲೀಕ್ ಆಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Shah Rukh Khan: ಶಾರುಖ್ ಹೊಸ ಸಿನಿಮಾ ಟೈಟಲ್ ಲೀಕ್; ಸಲ್ಲು ‘ಟೈಗರ್’, ಕಿಂಗ್ ಖಾನ್ ‘ಲಯನ್’!
ಶಾರುಖ್ ಖಾನ್, ನಯನತಾರಾ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Sep 23, 2021 | 3:39 PM

Share

ಪ್ರಸ್ತುತ ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಕಾಲಿವುಡ್​ನ ಹಿಟ್ ನಿರ್ದೇಶಕ ಆಟ್ಲೀ ಕುಮಾರ್ ಅವರೊಂದಿಗೆ ಹೊಸ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಲೇಡಿ ಸೂಪರ್​ಸ್ಟಾರ್ ನಯನತಾರಾ ನಾಯಕಿ. ಈ ಚಿತ್ರ ಸದ್ಯ ಪುಣೆಯಲ್ಲಿ ಚಿತ್ರೀಕರಣವಾಗುತ್ತಿದ್ದು, ನಂತರ ಮುಂಬೈನಲ್ಲಿ ಶೂಟಿಂಗ್ ನಡೆಯಲಿದೆ ಎಂಬ ಮಾಹಿತಿಗಳಿವೆ. ಇದರಲ್ಲಿ ಸನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮೊದಲಾದ ತಾರೆಯರು ನಟಿಸುತ್ತಿದ್ದಾರೆ ಎಂಬ ಸುದ್ದಿಯೂ ಇದೆ. ಆದರೆ ಈ ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡ ಬಿಡುಗಡೆ ಮಾಡಿರಲಿಲ್ಲ. ಆದರೆ ಬಾಲಿವುಡ್ ಅಂಗಳದಿಂದ ಈಗ ಬರುತ್ತಿರುವ ಸುದ್ದಿಯ ಪ್ರಕಾರ ಚಿತ್ರದ ಶೀರ್ಷಿಕೆ ಲೀಕ್ ಆಗಿದೆ.

ಈಗಾಗಲೇ ಬಾಲಿವುಡ್​ನಲ್ಲಿ ‘ಟೈಗರ್’ ಚಿತ್ರದ ಶೀರ್ಷಿಕೆಯ ಮುಖಾಂತರ ಸಲ್ಮಾನ್ ಖಾನ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅದೇ ಮಾದರಿಯಲ್ಲಿಯೇ ಶಾರುಖ್ ಚಿತ್ರದ ನೂತನ ಚಿತ್ರದ ಶೀರ್ಷಿಕೆಯೂ ಇರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಬಾಲಿವುಡ್ ಅಂಗಳದಿಂದ ಬಂದಿರುವ ಮಾಹಿತಿಯ ಪ್ರಕಾರ, ಶಾರುಖ್ ಹಾಗೂ ಆಟ್ಲೀ ನಿರ್ದೇಶನದ ಚಿತ್ರದ ಶೀರ್ಷಿಕೆ ‘ಲಯನ್’. ಟ್ವಿಟರ್​ನಲ್ಲಿ ಬಾಲ ವಿಜಯಬಾಲನ್ ಎಂಬುವವರು ಈ ಮಾಹಿತಿಯನ್ನು ಹಂಚಿಕೊಂಡಿದ್ಧಾರೆ. ಪ್ರಸ್ತುತ ಎಲ್ಲೆಡೆ ಈ ಶೀರ್ಷಿಕೆ ಬಹುತೇಕ ಅಧಿಕೃತ ಎಂಬ ಮಾಹಿತಿ ಹರಿದಾಡುತ್ತಿದೆ.

ದಕ್ಷಿಣ ನಟಿ ನಯನತಾರಾ ಈ ಚಿತ್ರದ ಮೂಲಕ ಬಾಲಿವುಡ್‌ ಕಡೆ ಹೊರಟಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಮಣಿ, ಸನ್ಯಾ ಮಲ್ಹೋತ್ರಾ ಮತ್ತು ಸುನೀಲ್ ಗ್ರೋವರ್ ಮುಖ್ಯ ಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬ ಮಾಹಿತಿಯಿದ್ದು, ರಾಣಾ ದಗ್ಗುಬಾಟಿ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯಿದೆ. ನಿರ್ದೇಶಕ ಆಟ್ಲಿಯು ವಿಜಯ್ ಜೊತೆ ‘ತೆರಿ’, ‘ಮೆರ್ಸಲ್’ ಮತ್ತು ‘ಬಿಗಿಲ್’ನಂತಹ ಸೂಪರ್​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಚಿತ್ರವು ಶಾರುಖ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್’ ನಿರ್ಮಾಣ ಮಾಡುತ್ತಿದೆ ಎಂದು ಹೇಳಲಾಗಿದ್ದು, ಶಾರೂಖ್ ತಂದೆ ಮತ್ತು ಮಗನ- ದ್ವಿಪಾತ್ರದಲ್ಲಿ ನಟಿಸಲಿದ್ದಾರೆ.

ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತ: ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಈ ಹಿಂದೆ ರೆಹಮಾನ್ ಶಾರುಖ್ ನಟನೆಯ ‘ದಿಲ್ ಸೇ’, ‘ಸ್ವದೇಶ್’, ‘ಜಬ್ ತಕ್ ಹೈ ಜಾನ್’ ಮೊದಲಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಒಟ್ಟಿನಲ್ಲಿ ರೆಹಮಾನ್ ಶಾರುಖ್ ಅವರ ಚಿತ್ರಕ್ಕೆ 5ನೇ ಬಾರಿಗೆ ಸಂಗೀತ ನೀಡಲಿದ್ದಾರೆ. ಈ ಚಿತ್ರದ ಹೊರತಾಗಿ, ಶಾರುಖ್ ಖಾನ್ ದೀಪಿಕಾ ಪಡುಕೋಣೆ ಜೊತೆ ಮತ್ತೊಂದು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ ಕುಮಾರ್ ಹಿರಾನಿ ಜೊತೆ ಕೂಡ ಶಾರುಖ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಶಾರುಖ್ ಖಾನ್ 2018 ರಲ್ಲಿ ಕೊನೆಯ ಬಾರಿಗೆ ‘ಜೀರೋ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ:

ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?

(Shah Rukh Khan and Atlee new movie title is leaked according to source title is Lion)

Published On - 6:33 pm, Thu, 16 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್