DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ

ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ.

DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ
ಕಾಜೋಲ್​-ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: Feb 10, 2023 | 7:16 AM

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಯಶಸ್ಸಿನ ಕಿರೀಟ ತೊಟ್ಟಿದೆ. ಈ ಚಿತ್ರದಿಂದ ಶಾರುಖ್ ಖಾನ್​ಗೆ ಇದ್ದ ಸ್ಟಾರ್​ಡಂ ಹಿರಿದಾಗಿದೆ. ಶಾರುಖ್ ಖಾನ್ ಅಭಿಮಾನಿ ಬಳಗ ದೊಡ್ಡದಾಗಿದೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೆಂಗೆ’ (DDLJ) ಸಿನಿಮಾ ಇಂದು (ಫೆಬ್ರವರಿ 10) ರೀ-ರಿಲೀಸ್ ಆಗಿದೆ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಬಂದ ಈ ಸಿನಿಮಾ ಭಾರತದ ಇತಿಹಾಸದಲ್ಲೇ ಅತಿ ದೀರ್ಘಕಾಲ ಪ್ರದರ್ಶನ ಕಂಡ ಸಿನಿಮಾ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಈ ಸಿನಿಮಾ ಈಗ ಪ್ರೇಮಿಗಳ ದಿನದ ಪ್ರಯುಕ್ತ ರೀ-ರಿಲೀಸ್ ಆಗಿದೆ.

28 ವರ್ಷ ಪ್ರದರ್ಶನ

‘ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ. ನಿತ್ಯ ಒಂದು ಶೋ ಈ ಚಿತ್ರಕ್ಕಾಗಿ ಕಾಯ್ದಿರಿಸಲಾಗುತ್ತದೆ. ಈಗ ಈ ಚಿತ್ರವನ್ನು ಭಾರತದ ಪ್ರಮುಖ ನಗರಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ.

ರೀ-ರಿಲೀಸ್ ಏಕೆ?

‘ಡಿಡಿಎಲ್​ಜೆ’ ಸಿನಿಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಚಿತ್ರವನ್ನು ಮರಳಿ ಮರಳಿ ವೀಕ್ಷಿಸುವವರ ಸಂಖ್ಯೆ ದೊಡ್ಡದಿದೆ. ‘ಡಿಡಿಎಲ್​ಜೆ’ನ ಥಿಯೇಟರ್​ನಲ್ಲಿ ಮತ್ತೆ ಬಿಡುಗಡೆ ಮಾಡಿ ಎನ್ನುವ ಒತ್ತಾಯ ಅಭಿಮಾನಿಗಳ ಕಡೆಯಿಂದ ಕೇಳಿ ಬಂದಿತ್ತು. ಹೀಗಾಗಿ ಆದಿತ್ಯ ಚೋಪ್ರಾ ಅವರು ಈ ಚಿತ್ರವನ್ನು ರೀ-ರಿಲೀಸ್ ಮಾಡಿದ್ದಾರೆ. ಇದು ರೊಮ್ಯಾಂಟಿಕ್ ಸಿನಿಮಾ ಆಗಿರುವುದರಿಂದ ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಷರತ್ತುಗಳು ಏನು?

ಈ ಚಿತ್ರ ರೀ-ರಿಲೀಸ್ ಆಗುತ್ತಿದೆ ಎಂದ ಮಾತ್ರಕ್ಕೆ ತಿಂಗಳಾನುಗಟ್ಟಲೆ ಪ್ರದರ್ಶನ ಕಾಣುವುದಿಲ್ಲ. ಒಂದು ವಾರ ಮಾತ್ರ ಸಿನಿಮಾ ಪ್ರದರ್ಶನ ಕಾಣಲಿದೆ. ಭಾರತಾದ್ಯಂತ ಸಿನಿಮಾ ರಿಲೀಸ್ ಆದರೂ ಈ ಚಿತ್ರ ಬೆಂಗಳೂರು, ಮುಂಬೈ, ಪುಣೆ, ದೆಹಲಿ, ಕೋಲ್ಕತ್ತಾ, ಹೈದರಾಬಾದ್​, ಚೆನ್ನೈ ಸೇರಿ ಪ್ರಮುಖ 37 ನಗರಗಳಲ್ಲಿ ಮಾತ್ರ ಪ್ರದರ್ಶನ ಕಾಣಲಿದೆ. ಸಿನಿಮಾ ಹೆಚ್ಚಾಗಿ ಮಲ್ಟಿಪ್ಲೆಕ್ಸ್​​ಗಳಲ್ಲಿ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು